Skip to content
The Believer's Library

Biblica® Open Kannada Contemporary Version 2022

Daniel 4 OKCV

Show OKCV only
Verse × ×
1 King Nebuchadnezzar, to all peoples, nations, and languages living throughout the earth: May your peace be multiplied. ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.
2 I am glad to declare the signs and wonders the Most High God has done for me. ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.
3 How great are his signs, and how mighty are his wonders! His kingdom is an everlasting kingdom, and his dominion is from generation to generation. ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು.
4 I, Nebuchadnezzar, was at ease in my house and flourishing in my palace. ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.
5 I saw a dream that frightened me; thoughts on my bed and visions in my head terrified me. ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.
6 So I ordered all Babylon's wise men brought before me to tell me the dream's meaning. ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
7 Then the magicians, enchanters, Babylonians, and astrologers entered. I told them the dream, but they could not interpret it for me. ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
8 Finally Daniel came before me—named Belteshazzar after my god's name, the holy gods' spirit in him—and I told him the dream. ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.
9 Belteshazzar, chief magician, I know the spirit of the holy gods is in you, and no mystery baffles you—tell me the visions of my dream that I saw, and their meaning. “ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.
10 The visions in my mind while in bed: I saw a tree in the middle of the earth, very tall. ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
11 The tree grew and became strong, and its top reached to heaven, and it was visible to the ends of the whole earth. ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು.
12 Its leaves were beautiful and its fruit abundant, and in it was food for all. Wild animals found shade under it, and the birds of the heavens lived in its branches, and all flesh was fed from it. ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.
13 In my visions in bed I saw a watcher, a holy one, coming down from heaven. “ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
14 He shouted: Cut down the tree, chop its branches, strip its leaves, scatter its fruit. Let animals flee from under it, birds from its branches. ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.
15 But leave the stump of its roots in the earth, bound with a band of iron and bronze, in the grass of the field. Let him be drenched with the dew of heaven, and let his portion be with the wild animals in the grass of the earth. ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “ ‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ.
16 Let his human mind be taken away and a beast's mind be given to him, and let seven periods of time pass over him. ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.
17 The sentence is by the decree of the watchers, the decision by the word of the holy ones, so that the living may know that the Most High rules over the kingdom of men and gives it to whom he will and sets over it the lowliest of men.' “ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’
18 This is the dream I, King Nebuchadnezzar, saw. Tell me its meaning, Belteshazzar, for my kingdom's wise men can't explain it, but you can—the spirit of the holy gods is in you. “ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.
19 Then Daniel, called Belteshazzar, was stunned briefly, alarmed by his thoughts. The king said, "Belteshazzar, don't let the dream or its meaning alarm you." Belteshazzar answered, "My lord, may the dream be for your haters, its meaning for your enemies!" ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
20 The tree you saw grew strong, its top reaching heaven, visible to all the earth, ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು.
21 beautiful leaves, abundant fruit, food for all—wild animals lived beneath it, birds of the sky nested in its branches. ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು.
22 It is you, king—you have grown and become strong; your greatness has grown, reaching heaven, your dominion to the ends of the earth. ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.
23 Because the king saw a watcher, a holy one, come down from heaven, saying: Cut down the tree, destroy it—but leave the stump of its roots in the ground, bound with a band of iron and bronze in the field's grass. Let him be drenched with the dew of heaven; his portion with the wild animals, until seven periods of time pass over him. “ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’
24 This is the interpretation, my king: the Most High's decree has come upon my lord the king, “ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:
25 you'll be driven from people to live among wild animals, eating grass like oxen, drenched with the dew of heaven, until seven times pass over you and you know the Most High rules the human kingdom, giving it to whoever he chooses. ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.
26 The command to leave the stump and its roots in the ground: your kingdom will be restored to you once you know Heaven rules. ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.
27 So, king, accept my advice: break from your sins through righteousness, your wrongdoing through mercy to the poor, so your prosperity may continue. ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”
28 All this came upon King Nebuchadnezzar. ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭವಿಸಿತು.
29 Twelve months later, he was walking on the roof of Babylon's royal palace. ಹನ್ನೆರಡು ತಿಂಗಳಾದ ಮೇಲೆ ಅರಸನು ಬಾಬಿಲೋನಿನ ರಾಜ್ಯದ ಅರಮನೆಯ ಮೇಲ್ಗಡೆ ತಿರುಗಾಡಿದನು.
30 The king said, "Is this not great Babylon I built as a royal house by my mighty power, for the glory of my majesty?" ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.
31 The words were still in the king's mouth when a voice fell from heaven: "King Nebuchadnezzar, this is said to you: the kingdom has left you. ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.
32 You'll be driven from people, living with wild animals, eating grass like an ox. Seven periods will pass over you, until you know the Most High rules mankind's kingdom and gives it to whomever he wills." ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.
33 At once the word came true against Nebuchadnezzar: driven from people, he ate grass like cattle, his body soaked by the dew of heaven, until his hair grew like eagle feathers, his nails like bird claws. ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
34 When the days ended, I, Nebuchadnezzar, raised my eyes to heaven, and my reason returned. I blessed the Most High, praised and honored the One who lives forever, whose rule is everlasting, whose kingdom spans every generation. ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.
35 All the inhabitants of the earth are counted as nothing, and he does according to his will among the host of heaven and among the inhabitants of the earth; and no one can hold back his hand or say to him, "What have you done?" ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.
36 Then my sanity returned; my majesty and splendor returned for my kingdom's glory. My advisers and nobles sought me; I was restored over my kingdom, and surpassing greatness was added to me. ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.
37 Now I, Nebuchadnezzar, praise, exalt, and honor Heaven's King, for all his works are right, his ways just; those walking in pride he can humble. ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]