Skip to content
The Believer's Library

Biblica® Open Kannada Contemporary Version 2022

Ecclesiastes 3 OKCV

Show OKCV only
Verse × ×
1 For everything there is a season, and a time for every matter under heaven: ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.
2 a time to be born, and a time to die; a time to plant, and a time to uproot what is planted; ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.
3 a time to kill, and a time to heal; a time to tear down, and a time to build up; ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.
4 a time to weep, and a time to laugh; a time to mourn, and a time to dance; ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.
5 a time to throw away stones, and a time to gather stones together; a time to embrace, and a time to refrain from embracing; ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.
6 a time to seek, and a time to lose; a time to keep, and a time to throw away; ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.
7 a time to tear, and a time to sew; a time to be silent, and a time to speak; ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.
8 a time to love, and a time to hate; a time for war, and a time for peace. ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ.
9 What gain has the worker from his toil? ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ?
10 I have seen the task that God has given people to keep them busy. ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ.
11 He made everything beautiful in its time, and set eternity in the human heart—yet no one can grasp what God has done from start to end. ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.
12 I know nothing is better for them than to enjoy life and do good while they live. ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.
13 Also, that everyone eat, drink, and find satisfaction in all their work—this is God's gift. ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.
14 I know all God does lasts forever; nothing can be added, nothing removed. He has done it so people will fear before him. ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.
15 What is has already been, and what will be has already been; and God seeks out what was driven away. ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು.
16 I also saw under the sun: evil in the place of judgment, and evil in the place of righteousness. ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.
17 I said in my heart: "God will judge the righteous and the wicked, for there's a time for every matter and every deed, there." ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”
18 I said in my heart: "God tests people, so that they may see they're just animals." ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.
19 Humans and animals share one fate: one dies as the other dies; both have the same breath. Humans have no advantage over animals—all is vapor. ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.
20 All go to one place; all came from the dust, and all return to the dust. ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.
21 Who knows whether the human spirit goes up, and whether the animal's spirit goes down to the earth? ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”
22 So I saw nothing is better than a person rejoicing in their work, since that is their lot. For who can show them what comes after them? ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]