Skip to content
The Believer's Library

Biblica® Open Kannada Contemporary Version 2022

Ecclesiastes 4 OKCV

Show OKCV only
Verse × ×
1 Again I looked and saw all the oppression under the sun: the oppressed were in tears, with no one to comfort them; their oppressors held the power, and still no comforter. ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.
2 So I declared the dead, who had already died, happier than the living, who are still alive. ಆದಕಾರಣ ನಾನು ಇದನ್ನು ನೋಡಿ ಜೀವದಿಂದ ಇರುವವರಿಗಿಂತ, ಮೃತಪಟ್ಟವರೇ ಮೇಲು ಎಂದು ನಾನು ತೀರ್ಮಾನಿಸಿದೆ.
3 Better than both is the one not yet born, who hasn't seen the evil done under the sun. ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು.
4 I saw all labor and skill come from one neighbor's envy of another. This too is fleeting, a chasing after wind. ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.
5 The fool folds his hands and ruins himself. ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.
6 Better one handful with tranquility than two handfuls with toil and a chasing after the wind. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
7 Again I saw something fleeting under the sun: ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು:
8 A man alone, no companion, no son or brother; his labor has no end, yet his eyes never fill with wealth. "For whom am I working," he asks, "denying myself good?" This too is a breath—a bad task. ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.
9 Two are better than one, because they have a good return for their labor: ಒಬ್ಬನಿಗಿಂತ ಇಬ್ಬರು ಲೇಸು, ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
10 If one falls, the other lifts him up. But pity the one who falls alone, with no one to help him up. ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ ಅವನ ಗತಿ ದುರ್ಗತಿಯೇ ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
11 Also, if two lie down together, they will keep warm. But how can one keep warm alone? ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?
12 One alone can be overpowered; two can resist. A cord of three strands is not quickly broken. ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.
13 Better a poor, wise youth than an old, foolish king who no longer knows to take warning. ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.
14 The youth may have come from prison to reign, or he may have been born poor within that same kingdom. ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.
15 I saw all the living who move about under the sun following the youth, the king's successor. ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.
16 Countless were all the people who came before him. Yet those who came later were not pleased with him. This too is fleeting, a chasing after wind. ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]