Skip to content
The Believer's Library

Biblica® Open Kannada Contemporary Version 2022

Deuteronomy 2 OKCV

Show OKCV only
Verse × ×
1 Then we turned and traveled toward the wilderness by way of the Red Sea, as our Father told me, and circled Mount Seir for many days. ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.
2 Then our Father said to me, ಆಮೇಲೆ ಯೆಹೋವ ದೇವರು ನನಗೆ,
3 "You have gone around this hill country long enough. Turn northward. “ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.
4 Command the people: You are crossing the territory of your brothers, Esau's descendants, who live in Seir. They will fear you—be very careful. ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
5 Do not provoke them; I will not give you any of their land, not even a footstep's width, since I have given Mount Seir to Esau as his possession. ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.
6 Buy food from them for silver to eat, and also buy water from them for silver to drink. ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’ ”
7 "For your Father has blessed you in all the work of your hands. He has known your journey through this great wilderness. These forty years your Father has been with you; you have lacked nothing." ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.
8 So we passed by our brothers, the descendants of Esau who live in Seir, away from the Arabah road that comes up from Elath and Ezion-geber. Then we turned and went on toward the wilderness of Moab. ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.
9 And our Father said to me, "Do not harass Moab or provoke them to battle, for I will not give you any of their land as a possession, since I have given Ar to Lot's descendants as a possession." ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.
10 (The Emim formerly lived there, a large and powerful people, as tall as the Anakim. ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.
11 Like the Anakim, they too are counted as Rephaim, but the Moabites call them Emim. ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
12 Horites once lived in Seir, but Esau's descendants drove out and destroyed them, settling in their place—just as Israel did in the land our Father gave them.). ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.
13 Now get moving and cross the Wadi Zered." So we crossed the Wadi Zered. “ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
14 From Kadesh-barnea to crossing the Wadi Zered took thirty-eight years, until the whole generation of fighting men had died out of the camp, as our Father had sworn to them. ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.
15 Indeed, the hand of our Father was against them, rooting them out from the camp until they perished. ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.
16 So when all the fighting men had finally perished and died from among the people, ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,
17 our Father said to me, ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ,
18 "Today you are to cross the boundary of Moab at Ar. “ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು.
19 When you come near the Ammonites, do not attack or provoke them, for I will not give you any of their land as a possession—I gave it to Lot's descendants as their possession." ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.
20 (That too counts as Rephaim land—Rephaim lived there before, though Ammonites call them Zamzummim, ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
21 a large and powerful people, tall as the Anakim. But our Father destroyed them before the Ammonites, who drove them out and settled in their place, ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.
22 as he did for Esau's descendants living in Seir, when he destroyed the Horites before them; they drove them out and settled in their place, remaining to this day. ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.
23 The Avvim lived in villages as far as Gaza; Caphtorim, who came from Caphtor, destroyed them and settled in their place.). ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.
24 "Set out and cross the Wadi Arnon. Look, I have given Sihon the Amorite, king of Heshbon, and his land into your hand. Begin to take possession—engage him in battle. “ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.
25 Today I will begin putting dread and fear of you on every people under heaven. They will hear the report of you, tremble, and writhe in anguish because of you." ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.
26 I sent messengers from the wilderness of Kedemoth to Sihon king of Heshbon with words of peace, saying, ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,
27 "Let me pass through your land. I will stay only on the road, turning aside neither right nor left. “ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.
28 Sell me food for money to eat, give me water for money to drink—only let me pass through on foot, ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.
29 as Esau's descendants who live in Seir and the Moabites who live in Ar did for me, until I cross the Jordan into the land our Father is giving us." ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.
30 But Sihon king of Heshbon refused to let us pass, for our Father hardened his spirit and stiffened his heart, to hand him over to you, as he has done this day. ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.
31 And our Father said to me, "Look, I've begun giving you Sihon and his land. Begin now taking possession—possess his land." ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು.
32 Then Sihon came out against us, he and all his people, to fight at Jahaz. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.
33 And our Father gave him to us, and we struck him down, his sons, and all his people. ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.
34 At that time we captured all his cities and completely destroyed every city—men, women, children—leaving no survivor. ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.
35 We plundered only the livestock for ourselves, plus the spoil of the cities we captured. ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.
36 From Aroer on the Wadi Arnon's edge, and from the town in the valley, to Gilead, no town was too strong for us; Our Father gave them all to us. ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.
37 But you did not go near the Ammonites' land, all along the banks of the Wadi Jabbok and the hill country's towns, just as our Father commanded us. ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]