Skip to content
The Believer's Library

Biblica® Open Kannada Contemporary Version 2022

Daniel 9 OKCV

Show OKCV only
Verse × ×
1 In the first year of Darius son of Xerxes, a Mede, made king over the Babylonian realm. ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,
2 In his reign's first year, I, Daniel, understood from the books how many years our Father told Jeremiah the prophet: seventy, to complete Jerusalem's ruins. ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.
3 So I turned my face to the Sovereign Father, to seek him in prayer and pleading, with fasting, sackcloth, and ashes. ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.
4 I prayed to my Father, confessing: "Sovereign Father, great and awesome, keeping covenant and faithful love for those loving him and keeping his commands, ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,
5 we have sinned, done wrong, done evil, rebelled, turning from your commands and rulings. ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.
6 We haven't listened to your servant prophets speaking in your name to our kings, princes, ancestors, and all the land's people. ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.
7 Righteousness is yours, Sovereign Father, but ours is open shame today—Judah's people, Jerusalem's residents, all Israel, near and far, in every land where you drove them for their unfaithfulness to you. “ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.
8 O our Father, open shame belongs to us—our kings, princes, and ancestors—because we sinned against you. ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.
9 To the Sovereign Father belong mercy and forgiveness, for we have rebelled against him, ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.
10 and we disobeyed our Father's voice to walk in his laws set before us through his servants the prophets. ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾಗಲಿಲ್ಲ, ಅವರು ತಮ್ಮ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ನೀಡಿದ ನಿಯಮಗಳನ್ನು ಪಾಲಿಸಲಿಲ್ಲ.
11 All Israel broke your law and turned away, refusing to obey your voice. So the curse and the sworn oath written in the Law of Moses, our Father's servant, poured out on us, because we sinned against him. ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.
12 He confirmed his words against us and our judges who judged us, bringing great disaster on us; nothing under all heaven matches what happened to Jerusalem. ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.
13 As written in the Law of Moses, all this disaster came on us; yet we have not sought our Father's favor by turning from our sins and understanding your truth. ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.
14 So our Father readied the disaster and brought it on us, for our Father is righteous in all he does; but we did not obey his voice. ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.
15 And now, Sovereign Father, you brought your people out of Egypt with a strong hand and made yourself a name lasting to this day—we sinned, we did wrong. “ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
16 Sovereign Father, by all your righteous acts, turn your anger and rage from your city Jerusalem, your holy mountain—for our sins and our ancestors' wrongdoing made Jerusalem and your people a disgrace to all around us. ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.
17 Now, our Father, hear your servant's prayer and pleas, and shine your face on your desolate sanctuary, for your own sake, Sovereign Father. “ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ.
18 Turn your ear toward us, my Father, and hear; open your eyes, see our ruins and the city called by your name. We bring our pleas before you not for our righteousness but your great mercy. ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.
19 Sovereign Father, hear! Sovereign Father, forgive! Sovereign Father, listen and act! Don't delay, for your sake, my Father, because your city and your people bear your name." ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”
20 Still speaking, praying, confessing my sin and my people Israel's sin, laying my plea before my Father for my Father's holy hill, ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,
21 while I was still praying, Gabriel, the man I saw earlier in the vision, reached me, flying fast, about the time of the evening offering. ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,
22 He gave me insight, speaking with me and saying, "Daniel, I have now come out to give you insight and understanding. ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.
23 As your pleas began, a word went out, and I came to tell you, for you are deeply loved. So weigh the word and understand the vision: ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.
24 "Seventy weeks are decreed for your people and your holy city: to end wrongdoing, finish sin, atone for guilt, bring in everlasting righteousness, seal vision and prophet, and anoint a most holy place. “ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
25 Know therefore and understand: from the time the command goes out to restore and rebuild Jerusalem until the coming of the Anointed One, the Prince, there will be seven weeks and sixty-two weeks. It will be rebuilt with streets and a moat, but in troubled times. “ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.
26 And after the sixty-two weeks the Anointed One will be cut off and will have nothing. The people of the prince who is to come will destroy the city and the sanctuary. Its end will come like a flood, and to the end there will be war; desolations are decreed. ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.
27 He will confirm a covenant with many for one week; mid-week he will stop sacrifice and offering. On a temple wing he will set up an abomination that causes desolation, until the decreed end pours on the desolator." ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]