Skip to content
The Believer's Library

Biblica® Open Kannada Contemporary Version 2022

Daniel 5 OKCV

Show OKCV only
Verse × ×
1 King Belshazzar held a great feast for 1,000 nobles, drinking wine in the presence of the 1,000. ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.
2 While tasting the wine, Belshazzar ordered in the gold and silver vessels his father Nebuchadnezzar took from Jerusalem's temple, for the king, his nobles, wives, and concubines to drink from. ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.
3 Then they brought the gold vessels taken from the temple, our Father's house in Jerusalem; the king, his nobles, wives, and concubines drank from them. ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
4 They drank the wine and praised the gods of gold, silver, bronze, iron, wood, and stone. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.
5 Just then a human hand's fingers appeared and wrote on the plaster of the king's palace wall opposite the lampstand, and the king watched the hand writing. ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
6 The king's face changed color, his thoughts terrified him, his hips gave way, and his knees knocked. ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
7 The king shouted for the enchanters, astrologers, and fortune-tellers, telling Babylon's wise men, "Whoever reads this writing and tells me what it means will wear purple, a gold chain on his neck, and rule third in the kingdom." ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.
8 Then all the king's wise men came in, but none could read the writing or tell him its meaning. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.
9 So King Belshazzar grew even more terrified, his face paler still, and his nobles were bewildered. ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.
10 At the king's and his nobles' words, the queen entered the banquet hall, saying, "King, live forever! Don't let your thoughts terrify you or your face turn pale. ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!
11 A man in your kingdom has the spirit of the holy gods. In your father's days he showed insight, understanding, and wisdom like the gods' wisdom. King Nebuchadnezzar your father—your father the king—made him chief of magicians, enchanters, astrologers, and fortune-tellers, ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
12 because extraordinary spirit, knowledge, and understanding—interpreting dreams, explaining riddles, untying knots—were found in this Daniel, whom the king named Belteshazzar. Now call Daniel; he will interpret." ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.
13 Daniel was brought before the king, who asked, "Are you Daniel, one of the Judean exiles my father the king brought from Judah? ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
14 I heard the spirit of the gods is in you—light, understanding, and rare wisdom found in you. ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
15 The wise men and enchanters were brought before me to read this writing and tell me its meaning, but couldn't. ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
16 I've heard you can interpret and untie knots. If you read this writing and tell me its meaning, you'll wear purple, a gold chain on your neck, and rule third in the kingdom." ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
17 Daniel answered the king, "Keep your gifts; give your rewards to another. Still, I will read the king the writing and tell him its meaning. ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.
18 Your Majesty, the Most High our Father gave your father Nebuchadnezzar the kingdom, greatness, glory, and majesty. “ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.
19 Because of the greatness he gave him, all peoples, nations, and languages trembled and feared before him. He killed whom he wished, let live whom he wished, raised whom he wished, humbled whom he wished. ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.
20 When his heart grew proud and his spirit hardened into arrogance, he was deposed from his royal throne and his glory taken away. ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.
21 He was driven from people, his mind made like an animal's; he lived with wild donkeys, was fed grass like an ox, and the dew of heaven soaked him—until he knew the Most High our Father rules the kingdom of men and sets over it whomever he chooses. ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.
22 But you, Belshazzar his son, have not humbled your heart, though you knew all this. “ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ
23 Instead, you lifted yourself against heaven's Sovereign. You had his house's vessels brought before you, and you, your nobles, wives, and concubines drank wine from them. You praised gods of silver, gold, bronze, iron, wood, and stone—gods that cannot see, hear, or know anything. But the One holding your breath in his hand, who owns all your ways—our Father—you have not honored. ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.
24 Therefore he sent the hand that wrote this inscription. ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ.
25 This is the writing that was inscribed: MENE, MENE, TEKEL, PARSIN. “ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್.
26 This is what it means: MENE—our Father counted your kingdom's days and ended it. “ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.
27 TEKEL—you have been weighed on the scales and found wanting. “ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.
28 PERES—your kingdom has been divided and given to the Medes and Persians." “ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.
29 Then Belshazzar gave the order, and they clothed Daniel in purple, put a gold chain on his neck, and proclaimed him third ruler in the kingdom. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.
30 That very night Belshazzar, king of the Babylonians, was killed. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.
31 And Darius the Mede received the kingdom, being about sixty-two years old. ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]