Skip to content
The Believer's Library

Biblica® Open Kannada Contemporary Version 2022

Exodus 2 OKCV

Show OKCV only
Verse × ×
1 Now a man from the house of Levi went and married a daughter of Levi. ಈ ಸಮಯದಲ್ಲಿ ಲೇವಿಯ ವಂಶದವನಾದ ಒಬ್ಬನು ಲೇವಿಯ ಸ್ತ್ರೀಯನ್ನು ಮದುವೆಯಾದನು.
2 The woman conceived and bore a son; seeing he was healthy, she hid him three months. ಆ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತಳು. ಅದು ಸುಂದರವಾಗಿದ್ದುದರಿಂದ ಮೂರು ತಿಂಗಳು ಬಚ್ಚಿಟ್ಟರು.
3 Unable to hide him longer, she got a papyrus basket, coated it with tar and pitch, put the child in, and set it among the reeds on the Nile's bank. ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು.
4 His sister stood at a distance to see what would happen to him. ಕೂಸಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
5 Pharaoh's daughter went down to bathe at the Nile, her maids walking along the Nile. She saw the basket among the reeds, sent her maid to get it. ಆಗ ಫರೋಹನ ಮಗಳು ನೈಲ್ ನದಿಯಲ್ಲಿ ಸ್ನಾನ ಮಾಡುವದಕ್ಕೆ ಬಂದಳು. ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಜಂಬು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ, ಅದನ್ನು ತರಿಸಿದಳು.
6 She opened it, saw the child—a baby boy, crying. Her heart went out to him, and she said, "This is one of the Hebrew children." ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು.
7 His sister asked Pharaoh's daughter, "Should I call a Hebrew woman to nurse the child for you?" ಆಗ ಮಗುವಿನ ಅಕ್ಕ ಫರೋಹನ ಮಗಳಿಗೆ, “ನಾನು ಹೋಗಿ ಈ ಕೂಸಿಗೆ ಹಾಲು ಕೊಟ್ಟು ಸಾಕುವುದಕ್ಕೆ ಹಿಬ್ರಿಯ ಸ್ತ್ರೀಯರಿಂದ ಒಬ್ಬ ದಾದಿಯನ್ನು ನಿನಗೋಸ್ಕರ ಕರೆದುಕೊಂಡು ಬರಲೋ?” ಎಂದಳು.
8 "Yes, go," Pharaoh's daughter answered. So the girl went and called the child's mother. ಫರೋಹನ ಮಗಳು ಆಕೆಗೆ, “ಹೌದು, ಹೋಗು,” ಎಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನೇ ಕರೆದುಕೊಂಡು ಬಂದಳು.
9 Pharaoh's daughter told her, "Take this child and nurse him for me; I'll pay your wages." The woman took the child and nursed him. ಫರೋಹನ ಮಗಳು ಆಕೆಗೆ, “ಈ ಮಗುವನ್ನು ತೆಗೆದುಕೊಂಡುಹೋಗಿ, ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು,” ಎಂದಳು. ಆಗ ಆ ಸ್ತ್ರೀಯು ಕೂಸನ್ನು ತೆಗೆದುಕೊಂಡುಹೋಗಿ ಸಾಕಿದಳು.
10 The boy grew; she brought him to Pharaoh's daughter, who adopted him, naming him Moses: "Because I drew him from the water." ಆ ಮಗುವು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಹೋದಳು. ಅವನು ಆಕೆಗೆ ಮಗನಾದನು. ಆಕೆಯು, “ನೀರಿನೊಳಗಿಂದ ಇವನನ್ನು ಎಳೆದೆ,” ಎಂದು ಹೇಳಿ ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.
11 In those days Moses grew up, went out to his people, saw their burdens, and saw an Egyptian striking a Hebrew, one of his relatives. ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.
12 He glanced around and, seeing no one, killed the Egyptian and hid him in the sand. ಅವನು ಸುತ್ತಮುತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು ಆ ಈಜಿಪ್ಟಿನವನನ್ನು ಕೊಂದುಹಾಕಿ, ಮರಳಿನಲ್ಲಿ ಮುಚ್ಚಿಹಾಕಿದನು.
13 Next day he went out, saw two Hebrews fighting, and asked the offender, "Why hit your companion?" ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಹಿಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡುತ್ತಿದ್ದರು. ತಪ್ಪು ಮಾಡಿದವನಿಗೆ ಮೋಶೆ, “ಏಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ?” ಎಂದನು.
14 He said, "Who made you ruler and judge over us? Are you thinking of killing me as you killed the Egyptian?" Moses was afraid and thought, "Indeed, the matter is known." ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.
15 Pharaoh heard and sought to kill Moses; he fled from Pharaoh, settled in the land of Midian, and sat by a well. ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು.
16 Midian's priest had seven daughters; they came to draw water and fill the troughs to water their father's flock. ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.
17 When the shepherds came and drove them away, Moses got up, rescued them, and watered their flock. ಕುರುಬರು ಬಂದು ಅವರನ್ನು ಅಲ್ಲಿಂದ ಓಡಿಸಲು, ಮೋಶೆಯು ಎದ್ದು ಬಂದು ಅವರಿಗೆ ಸಹಾಯಮಾಡಿ, ಅವರ ಕುರಿಗಳಿಗೆ ನೀರು ಕುಡಿಸಿದನು.
18 When they returned to their father Reuel, he asked, "Why have you come back so early today?" ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.
19 They said, "An Egyptian saved us from the shepherds, even drew us water and watered the flock." ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು.
20 "Where is he?" he asked his daughters. "Why did you leave the man? Call him to eat." ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.
21 Moses agreed to stay with the man, who gave his daughter Zipporah to Moses in marriage. ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.
22 She bore a son; Moses named him Gershom, saying, "I have been a foreigner in a foreign land." ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು.
23 Long after, Egypt's king died. Israel's sons groaned from slavery, cried out; their cry rose to our Father from slavery. ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.
24 Our Father heard their groaning, and he remembered his covenant with Abraham, with Isaac, and with Jacob. ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.
25 Our Father looked on the Israelites, and he understood. ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]