Skip to content
The Believer's Library

Biblica® Open Kannada Contemporary Version 2022

Esther 10 OKCV

Side by side with the Father's Heart Bible™

ಮೊರ್ದೆಕೈ ಶ್ರೇಷ್ಠತೆ

1ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು. 2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ. 3ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]