Skip to content
The Believer's Library

Biblica® Open Kannada Contemporary Version 2022

Exodus 3 OKCV

Show OKCV only
Verse × ×
1 Moses was shepherding the flock of his father-in-law Jethro, priest of Midian. He led the flock to the far side of the wilderness and came to Horeb, the mountain of our Father. ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
2 There the messenger of our Father appeared to him in a fire flaming from within a bush. Moses looked: the bush was blazing but not consumed. ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.
3 Moses said, "Let me go over and see this extraordinary sight—why the bush isn't burning up." ಆಗ ಮೋಶೆಯು, “ನಾನು ಹೋಗಿ ಆ ವಿಚಿತ್ರ ನೋಟವನ್ನೂ ಪೊದೆಯು ಏಕೆ ಸುಟ್ಟುಹೋಗಲಿಲ್ಲವೆಂಬುದನ್ನೂ ನೋಡುವೆನು,” ಎಂದುಕೊಂಡನು.
4 When our Father saw he had turned aside to look, he called to him from within the bush, "Moses, Moses!" Moses said, "Here I am." ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು.
5 He said, "Don't come closer. Take your sandals off your feet, for the ground you're standing on is holy." ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.
6 He said, "I am your Father, the God of Abraham, of Isaac, and of Jacob." Moses hid his face, for he was afraid to look at our Father. ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
7 Then our Father said, "I have truly seen my people's suffering in Egypt, heard their cry under their slave drivers, for I know their hardships. ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
8 So I've come down to rescue them from Egypt's grip and bring them up from that land to a good, spacious land—a land flowing with milk and honey—to the place of the Canaanites, Hittites, Amorites, Perizzites, Hivites, and Jebusites. ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
9 Now the cry of Israel's people has reached me, and I've seen the oppression the Egyptians oppress them with. ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.
10 Now go—I'm sending you to Pharaoh, to bring my people, Israel's sons, out of Egypt." ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.
11 Moses said to our Father, "Who am I to go to Pharaoh and bring the Israelites out of Egypt?" ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.
12 He said, "I will surely be with you. This is your sign that I have sent you: when you bring the people out of Egypt, you will worship your Father on this mountain." ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.
13 Then Moses said to our Father, "If I go to Israel's people and tell them, 'The God of your fathers sent me to you,' and they ask me, 'What is his name?'—what do I tell them?" ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.
14 Our Father told Moses, "I AM WHO I AM." Then he said, "Tell the Israelites: 'I AM has sent me to you.'" ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.
15 Our Father also told Moses, "Tell the Israelites: 'Your Father—the God of Abraham, Isaac, and Jacob—has sent me to you.' This is my name forever, and how I am remembered in every generation. ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.
16 Go, gather Israel's elders and tell them: your Father—the God of Abraham, Isaac, and Jacob—appeared to me and said: I have surely watched over you, and seen what is done to you in Egypt, “ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.
17 I have promised to bring you up out of Egypt's misery to the land of the Canaanites, the Hittites, the Amorites, the Perizzites, the Hivites, and the Jebusites—a land flowing with milk and honey. ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.
18 They will listen to you. You and Israel's elders must go to Egypt's king and tell him, 'the Father of the Hebrews has met us. Now please let us travel three days into the wilderness to sacrifice to our Father.' “ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.
19 But I know Egypt's king won't let you go unless by a mighty hand. ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.
20 I will reach out my hand and strike Egypt with all the wonders I do there; then he will release you. ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
21 I will make the Egyptians favor this people, so when you leave, you won't go empty-handed. “ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.
22 Each woman must ask her neighbor and the woman living in her house for silver and gold items and clothing, and dress your sons and daughters with them. So you will plunder the Egyptians." ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]