Skip to content
The Believer's Library

Biblica® Open Kannada Contemporary Version 2022

Ezekiel 7 OKCV

Side by side with the Father's Heart Bible™

ಅಂತ್ಯ ಬಂದಿದೆ

1ಯೆಹೋವ ದೇವರ ವಾಕ್ಯವು ನನಗೆ ಬಂದಿತು: 2“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ:“ ‘ಅಂತ್ಯವು ಬಂದಿದೆ!ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!

3ಈಗಲೇ ನಿನಗೆ ಅಂತ್ಯವು ಬಂದಿದೆ.ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ.ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ.ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.

4ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ.ನಾನು ನಿನ್ನನ್ನು ಬಿಡುವುದೂ ಇಲ್ಲ.ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ.ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು.ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’

5“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:“ ‘ಕೇಡು! ಎಂದೂ ಕೇಳದ ಕೇಡು,ಇಗೋ ಬಂದಿತು.

6ಅಂತ್ಯವು ಬಂದಿತು,ಅಂತ್ಯವು ಬಂದುಬಿಟ್ಟಿತು,ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ,ಇಗೋ ಬಂದೇ ಬಂತು.

7ಓ ದೇಶ ನಿವಾಸಿಯೇ,ನಿನಗಾಗಿ ವಿನಾಶದ ದಿನ ಬಂದಿತು,ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು.ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.

8ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು.ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು.ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು.ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.

9ನಾನು ಕಟಾಕ್ಷಿಸುವುದೂ ಇಲ್ಲ,ನಿನ್ನನ್ನು ಕನಿಕರಿಸುವುದೂ ಇಲ್ಲ.ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ.ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.

10“ ‘ಇಗೋ ಆ ದಿನವು ಬಂತು,ನೋಡು ವಿನಾಶದ ದಿನ ಹೊರಟುಹೋಯಿತು,ಕೋಲು ಚಿಗುರಿತು,ಅಹಂಕಾರವು ಅರಳಿತು,

11ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು.ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ,ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ,ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.

12ಸಮಯವು ಬಂತು,ದಿನವು ಬಂದೇಬಿಟ್ಟಿತು.ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ,ಮಾರುವವನು ದುಃಖಿಸದಿರಲಿ.ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.

13ಮಾರಿದವನು ಎಷ್ಟು ವರ್ಷ ಬದುಕಿದರೂ,ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು.ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ,ಎಂದಿಗೂ ತಿರುಗದು,ಯಾರೂ ತಮ್ಮ ಪಾಪಗಳಿಂದತಮ್ಮ ಜೀವವನ್ನು ಉಳಿಸಿಕೊಳ್ಳರು.

14“ ‘ಅವರು ಕಹಳೆಯನ್ನೂದಿಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ.ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ.ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.

15ಹೊರಗೆ ಖಡ್ಗವೂಒಳಗೆ ವ್ಯಾಧಿಯೂ ಕ್ಷಾಮವೂ ಉಂಟು.ಹೊರಗಿರುವವರನ್ನು ಖಡ್ಗವು ಸಾಯಿಸುವುದು,ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.

16ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು.ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ,ಪರ್ವತಗಳ ಮೇಲೆ ಇರುವರು.

17ಕೈಗಳೆಲ್ಲಾ ಜೋತಾಡುವುವು,ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.

18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರುಮತ್ತು ಭಯವು ಅವರನ್ನು ಮುಚ್ಚಿಬಿಡುವುದು.ಎಲ್ಲಾ ಮುಖಗಳ ಮೇಲೆ ನಾಚಿಕೆಯೂ,ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.

19“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು,ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು.ಅವರ ಬೆಳ್ಳಿ ಬಂಗಾರಗಳುಯೆಹೋವ ದೇವರ ಕೋಪದ ದಿವಸದಲ್ಲಿಅವರನ್ನು ಪಾರು ಮಾಡಲಾರವು.ಇದರಿಂದ ಅವರ ಹಸಿವು ನೀಗುವುದಿಲ್ಲ,ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ.ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.

20ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು.ಇದಲ್ಲದೆ ಹೇಯವೂ ಅಸಹ್ಯವೂ ಆದತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ

21ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ,ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು.ಅವರು ಅದನ್ನು ಅಪವಿತ್ರಪಡಿಸುವರು.

22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು.ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು.ದರೋಡೆಕೋರರು ಅದರಲ್ಲಿ ಸೇರಿಅದನ್ನು ಅಪವಿತ್ರಪಡಿಸುವರು.

23“ ‘ಸರಪಳಿಯನ್ನು ತಯಾರುಮಾಡು.ದೇಶವು ರಕ್ತಾಪರಾಧದಿಂದ ತುಂಬಿದೆಮತ್ತು ನಗರವು ಹಿಂಸೆಯಿಂದ ತುಂಬಿದೆ.

24ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು.ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ.ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.

25ನಾಶವು ಬರುತ್ತದೆ.ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.

26ಕೇಡಿನ ಮೇಲೆ ಕೇಡು ಬರುವುದು,ಸುದ್ದಿಯ ಮೇಲೆ ಸುದ್ದಿ ಬರುವುದು,ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು.ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು,ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.

27ಅರಸನು ದುಃಖಿಸುವನು,ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ.ದೇಶದ ಜನರ ಕೈಗಳು ತತ್ತರಿಸುವುವು,ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು.ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು.“ ‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]