Skip to content
The Believer's Library

Biblica® Open Kannada Contemporary Version 2022

Genesis 13 OKCV

Show OKCV only
Verse × ×
1 Abram went up from Egypt to the Negev, he, his wife, all he had, and Lot with him. ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತೆಗೆದುಕೊಂಡು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ನೆಗೆವಕ್ಕೆ ಪ್ರಯಾಣಮಾಡಿದನು.
2 Now Abram had become very rich in livestock, in silver, and in gold. ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.
3 He went by stages from the Negev to Bethel, to the place between Bethel and Ai where his tent stood before, ಅವನು ತನ್ನ ಪ್ರಯಾಣಗಳಲ್ಲಿ ನೆಗೆವದಿಂದ ಬೇತೇಲಿಗೆ, ಎಂದರೆ ಮೊದಲು ಬೇತೇಲಿಗೂ ಆಯಿ ಎಂಬ ಊರಿಗೂ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೆ ಬಂದನು.
4 and where he had first built an altar. There Abram called on the name of our Father. ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
5 Now Lot, who was traveling with Abram, also had flocks and herds and tents. ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
6 The land could not support them living together; their possessions were too great to stay together. ಆಗ ಅವರು ಒಂದಾಗಿ ವಾಸಿಸಲಿಕ್ಕೆ ಆ ಸ್ಥಳ ಸಾಲದೆ ಹೋಯಿತು. ಅವರಿಬ್ಬರ ಸಂಪತ್ತು ಬಹಳವಾಗಿದ್ದರಿಂದ ಒಂದೇ ಸ್ಥಳದಲ್ಲಿ ಅವರು ವಾಸವಾಗಿರಲು ಆಗಲಿಲ್ಲ.
7 A quarrel arose between Abram's herders and Lot's herders. The Canaanites and Perizzites were living in the land at that time. ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
8 Abram said to Lot, "Let's not quarrel—you and me, or your herders and mine—we're brothers. ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.
9 Isn't the whole land before you? Please, separate from me: if left, I'll go right; if right, I'll go left." ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.
10 Lot looked up and saw that the whole Jordan plain toward Zoar was well watered everywhere—like our Father's garden, like Egypt's land. (This was before our Father destroyed Sodom and Gomorrah.). ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.
11 Lot chose the whole Jordan plain for himself and traveled eastward; the two parted from each other. ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.
12 Abram lived in the land of Canaan; Lot lived among the cities of the plain and pitched tents as far as Sodom. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು.
13 Now the people of Sodom were wicked, sinning greatly against our Father. ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.
14 After Lot parted from him, our Father told Abram, "Look up from where you stand: north, south, east, and west. ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.
15 For all the land that you see I will give to you and to your children forever. ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
16 I will make your children like the dust of the earth—if the dust of the earth can be counted, so can your children. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.
17 Get up, walk the land's length and breadth, for I am giving it to you." ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.
18 Abram pitched his tents, went and settled by the oaks of Mamre at Hebron, and built an altar there to our Father. ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]