Skip to content
The Believer's Library

Biblica® Open Kannada Contemporary Version 2022

Daniel 7 OKCV

Show OKCV only
Verse × ×
1 In Belshazzar king of Babylon's first year, Daniel dreamed and saw visions in his head on his bed. He wrote the dream, summarizing the matters. ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.
2 Daniel said: In my night vision I saw the four winds of heaven churning the great sea. ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು.
3 And four great beasts came up out of the sea, each different from the others. ಒಂದಕ್ಕೊಂದು ಬೇರೆ ಬೇರೆ ರೂಪದ ನಾಲ್ಕು ದೊಡ್ಡ ಮೃಗಗಳು ಸಮುದ್ರದೊಳಗಿಂದ ಮೇಲೆ ಬಂದವು.
4 The first was like a lion, with eagle's wings. I watched until its wings were torn off; it was lifted off the ground, set on two feet like a human, and given a human heart. “ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.
5 A second beast appeared, like a bear, raised up on one side, three ribs in its mouth between its teeth. It was told, 'Get up, eat much flesh.' “ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.
6 After this I watched: another beast, like a leopard, with four bird wings on its back, four heads, and given authority to rule. “ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.
7 After this, in my night vision, a fourth beast appeared—dreadful, terrifying, incredibly strong, with huge iron teeth. It devoured, crushed, and trampled the rest underfoot, different from every beast before it, with ten horns. “ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.
8 While I watched the horns, another—a little horn—rose among them, and three of the first horns were uprooted before it. It had eyes like human eyes and a mouth speaking boastfully. “ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.
9 As I watched, thrones were set in place, and the Ancient of Days, our Father, took his seat. His clothing was white as snow; the hair of his head was like pure wool. His throne was flaming with fire, and its wheels were all ablaze. “ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
10 A river of fire flowed out, streaming from before him. Thousands of thousands served him, and 10,000 upon 10,000 stood before him. The court sat, and the books were opened. ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.
11 I watched because of the boastful words the horn spoke; I watched until the beast was killed, its body destroyed and given to the burning fire. “ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
12 The rest of the beasts lost authority but had their lives prolonged for a set time and season. ಮಿಕ್ಕ ಮೃಗಗಳನ್ನು ಅವುಗಳ ಅಧಿಕಾರದಿಂದ ಹೊರಹಾಕಲಾಯಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವವರೆಗೂ ಅವುಗಳ ಜೀವವನ್ನು ಉಳಿಸಿದರು.
13 In my night vision I looked, and there before me, coming with the clouds of heaven, was one like a son of man. He approached the Ancient of Days, our Father, and was led into his presence. “ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
14 And he was given authority, glory, and a kingdom, so that all peoples, nations, and languages would serve him. His dominion is an everlasting dominion that will not pass away, and his kingdom is one that will never be destroyed. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.
15 I, Daniel, was troubled in spirit, and the visions that passed through my mind alarmed me. “ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.
16 I approached one of those standing there and asked him the truth about all this. He told me, revealing its interpretation. ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.
17 'These four great beasts are four kings who will rise from the earth. ‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು.
18 But the holy ones of the Most High, our Father, will receive and possess the kingdom forever, forever and ever. ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’
19 Then I wanted the truth about the fourth beast, different from all others—most terrifying, iron teeth, bronze claws—devouring, crushing, and trampling what remained underfoot. “ಆಮೇಲೆ ನಾಲ್ಕನೆಯ ಮೃಗವು ಎಲ್ಲದರಲ್ಲಿ ವ್ಯತ್ಯಾಸವಾಗಿಯೂ, ಅತಿ ಭಯಂಕರವಾಗಿಯೂ, ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ, ಕಂಚಿನ ಉಗುರುಗಳುಳ್ಳದ್ದಾಗಿಯೂ ತುಂಡುತುಂಡು ಮಾಡಿ, ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥದ್ದೂ ಆಗಿದೆ.
20 I also wanted to know about the ten horns on its head, and the other horn that came up before which three fell—the horn with eyes and a boastful mouth, appearing bigger than the rest. ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.
21 As I watched, this horn was waging war against the holy ones and was defeating them, ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧ ಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು.
22 until the Ancient of Days, our Father, came, judgment was given for the holy ones of the Most High, our Father, and the holy ones' time came to possess the kingdom.' ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.
23 He said: 'The fourth beast is a fourth kingdom on earth, unlike all other kingdoms. It will devour, trample, and crush the whole earth. “ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.
24 The ten horns: ten kings will arise from this kingdom. After them another arises, different from the first, and subdues three kings. ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
25 He will speak words against the Most High, our Father, oppress the holy ones of the Most High, our Father, and try to change the set times and the law. The holy ones will be handed to him for a time, times, and half a time. ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.
26 But the court will sit in judgment, and his dominion will be taken away, consumed and destroyed forever. “ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.
27 Kingdom, dominion, and greatness of all kingdoms under heaven will be given to the people, the holy ones of the Most High, our Father. His kingdom is a kingdom without end; all rulers will serve and obey him.' ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’
28 This ends the matter. I, Daniel—my thoughts terrified me, my face turned pale, but I kept it to myself. “ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]