Skip to content
The Believer's Library

Biblica® Open Kannada Contemporary Version 2022

Daniel 6 OKCV

Show OKCV only
Verse × ×
1 Darius appointed 120 satraps over the kingdom, stationed throughout the whole kingdom, ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.
2 and three officials over them, one of them Daniel, so the satraps would answer to them and the king lose nothing. ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.
3 Daniel outshone the administrators and satraps, because an extraordinary spirit was in him, and the king planned to set him over the whole kingdom. ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
4 Administrators and satraps sought grounds to charge Daniel over the kingdom, but found none—no corruption—since he was faithful; no negligence or corruption was found in him. ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
5 Then these men said, "We'll find no charge against Daniel unless we find one in his God's law." ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.
6 So the administrators and satraps went together to the king and said, "King Darius, live forever! ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.
7 All the kingdom's administrators, prefects, satraps, counselors, and governors agreed the king should issue a royal statute and firm decree: whoever petitions any god or man but you, king, for thirty days, will be thrown into the lions' den. ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.
8 Now, king, issue the decree and sign it in writing, unalterable, under the law of the Medes and Persians, which cannot be revoked. ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.
9 So King Darius signed the document and the ordinance." ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.
10 Learning the decree was signed, Daniel went home to his upstairs room, windows open toward Jerusalem, knelt three times daily, and prayed, giving thanks before his Father as always. ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.
11 Then these men came together and found Daniel praying and pleading for mercy before his Father. ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.
12 They approached the king about the decree: "Did you not sign a decree that for thirty days, anyone petitioning any god or man except you, king, would be thrown into the lions' den?" The king answered, "The matter stands, by the law of the Medes and Persians, unchangeable." ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.
13 They told the king, "Daniel, one of Judah's exiles, ignores you, king, and your signed decree—praying three times daily." ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.
14 Hearing this, the king was deeply troubled, determined to save Daniel, and worked until sunset to rescue him. ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.
15 Then these men gathered before the king and said, "Know, king: by law of the Medes and Persians, no decree or edict the king issues can be changed." ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.
16 Then the king gave the command, and they brought Daniel and threw him into the lions' den. The king said to Daniel, "May your God, whom you serve continually, rescue you." ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.
17 A stone was brought, placed over the den's mouth, and sealed by the king with his signet ring and his nobles' rings, so nothing about Daniel could change. ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.
18 Then the king went to his palace and fasted that night; no entertainment was brought before him, and sleep fled from him. ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.
19 Then, at the first light of dawn, the king rose and hurried to the den of lions. ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.
20 Nearing the den, he cried out to Daniel anxiously. The king said to Daniel, "Daniel, servant of the living God, has your God, whom you serve continually, been able to rescue you from the lions?" ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.
21 Then Daniel said to the king, "King, may you live forever! ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.
22 My Father sent his angel and shut the lions' mouths. They haven't harmed me, because I was found innocent before him, and before you, king, I've done no wrong." ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.
23 The king was overjoyed and ordered Daniel lifted from the den. Daniel was lifted out with no injury at all, for he had trusted in his Father. ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.
24 The king ordered the men who had falsely accused Daniel brought and thrown into the lions' den—with their children and wives. Before they reached the bottom, the lions overpowered them and crushed all their bones. ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.
25 Then King Darius wrote to all peoples, nations, and languages living on earth: "May your peace overflow! ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.
26 I decree: in all my kingdom, people must tremble and fear before Daniel's God—the living God, enduring forever. His kingdom will never be destroyed; his rule never ends. “ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.
27 He rescues and delivers; he works signs and wonders in the heavens and on the earth; he is the one who rescued Daniel from the power of the lions." ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು, ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ. ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ ಬಿಡಿಸಿದವರೂ ಅವರೇ!”
28 So this Daniel thrived in the reign of Darius and of Cyrus the Persian. ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]