Skip to content
The Believer's Library

Biblica® Open Kannada Contemporary Version 2022

Daniel 8 OKCV

Show OKCV only
Verse × ×
1 In King Belshazzar's third year, a vision appeared to me, Daniel, after the earlier one. ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ, ಮೊದಲಿನ ದರ್ಶನದಂಥ ಇನ್ನೊಂದು ದರ್ಶನವೂ ದಾನಿಯೇಲನಾದ ನನಗೆ ಕಾಣಿಸಿತು.
2 In the vision I was in the citadel of Susa, in Elam province; and in the vision I was beside the Ulai Canal. ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.
3 I looked up: a ram stood before the canal, two tall horns—one taller than the other, the taller coming up last. ಆಗ ನಾನು ಕಣ್ಣೆತ್ತಿ ನೋಡಿದಾಗ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ, ಇನ್ನೊಂದಕ್ಕಿಂತ ಒಂದು ಉದ್ದವಾಗಿದ್ದವು. ಆ ದೊಡ್ಡ ಕೊಂಬು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
4 I watched the ram charging west, north, and south. No animal could stand against him, none could rescue from his power. He did as he pleased and grew great. ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.
5 As I was considering this, suddenly a male goat came from the west across the whole earth without touching the ground; it had a prominent horn between its eyes. ನಾನು ಇದರ ಬಗ್ಗೆ ಆಲೋಚಿಸಲಾಗಿ ಕೂಡಲೆ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದೆ ಭೂಮಂಡಲವನ್ನೆಲ್ಲಾ ದಾಟಿಕೊಂಡು ಬಂದಿತು. ಆ ಹೋತಕ್ಕೆ ಕಣ್ಣುಗಳ ಮಧ್ಯೆ ವಿಶೇಷವಾದ ಕೊಂಬು ಇತ್ತು.
6 He came to the two-horned ram I saw standing by the canal and ran at it in raging power. ನಾನು ನದಿಯ ಹತ್ತಿರ ಕಂಡ ಆ ಎರಡು ಕೊಂಬಿನ ಟಗರಿನ ಬಳಿಗೆ ಬಂದು ಪರಾಕ್ರಮದಿಂದ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.
7 I saw him reach the ram, enraged, striking and shattering its two horns. The ram had no strength to stand against him; the goat threw it down and trampled it, and no one could rescue the ram from his power. ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.
8 The goat grew very great, but at its full strength the great horn broke, and four prominent horns grew up in its place toward the four winds of heaven. ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.
9 From one of them a little horn came out, growing very great toward the south, east, and the glorious land. ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
10 It grew great, up to the host of heaven, casting down to earth some of the host and of the stars, and trampled them. ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು.
11 It made itself great against the Prince of the host; the Prince's regular offering was removed and his sanctuary's place thrown down. ಅದು ಯೆಹೋವ ದೇವರ ಸೈನ್ಯದ ಅಧಿಪತಿಗೆ ವಿರೋಧವಾಗಿ ಬಲಗೊಂಡು, ನಿತ್ಯ ಯಜ್ಞವನ್ನು ಯೆಹೋವ ದೇವರಿಗೆ ಸಲ್ಲದಂತೆ ಮಾಡಿ, ಅವನ ಪವಿತ್ರ ಸ್ಥಾನವನ್ನು ಕೆಡವಿ ಹಾಕಲಾಯಿತು.
12 Because of wrongdoing, the army was handed over to it with the daily offering; it threw truth to the ground and acted and thrived. ಪ್ರತಿದಿನ ಯಜ್ಞದ ಸಂಗಡ ಯೆಹೋವ ದೇವರ ಸೈನ್ಯವೂ ಸಹ ಅಪರಾಧದ ನಿಮಿತ್ತವಾಗಿ ಅದಕ್ಕೆ ಕೊಡಲಾಯಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ, ಇಷ್ಟಾರ್ಥವನ್ನು ಪೂರೈಸಿಕೊಂಡು ಅನುಕೂಲ ಪಡೆಯಿತು, ವೃದ್ಧಿಗೆ ಬಂದಿತು.
13 Then I heard a holy one speaking, and another holy one asked the speaker, "How long is the vision—the regular offering, the wrongdoing that brings desolation, sanctuary and host handed over to trampling?" ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು.
14 He told me, "For 2,300 evenings and mornings; then the sanctuary will be restored to its rightful state." ಅವನು ನನಗೆ, “ಎರಡು ಸಾವಿರದ ಮುನ್ನೂರು ಸಾಯಂಕಾಲ ಹಾಗೂ ಪ್ರಾತಃಕಾಲದವರೆಗೂ ನಡೆಯುವುವು. ಅನಂತರ ಪರಿಶುದ್ಧ ಸ್ಥಳವು ಪುನಃ ನ್ಯಾಯಸ್ಥಾಪನೆಯಾಗುವುದು,” ಎಂದು ಹೇಳಿದನು.
15 As I, Daniel, watched the vision seeking to understand, one like a man stood before me. ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ, ಅದರ ಅರ್ಥವನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ, ಮನುಷ್ಯನ ರೂಪದಂತಿರುವ ಒಬ್ಬನು ನನ್ನ ಮುಂದೆ ನಿಂತಿದ್ದನು.
16 I heard a human voice from the Ulai calling, "Gabriel, make this man understand the vision." ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
17 He came near where I stood, and as he drew close I was terrified and fell facedown. He said to me, "Understand, son of man: the vision is for the time of the end." ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.
18 As he spoke, I fell into a deep sleep, face to the ground; but he touched me and set me on my feet. ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ, ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢನಿದ್ರೆಯಲ್ಲಿ ಬಿದ್ದಿದ್ದೆನು. ಆದರೆ ಅವನು ನನ್ನನ್ನು ಮುಟ್ಟಿ, ಎದ್ದು ನಿಲ್ಲುವಂತೆ ಮಾಡಿದನು.
19 He said, "Listen, I will tell you what will happen in the later time of the wrath, for it concerns the appointed time of the end. ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.
20 The ram you saw with the two horns is the kings of Media and Persia. ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು, ಮೇದ್ಯ ಮತ್ತು ಪಾರಸಿಯ ರಾಜರು.
21 The shaggy goat is Greece's king; the great horn between his eyes is the first king. ಆ ಒರಟು ಹೋತವು ಗ್ರೀಕಿನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
22 The broken horn, four rising in its place: four kingdoms rise from his nation, but without his power. ಆ ಕೊಂಬು ಮುರಿದುಹೋದ ಮೇಲೆ, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದಂತೆಯೇ, ಆ ಜನಾಂಗದಿಂದ ನಾಲ್ಕು ರಾಜ್ಯಗಳು ಉದಯಿಸುವುವು. ಆದರೆ ಮೊದಲನೆಯ ಅರಸನಿಗೆ ಇದ್ದಷ್ಟು ಅಧಿಕಾರ ಅವರಿಗೆ ಇರುವುದಿಲ್ಲ.
23 At the end of their reign, when sinners reach full measure, a fierce-faced king skilled in intrigue will arise. “ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.
24 His power will be great—but not his own—and he will cause terrible destruction, prosper, and act. He will destroy the mighty and the people of the holy ones. ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.
25 By cunning he makes deceit thrive under his hand, and in his heart he lifts himself up. Without warning he destroys many, and rises against the Prince of princes—yet he will be broken, by no human hand. ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.
26 The vision of the evenings and mornings told to you is true, but seal it up, for it concerns days far off." “ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”
27 I, Daniel, was overcome and sick for days. Then I got up and did the king's business, but the vision left me appalled, beyond understanding. ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]