Skip to content
The Believer's Library

Biblica® Open Kannada Contemporary Version 2022

Exodus 39 OKCV

Show OKCV only
Verse × ×
1 From the blue, purple, and scarlet yarn they made finely woven garments for serving in the holy place; they made the holy garments for Aaron, as our Father commanded Moses. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
2 He made the ephod of gold, of blue, purple, and scarlet yarn, and of finely woven linen. ಬೆಚಲೇಲನು ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಿದ್ದರು.
3 They hammered gold into sheets, cut it into threads, and worked them into the blue, purple, and scarlet yarn and fine linen—the work of a skilled designer. ಅವರು ಬಂಗಾರವನ್ನು ಹೊಡೆದು, ತೆಳುವಾದ ತಗಡುಗಳನ್ನಾಗಿ ಮಾಡಿ, ಅದನ್ನು ಕತ್ತರಿಸಿ ಎಳೆಗಳನ್ನಾಗಿ ಮಾಡಿ, ಆ ಎಳೆಗಳನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವುದಕ್ಕೆ ಉಪಯೋಗಿಸಿದ್ದರು.
4 They made shoulder pieces for it, joined together at its two edges. ಆ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳನ್ನು ತಯಾರಿಸಿದ್ದರು.
5 The ephod's woven band was one piece with it, made the same way: gold, blue, purple, and scarlet yarn, and finely twisted linen, as our Father commanded Moses. ಅದರ ಮೇಲಿರುವ ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಲಾಗಿತ್ತು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
6 They made the onyx stones, mounted in gold filigree settings, engraved like seal engravings, with the names of Israel's sons. ಮುದ್ರೆ ಕೆತ್ತುವ ಪ್ರಕಾರ, ಗೋಮೇಧಿಕ ರತ್ನಗಳಲ್ಲಿ ಹನ್ನೆರಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿ ಬಂಗಾರದ ಕುಂದಣದಲ್ಲಿ ಇಟ್ಟರು.
7 He put them on the ephod's shoulder pieces as memorial stones for Israel's sons, as our Father had commanded Moses. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಇಟ್ಟರು.
8 He made the breastpiece—skilled work like the ephod's—of gold, blue, purple, scarlet yarn, and finely twisted linen. ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು.
9 Square and doubled, they made the breastpiece—about nine inches long and nine inches wide, doubled. ಅದು ಚಚ್ಚೌಕವಾಗಿತ್ತು, ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿತ್ತು.
10 They set in it four rows of stones. The first row was carnelian, topaz, and emerald; ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.
11 the second row, turquoise, sapphire, and emerald; ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿದ್ದವು.
12 the third row, jacinth, agate, and amethyst; ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿದ್ದವು.
13 the fourth row, beryl, onyx, and jasper. They were enclosed in gold filigree settings. ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.
14 Twelve stones, one per name of Israel's sons, each engraved like a seal with its own name, for the twelve tribes. ಆ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿದ್ದವು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿದವುಗಳಾಗಿದ್ದವು.
15 For the breastpiece they made braided chains of pure gold, like cords. ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಿದರು.
16 They made two gold filigree settings and two gold rings, fastening the two rings to the breastpiece's two ends. ಬಂಗಾರದ ಆ ಎರಡು ಜವೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದರು.
17 They fastened the two gold cords to the two rings at the ends of the breastpiece. ಬಂಗಾರದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಿದರು.
18 They put the two ends of the two cords on the two filigree settings, and put them on the ephod's shoulder pieces, at its front. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು.
19 They made two gold rings and put them on the breastpiece's two ends, on its inner edge facing the ephod. ಬಂಗಾರದ ಎರಡು ಉಂಗುರಗಳನ್ನು ಮಾಡಿ, ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿ ಏಫೋದಿನ ಬದಿಗೆ ಒಳಗಡೆಯಲ್ಲಿ ಹಾಕಿದರು.
20 They made two gold rings and put them on the two shoulder pieces of the ephod, low on the front, near the seam above its woven band. ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
21 They fastened the breastpiece's rings to the ephod's rings with a blue cord, so it would rest on the ephod's woven band and not come loose from the ephod, as our Father commanded Moses. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು.
