Skip to content
The Believer's Library

Biblica® Open Kannada Contemporary Version 2022

Ecclesiastes 1 OKCV

Show OKCV only
Verse × ×
1 The words of the Teacher, son of David, king in Jerusalem. ದಾವೀದನ ಮಗನೂ ಯೆರೂಸಲೇಮಿನ ಅರಸನೂ ಆದ ಪ್ರಸಂಗಿಯ ಮಾತುಗಳು:
2 "Utterly fleeting," says the Teacher, "utterly fleeting! Everything is fleeting." “ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”
3 What does a person gain from all the labor at which they toil under the sun? ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸಗಳಿಂದ ಅವನಿಗೆ ಲಾಭವೇನು?
4 A generation goes, and a generation comes, but the earth remains forever. ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.
5 The sun rises and the sun sets, and hurries back to the place where it rises. ಸೂರ್ಯನು ಉದಯಿಸುತ್ತಾನೆ, ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಳಕ್ಕೆ ಆತುರದಿಂದ ಹಿಂದಿರುಗುತ್ತಾನೆ.
6 The wind blows to the south and turns to the north; round and round it goes, ever returning on its circuits. ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.
7 All the streams run to the sea, yet the sea is never full; the streams return to their source and flow again. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ, ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ.
8 All things are wearisome, more than anyone can express; the eye is not satisfied with seeing, nor the ear filled with hearing. ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.
9 What has been is what will be, and what has been done is what will be done; there is nothing new under the sun. ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
10 Is there anything anyone can point to and say, "Look, this is new"? It was already here, in the ages before us. “ನೋಡು, ಇದು ಹೊಸದು,” ಎಂದು ಯಾವ ವಿಷಯವಾಗಿ ಹೇಳಬಹುದೋ? ಅದು ನಮಗಿಂತ ಮುಂಚೆ ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
11 There is no remembrance of those who came before, and even those yet to come will not be remembered by those who follow them. ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ. ಮುಂದಿನ ಕಾಲದಲ್ಲಿ ಬರುವವರ ಜ್ಞಾಪಕವು ಅವುಗಳ ಮುಂದಿನ ಕಾಲದ ಜನರಿಗೆ ಇರುವುದಿಲ್ಲ.
12 I, the Teacher, was king over Israel in Jerusalem. ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರ ಮೇಲೆ ಅರಸನಾಗಿದ್ದೆ.
13 I gave my heart to seek and explore by wisdom all that is done under heaven—a miserable task God has given mankind to struggle with. ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.
14 I saw all the deeds done under the sun, and look—it is all fleeting, a chasing after wind. ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.
15 What is crooked cannot be made straight, and what is lacking cannot be counted. ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದು ಅಸಾಧ್ಯ.
16 I told myself, "Look, I have grown great and gained more wisdom than all who ruled Jerusalem before me; my heart has seen much wisdom and knowledge." ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”
17 I set my mind to know wisdom, and madness and foolishness; I learned this too is a chasing after the wind. ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.
18 For with much wisdom comes much grief, and the more knowledge, the more sorrow. ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]