Skip to content
The Believer's Library

Biblica® Open Kannada Contemporary Version 2022

Genesis 12 OKCV

Show OKCV only
Verse × ×
1 Now our Father said to Abram, "Go from your land, your relatives, and your father's house, to the land that I will show you. ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.
2 I will make you into a great nation, and I will bless you; I will make your name great, so that you will be a blessing. “ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.
3 I will bless those who bless you, and whoever curses you I will curse; and through you all the families of the earth will be blessed." ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”
4 Abram went as our Father told him, and Lot went with him. Abram was seventy-five when he left Haran. ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
5 Abram took his wife Sarai, his nephew Lot, all the possessions they had gathered, and the people they had acquired in Haran, and set out for the land of Canaan, and came to the land of Canaan. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.
6 Abram passed through the land to the site of Shechem, to the oak of Moreh. The Canaanites were then in the land. ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.
7 Then our Father appeared to Abram and said, "To your offspring I will give this land." So Abram built an altar there to our Father, who appeared to him. ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.
8 From there he moved to the hill country east of Bethel and pitched his tent, Bethel to the west, Ai to the east. He built an altar there to our Father and called on our Father's name. ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.
9 Then Abram continued on his way, journeying toward the Negev. ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.
10 Since famine struck the land, Abram went down to Egypt to stay there, for the famine was severe in the land. ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
11 Nearing Egypt, he said to his wife Sarai, "I know you are a beautiful woman. ಅವನು ಈಜಿಪ್ಟನ್ನು ಸಮೀಪಿಸುತ್ತಿದ್ದಾಗ, ತನ್ನ ಹೆಂಡತಿ ಸಾರಯಳಿಗೆ, “ನೀನು ನೋಡುವುದಕ್ಕೆ ರೂಪವತಿಯೆಂದು ನನಗೆ ತಿಳಿದಿದೆ.
12 When the Egyptians see you, they'll say, 'This is his wife,' and kill me but keep you alive. ಹೀಗಿರುವುದರಿಂದ ಈಜಿಪ್ಟಿನವರು ನಿನ್ನನ್ನು ಕಂಡು, ‘ಈಕೆಯು ಅವನ ಹೆಂಡತಿ’ ಎಂದು ಹೇಳಿ, ನನ್ನನ್ನು ಕೊಂದುಹಾಕಿ, ನಿನ್ನನ್ನು ಉಳಿಸುವರು.
13 Please say you're my sister, so it goes well for me because of you, and I stay alive for your sake." ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.
14 When Abram entered Egypt, the Egyptians saw that the woman was very beautiful. ಅಬ್ರಾಮನು ಈಜಿಪ್ಟಿಗೆ ಬಂದಾಗ, ಈಜಿಪ್ಟಿನವರು, ಆ ಸಾರಯಳು ಬಹಳ ಸುಂದರಿ ಎಂದುಕೊಂಡರು.
15 Pharaoh's officials saw her, praised her to Pharaoh, and the woman was taken into Pharaoh's palace. ಫರೋಹನ ಅಧಿಕಾರಿಗಳು ಆಕೆಯನ್ನು ನೋಡಿ, ಫರೋಹನ ಮುಂದೆ ಆಕೆಯನ್ನು ಹೊಗಳಿ, ಆ ಸ್ತ್ರೀಯನ್ನು ಅವನ ಅರಮನೆಗೆ ಕರೆದುಕೊಂಡು ಹೋದರು.
16 He treated Abram well for her sake, and Abram acquired sheep, cattle, male and female donkeys, male and female servants, and camels. ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೆಯದನ್ನು ಮಾಡಿದನು. ಅವನಿಗೆ ಕುರಿ, ಎತ್ತು, ಕತ್ತೆಗಳೂ ದಾಸದಾಸಿಯರೂ ಹೆಣ್ಣು ಕತ್ತೆಗಳೂ ಒಂಟೆಗಳೂ ದೊರೆತವು.
17 But our Father struck Pharaoh and his household with severe plagues because of Sarai, Abram's wife. ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.
18 Pharaoh summoned Abram: "What is this you've done to me? Why didn't you tell me she was your wife? ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?
19 Why did you say, 'She's my sister,' so I took her as my wife? Here's your wife now—take her and go." ‘ಆಕೆಯು ನನ್ನ ಸಹೋದರಿ,’ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವುದರಲ್ಲಿದ್ದೆನು. ಆದರೆ ಈಗ, ನಿನ್ನ ಹೆಂಡತಿ, ಈಕೆಯನ್ನು ನೀನು ಕರೆದುಕೊಂಡು ಹೋಗು,” ಎಂದನು.
20 Pharaoh ordered his men about Abram, and they sent him off with his wife and all he owned. ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಆಜ್ಞಾಪಿಸಲು, ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳುಹಿಸಿಬಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]