Skip to content
The Believer's Library

Biblica® Open Kannada Contemporary Version 2022

Ecclesiastes 7 OKCV

Show OKCV only
Verse × ×
1 A good name is better than fine perfume, and the day of death than the day of birth. ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.
2 It is better to go to the house of mourning than to go to the house of feasting, for that is the end of everyone, and the living should take it to heart. ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.
3 Sorrow is better than laughter, for a sad face is good for the heart. ನಗೆಗಿಂತ ದುಃಖವು ವಾಸಿ, ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ.
4 The heart of the wise is in the house of mourning, but the heart of fools is in the house of pleasure. ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು, ಆದರೆ ಮೂಢರ ಹೃದಯವು ಉಲ್ಲಾಸದ ಮನೆಯಲ್ಲಿರುವುದು.
5 It is better to hear the rebuke of the wise than to hear the song of fools. ಮೂಢರ ಹಾಡನ್ನು ಕೇಳುವುದಕ್ಕಿಂತ, ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
6 For like the crackling of thorns under a pot, so is the laughter of the fool. This too is fleeting. ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ, ಮೂಢನ ನಗುವು ಹಾಗೆಯೇ ಇರುವುದು. ಇದು ಕೂಡ ವ್ಯರ್ಥವೇ.
7 Surely oppression turns a wise person into a fool, and a bribe corrupts the heart. ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.
8 The end of a matter is better than its beginning, and a patient spirit is better than a proud spirit. ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
9 Do not be quick in your spirit to become angry, for anger settles in the lap of fools. ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
10 Do not say, "Why were the former days better than these?" For it is not from wisdom that you ask this. “ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ.
11 Wisdom is good with an inheritance, an advantage to those who see the sun. ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.
12 For wisdom is a shelter, just as money is, but the advantage of knowledge is this: wisdom preserves the life of the one who has it. ಧನವು ಹೇಗೋ ಹಾಗೆ ಜ್ಞಾನವು ಆಶ್ರಯ. ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, ಅದು ಜ್ಞಾನಿಗೆ ಜೀವದಾಯಕ.
13 Consider the work of God: who can straighten what he has made crooked? ದೇವರ ಸೃಷ್ಟಿಕಾರ್ಯವನ್ನು ಯೋಚಿಸು: ದೇವರು ಮಾಡಿದ್ದನ್ನು, ಪುನಃ ಸರಿಪಡಿಸಲು ಯಾರಿಗೆ ಸಾಧ್ಯ?
14 In the day of prosperity be joyful, and in the day of adversity consider: God has made the one as well as the other, so that no one can find out anything that will come after them. ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.
15 In my fleeting days I've seen it all: a righteous man dying in his righteousness, a wicked man living long in his evil. ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.
16 Do not be excessively righteous, and do not make yourself overly wise; why should you destroy yourself? ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?
17 Don't be too wicked, and don't be foolish—why die before your time? ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ?
18 Good to grasp this, and not let go of that too, for whoever fears God comes through both. ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.
19 Wisdom makes the wise person stronger than ten rulers who are in a city. ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.
20 Surely there is no one righteous on earth who does good and never sins. ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.
21 Also, do not take to heart everything people say, or you may hear your servant cursing you, ಜನರು ಆಡಿದ ಎಲ್ಲಾ ಮಾತುಗಳನ್ನು ನೀನು ಲಕ್ಷಿಸಬೇಡ, ನಿನ್ನ ಕೆಲಸದವರೂ ನಿನ್ನನ್ನು ಶಪಿಸಬಹುದು.
22 for your own heart knows that many times you yourself have cursed others. ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, ಇದು ನಿನ್ನ ಹೃದಯಕ್ಕೆ ತಿಳಿದಿದೆ.
23 I tested all this by wisdom. I said, "I am determined to be wise"—but it was beyond me. ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, “ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
24 Whatever exists is far off and deep, very deep—who can discover it? ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ ಯಾರು ಕಂಡುಕೊಂಡಾರು?
25 I turned my heart to know, explore, and seek wisdom and the sum of things, and to know the evil of foolishness and the foolishness that is madness. ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.
26 I find the woman more bitter than death: her heart is snares and nets, her hands chains. One good before God escapes her; the sinner is caught by her. ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
27 "See, this is what I found," says the Teacher, "adding one to another to find the sum, “ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ: ನಾನು ಒಂದರ ನಂತರ ಮತ್ತೊಂದನ್ನು ಕೂಡಿಸಿ, ಸಂಶೋಧನೆಗಳನ್ನು ನಡೆಸಿದೆ;
28 which my soul kept seeking but didn't find. One man in 1,000 I found, but a woman among all these I didn't find. ನಾನು ಹುಡುಕಿ ನೋಡಿದರೂ ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ.
29 Look, this alone I found: God made humanity upright, but they sought many schemes." ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]