Skip to content
The Believer's Library

Biblica® Open Kannada Contemporary Version 2022

Deuteronomy 3 OKCV

Show OKCV only
Verse × ×
1 We turned and took the road to Bashan, and Og king of Bashan, with all his people, came out to fight us at Edrei. ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು.
2 And our Father told me, "Don't fear him, for I've given him, all his people, and his land to you; do to him as you did to Sihon king of the Amorites, who lived at Heshbon." ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.
3 So our Father also gave us Og king of Bashan and all his people, and we struck them down, leaving no survivor. ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು.
4 At that time we captured all his cities—all sixty, none untaken—the whole region of Argob, Og's kingdom in Bashan. ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
5 All these were cities fortified with high walls and barred gates, besides a great many unwalled villages. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು.
6 We devoted them to destruction, as with Sihon king of Heshbon, devoting to destruction every city—its men, women, and children. ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು.
7 But all the livestock and the plunder of the cities we took as spoil for ourselves. ಎಲ್ಲಾ ಪಶುಗಳನ್ನೂ ಪಟ್ಟಣಗಳನ್ನೂ ಸೂರೆಮಾಡಿಬಿಟ್ಟೆವು.
8 So at that time we took the land from these two Amorite kings across the Jordan, from the Arnon Valley to Mount Hermon. ಆ ಕಾಲದಲ್ಲಿ ನಾವು ಯೊರ್ದನ್ ನದಿಯ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರಸರ ಕೈಯಿಂದ ಸ್ವಾಧೀನಮಾಡಿಕೊಂಡೆವು.
9 (the Sidonians call Hermon Sirion, while the Amorites call it Senir), ಹೆರ್ಮೋನಿಗೆ ಸೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಕರೆಯುತ್ತಾರೆ.
10 all plateau cities, all Gilead, all Bashan to Salecah and Edrei—Og's kingdom cities in Bashan. ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.
11 (Only Og king of Bashan was left of the Rephaim's remnant. His bed was an iron bed; isn't it in Rabbah of the Ammonites? It was about thirteen and a half feet long and six feet wide.). ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.
12 This land we took then: from Aroer on the Arnon Valley's edge, plus half the Gilead hill country and its cities, I gave to the Reubenites and Gadites. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು.
13 I gave the rest of Gilead and all Bashan—Og's kingdom—to the half-tribe of Manasseh: the whole region of Argob. (All that part of Bashan was called the land of the Rephaim. ಮಿಕ್ಕ ಗಿಲ್ಯಾದನ್ನು ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಗೋತ್ರಕ್ಕೆ ಕೊಟ್ಟೆನು. ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಸೀಮೆಯನ್ನೂ, ರೆಫಾಯರ ದೇಶವೆಂದು ಎನಿಸಿಕೊಳ್ಳುವ ಸಮಸ್ತ ಬಾಷಾನನ್ನೂ ಅವರಿಗೆ ಕೊಟ್ಟೆನು.
14 Jair son of Manasseh took the whole region of Argob to the Geshurite and Maacathite border, and named Bashan after himself, Havvoth-jair, to this day.). ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.
15 And to Machir I gave Gilead. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
16 To the Reubenites and Gadites I gave from Gilead to the Arnon Valley—its middle the border—to the Jabbok River, the Ammonites' border. ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ.
17 Also the Arabah, the Jordan its border, from Chinnereth to the Sea of the Arabah (the Dead Sea), below Pisgah's slopes, eastward. ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.
18 At that time I ordered you: "Your Father gave you this land to possess; all your fighting men must cross armed ahead of your brothers, the Israelites. ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.
19 Only your wives, children, and livestock—I know you have much livestock—stay in the cities I gave you, ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ.
20 until our Father gives your brothers rest as he has you, and they too take the land your Father is giving them beyond the Jordan. Then each of you returns to the possession I gave you." ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”
21 I commanded Joshua then: "Your own eyes saw all your Father did to these two kings. Your Father will do so to all the kingdoms you're crossing into. ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.
22 Don't be afraid of them, for your Father himself fights for you." ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.
23 And I pleaded with our Father at that time, saying, ಆ ಕಾಲದಲ್ಲಿ ನಾನು ಯೆಹೋವ ದೇವರಿಗೆ:
24 "My Sovereign Father, you've begun showing your servant your greatness and strong hand. What god in heaven or earth can do deeds and mighty acts like yours? “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ?
25 Please let me cross over and see the good land beyond the Jordan, this good highland, and Lebanon." ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.
26 But our Father was angry with me because of you and would not listen to me; our Father said to me, "Enough! Don't speak to me about this again. ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ.
27 Climb Pisgah's summit, raise your eyes west, north, south, and east, and see with your own eyes, for you won't cross this Jordan. ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.
28 But commission Joshua, encourage and strengthen him, for he will cross ahead of this people and give them the land you will see as their inheritance." ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.
29 So we remained in the valley opposite Beth-peor. ಆಗ ನಾವು ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]