Skip to content
The Believer's Library

Biblica® Open Kannada Contemporary Version 2022

Exodus 1 OKCV

Show OKCV only
Verse × ×
1 These are the names of Israel's sons who came to Egypt with Jacob, each with his household: ಯಾಕೋಬನೊಂದಿಗೆ ಈಜಿಪ್ಟಿಗೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲನ ಮಕ್ಕಳ ಹೆಸರುಗಳು:
2 Reuben, Simeon, Levi, and Judah, ರೂಬೇನ್, ಸಿಮೆಯೋನ್, ಲೇವಿ ಮತ್ತು ಯೆಹೂದ,
3 Issachar, Zebulun, and Benjamin, ಇಸ್ಸಾಕಾರ್ ಜೆಬುಲೂನ್ ಮತ್ತು ಬೆನ್ಯಾಮೀನ್,
4 Dan and Naphtali, Gad and Asher. ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.
5 All who descended from Jacob were seventy people; Joseph was already in Egypt. ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.
6 Then Joseph died, and all his brothers, and all that generation. ಹಲವು ವರ್ಷಗಳ ಬಳಿಕ ಯೋಸೇಫನೂ ಅವನ ಸಹೋದರರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
7 But Israel's people were fruitful, swarmed, multiplied, and grew immensely strong, till the land was filled with them. ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.
8 Now a new king came to power in Egypt, who did not know Joseph. ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.
9 He said to his people, "Look, the Israelites are more numerous and powerful than we are. ಅವನು ತನ್ನ ಜನರಿಗೆ, “ಇಸ್ರಾಯೇಲರು ನಮಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ಹೆಚ್ಚು ಬಲವುಳ್ಳವರಾಗಿದ್ದಾರೆ.
10 Come, let's deal shrewdly with them, or they'll multiply, and if war comes, they'll join our enemies, fight us, and leave the land." ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.
11 So they set taskmasters over them to crush them with forced labor, building Pharaoh's supply cities: Pithom and Rameses. ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
12 But the more the Egyptians oppressed them, the more the Israelites multiplied and spread out, until the Egyptians dreaded Israel's people. ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು.
13 So the Egyptians ruthlessly made the people of Israel work as slaves. ಆದ್ದರಿಂದ ಈಜಿಪ್ಟಿನವರು ಇಸ್ರಾಯೇಲರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಾ ಸೇವೆ ಮಾಡಿಸಿಕೊಂಡರು.
14 They made their lives bitter with hard labor in mortar and brick and all kinds of field work. In all their harsh labor the Egyptians worked them ruthlessly. ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.
15 Then the king of Egypt said to the Hebrew midwives, one named Shiphrah and the other Puah, ಈಜಿಪ್ಟಿನ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಹಿಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿ,
16 "When you assist the Hebrew women in childbirth, watch at the birthstool: if it's a son, kill him; but if a daughter, let her live." ಅವರಿಗೆ, “ನೀವು ಹಿಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವುದಕ್ಕೆ ಹೆರಿಗೆಯ ಸಮಯದಲ್ಲಿ ಅವರನ್ನು ಪರಾಂಬರಿಸುವಾಗ, ಗಂಡು ಮಗುವಾದರೆ ಅದನ್ನು ಕೊಂದುಹಾಕಿರಿ, ಹೆಣ್ಣಾದರೆ ಬದುಕಲಿ,” ಎಂದು ಹೇಳಿದ್ದನು.
17 But the midwives feared our Heavenly Father and did not do as Egypt's king commanded them; they let the boys live. ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
18 So the king of Egypt called the midwives and said to them, "Why have you done this, letting the boys live?" ಆಗ ಈಜಿಪ್ಟಿನ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ಏಕೆ ಗಂಡು ಮಕ್ಕಳನ್ನು ಬದುಕಿಸಿದ್ದೀರಿ? ಇಂಥ ಕೆಲಸವನ್ನು ಏಕೆ ಮಾಡಿದಿರಿ?” ಎಂದನು.
19 The midwives told Pharaoh, "Hebrew women aren't like Egyptian women—they're vigorous, giving birth before the midwife arrives." ಸೂಲಗಿತ್ತಿಯರು ಫರೋಹನಿಗೆ, “ಹಿಬ್ರಿಯರ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯರು ಅವರ ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದರು.
20 So our Father was good to the midwives, and the people multiplied and grew very strong. ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು.
21 And because the midwives feared our Father, he gave them households of their own. ಸೂಲಗಿತ್ತಿಯರು ದೇವರಿಗೆ ಭಯಪಟ್ಟದ್ದರಿಂದ, ದೇವರು ಅವರ ಕುಟುಂಬಕ್ಕೆ ಅಭಿವೃದ್ಧಿಯನ್ನು ಉಂಟುಮಾಡಿದರು.
22 Then Pharaoh commanded all his people, "Throw every son born to the Hebrews into the Nile, but let every daughter live." ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]