22 Bezalel made the robe of the ephod entirely of blue, the work of a weaver. ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಿದರು. ಅದು ನೇಕಾರನ ಕೆಲಸವಾಗಿತ್ತು.
23 Its opening was in the center, like a collar's opening, with a woven binding around it so it wouldn't tear. ನಿಲುವಂಗಿಯ ರಂದ್ರ, ಕವಚದ ರಂದ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಯುದ್ಧದ ಕವಚದೋಪಾದಿಯಲ್ಲಿ ಆ ರಂದ್ರದ ಸುತ್ತಲೂ ನೇಯ್ಗೆ ಪಟ್ಟಿ ಇತ್ತು.
24 They made pomegranates of blue, purple, and scarlet yarn and twisted linen on the robe's hem. ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ದಾಳಿಂಬೆ ಹಣ್ಣಿನಂತೆ ಮಾಡಿದರು.
25 They made pure gold bells and set them between the pomegranates on the robe's hem, all around between the pomegranates. ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ, ಆ ಗಂಟೆಗಳನ್ನು ದಾಳಿಂಬೆಗಳ ನಡುವೆಯೇ ಇರಿಸಿದರು.
26 Bell and pomegranate, bell and pomegranate, around the robe's hem for serving, as our Father commanded Moses. ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಸೇವೆಗೋಸ್ಕರ ಮಾಡಿದ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
27 For Aaron and his sons they made the tunics of fine linen, the work of a weaver, ಆರೋನನಿಗೆ ಹಾಗೂ ಅವನ ಮಕ್ಕಳಿಗೆ ನಯವಾದ ನಾರಿನಿಂದ ಹೊಸೆದ ಕೆಲಸದಿಂದ ಮಾಡಿದ ಮೇಲಂಗಿಗಳನ್ನೂ
28 the fine-linen turban, the beautiful fine-linen caps, and linen undergarments of finely twisted linen. ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ಹೊಸೆದ ನಯವಾದ ನಾರುಗಳಿಂದ ಮಾಡಿದ ಒಳಉಡುಪುಗಳನ್ನೂ
29 The sash: finely woven linen, blue, purple, and scarlet yarn, embroidered work, as our Father commanded Moses. ನಯವಾದ ನಾರಿನಿಂದ ಹೊಸೆದ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಹೆಣಿಗೆಯ ಕೆಲಸದಿಂದ ನಡುಕಟ್ಟನ್ನೂ ಮಾಡಿದರು. ಇವುಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
30 They made the holy crown's plate from pure gold, engraved like a seal: "Holy to our Father." ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,
31 They tied a blue cord to it, fastening it on the turban above, as our Father commanded Moses. ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಿಸಿದರು. ಇದನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
32 All the work of the tabernacle, the tent of meeting, was finished. Israelites did everything our Father commanded Moses—so they did. ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.
33 They brought Moses the tabernacle: the tent, all its furnishings, clasps, frames, crossbars, posts, and bases; ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,
34 the covering of red-dyed ram skins, the covering of fine leather, and the screening curtain, ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲುಹಂದಿಗಳ ಚರ್ಮಗಳ ಹೊದಿಕೆಗಳನ್ನು, ಮರೆಮಾಡುವ ಪರದೆಯನ್ನು,
35 the ark of the testimony with its poles and the mercy seat; ಒಡಂಬಡಿಕೆಯ ಮಂಜೂಷನ್ನು, ಅದರ ಕೋಲುಗಳನ್ನು, ಕರುಣಾಸನವನ್ನು,
36 the table with all its utensils and the bread of the Presence; ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,
37 the pure gold lampstand, its arranged lamps, all its utensils, and oil for the light; ಶುದ್ಧವಾದ ದೀಪಸ್ತಂಭವನ್ನು, ಅದರ ದೀಪಗಳನ್ನು, ಕ್ರಮವಾಗಿಡುವ ದೀಪಗಳನ್ನು, ಅದರ ಉಪಕರಣಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,
38 the gold altar, anointing oil, fragrant incense, and the tent entrance screen; ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,
39 the bronze altar with its bronze grate, poles, and all its utensils, the basin and its stand; ಬಲಿಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು,
40 the courtyard's curtains, posts, and bases, the courtyard entrance screen, ropes, pegs, and all the equipment for the tabernacle's service, the tent of meeting; ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು, ಅದರ ಹಗ್ಗಗಳನ್ನು, ಗುಡಾರದ ಗೂಟಗಳನ್ನು, ಸಭೆಯ ದೇವದರ್ಶನದ ಗುಡಾರಕ್ಕೆ ಬೇಕಾದ ಎಲ್ಲಾ ವಸ್ತುಗಳನ್ನು,
41 and the finely woven garments for serving in the holy place, the holy garments for Aaron the priest, and his sons' garments for priestly service. ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ತಂದರು.
42 The people of Israel had done all the work just as our Father had commanded Moses. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಇಸ್ರಾಯೇಲರು ಈ ಕೆಲಸಗಳನ್ನೆಲ್ಲಾ ಮಾಡಿದರು.
43 Moses inspected all the work: they had done it as our Father commanded—so they had done it. Moses blessed them. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]