Skip to content
The Believer's Library

Biblica® Open Kannada Contemporary Version 2022

Ecclesiastes 5 OKCV

Show OKCV only
Verse × ×
1 Guard your steps entering the house of God. Draw near to listen, not to offer fools' sacrifice—they don't know they're doing evil. ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.
2 Don't rush your mouth, and don't let your heart hurry to speak before God—God is in heaven, you're on earth, so keep your words few. ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
3 For a dream comes from too much activity, and a fool's voice from too many words. ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ.
4 When you vow a vow to God, don't delay paying it—he has no delight in fools. Pay what you vow. ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.
5 It is better not to vow than to vow and not fulfill it. ಹರಕೆಮಾಡಿ ತೀರಿಸದೆ ಇರುವುದಕ್ಕಿಂತ, ಹರಕೆ ಮಾಡದೆ ಇರುವುದು ಒಳ್ಳೆಯದು.
6 Don't let your mouth make you sin, or tell the messenger it was a mistake. Why should God be angry at your voice and destroy your handiwork? ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?
7 For in many dreams and many words there is fleeting vapor. Therefore fear God. ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.
8 If you see the poor oppressed, and justice and righteousness violated in a province, don't be surprised—one official is watched by a higher one, and higher ones stand over them. ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.
9 Yet the profit of the land is for everyone; even the king is served by the field. ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.
10 Whoever loves money never has enough; whoever loves wealth never has enough income. This too is fleeting. ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ.
11 As wealth grows, so do those who consume it—what gain for its owner but watching it with his eyes? ಸೊತ್ತು ಹೆಚ್ಚಿದರೆ, ಅದನ್ನು ಅನುಭವಿಸುವವರು ಹೆಚ್ಚಾಗುವರು. ಯಜಮಾನರು ಅದನ್ನು ತಮ್ಮ ಕಣ್ಣಿಂದ ನೋಡುವುದೇ ಅವರಿಗಾಗುವ ಲಾಭ, ಬೇರೆ ಯಾವ ಪ್ರಯೋಜನವಿದೆ?
12 A worker's sleep is sweet, whether he eats little or much; the rich man's abundance won't let him sleep. ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು.
13 I have seen a sickening evil under the sun: wealth kept by its owner, to his harm. ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.
14 That wealth was lost in a bad venture, and when he fathered a son he had nothing left to leave him. ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.
15 As he came from his mother's womb, naked he returns, going as he came, taking nothing from his labor to carry in his hand. ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು ತೆಗೆದುಕೊಂಡು ಹೋಗುವುದಿಲ್ಲ.
16 This too is a bitter evil: just as he came, so he goes. What does he gain from toiling for wind? ಇದು ಕೂಡ ವ್ಯಸನಕರವಾದ ಕೇಡು: ಮನುಷ್ಯನು ಹೇಗೆ ಬಂದನೋ, ಹಾಗೆಯೇ ಹೋಗುವನು. ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ?
17 All his days he eats in darkness, with much frustration, sickness, and anger. ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
18 This I have seen: it is good and fitting to eat, drink, and see good in all the labor one labors at under the sun through the few days of life God gives—for that is one's lot. ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.
19 Also, when God gives someone wealth, possessions, and power to enjoy them, to accept their portion and find joy in their labor—that is God's gift. ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.
20 He will seldom recall the days of his life, since God keeps him busy with the joy of his heart. ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]