Skip to content
The Believer's Library

Biblica® Open Kannada Contemporary Version 2022

Genesis 16 OKCV

Show OKCV only
Verse × ×
1 Sarai, Abram's wife, had borne him no children. She had an Egyptian servant named Hagar. ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು.
2 Sarai told Abram, "Look, our Father has kept me from bearing children. Go sleep with my servant; maybe I'll build a family through her." Abram did as Sarai said. ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
3 After Abram had lived in Canaan ten years, Sarai his wife took her Egyptian servant Hagar and gave her to her husband Abram as a wife. ಅಬ್ರಾಮನು ಕಾನಾನ್ ದೇಶದಲ್ಲಿ ಹತ್ತು ವರ್ಷ ವಾಸಿಸಿದ ತರುವಾಯ, ಅಬ್ರಾಮನ ಹೆಂಡತಿಯಾದ ಸಾರಯಳು ಈಜಿಪ್ಟಿನವಳಾದ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
4 He slept with Hagar; she conceived, and seeing she was pregnant, she despised her mistress. ಅವನು ಹಾಗರಳನ್ನು ಕೂಡಿದನು. ಆಗ ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ, ಅವಳು ತನ್ನ ಯಜಮಾನಿಯನ್ನು ತಿರಸ್ಕರಿಸಿದಳು.
5 Sarai said to Abram, "My wrong is on you. I gave my servant into your arms; now she sees she's pregnant, she despises me. May our Father judge between me and you." ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.
6 Abram told Sarai, "Your servant is in your hands; do to her what seems good to you." Sarai mistreated her, and she fled from her presence. ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.
7 The messenger of our Father found Hagar at the wilderness spring, the spring on the way to Shur. ಯೆಹೋವ ದೇವರ ದೂತನು ಮರುಭೂಮಿಯಲ್ಲಿ ಶೂರಿನ ಮಾರ್ಗವಾಗಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಹಾಗರಳನ್ನು ಕಂಡು,
8 "Hagar, Sarai's servant," he said, "where have you come from, and where are you going?" "I'm running away from my mistress Sarai," she replied. “ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.
9 "Go back to your mistress," the messenger of our Father told her, "and submit to her authority." ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.
10 The messenger of our Father told her, "I will multiply your descendants until they can't be counted." ಇದಲ್ಲದೆ ಯೆಹೋವ ದೇವರ ದೂತನು ಅವಳಿಗೆ, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ಹೆಚ್ಚಿಸುತ್ತೇನೆ,” ಎಂದನು.
11 The messenger of our Father also said to her: "You are now pregnant and will give birth to a son. You will name him Ishmael, for I have heard of your misery. ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.
12 He will be a wild donkey of a man, his hand against everyone and everyone's hand against him, and he will live in hostility toward all his brothers." ಅವನು ಕಾಡುಕತ್ತೆಯಂತೆ ಇರುವನು. ಪ್ರತಿಯೊಬ್ಬರಿಗೂ ವಿರೋಧವಾಗಿ ಅವನು ಕೈ ಎತ್ತುವನು, ಪ್ರತಿಯೊಬ್ಬರ ಕೈಯೂ ಅವನ ವಿರೋಧವಾಗಿ ಇರುವುದು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು.”
13 She named our Father who spoke to her, "You are El Roi—my God who sees me," for she said, "I have now seen the One who sees me." ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.
14 That is why the well was called Beer-lahai-roi; it lies between Kadesh and Bered. ಆದ್ದರಿಂದ ಆ ಬಾವಿಗೆ, ಬೇರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
15 So Hagar bore Abram a son, and Abram named the son she had borne Ishmael. ತರುವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳ ಮಗನಿಗೆ ಅಬ್ರಾಮನು ಇಷ್ಮಾಯೇಲ್ ಎಂದು ಹೆಸರಿಟ್ಟನು.
16 Abram was eighty-six years old when Hagar bore him Ishmael. ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ, ಅಬ್ರಾಮನು ಎಂಬತ್ತಾರು ವರ್ಷದವನಾಗಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]