Skip to content
The Believer's Library

Biblica® Open Kannada Contemporary Version 2022

Genesis 17 OKCV

Show OKCV only
Verse × ×
1 When Abram was ninety-nine years old, our Father appeared to him and said, "I am El Shaddai—your Father Almighty. Walk before me and be blameless. ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.
2 And I will make my covenant between me and you, and I will multiply you exceedingly." ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು. ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ವೃದ್ಧಿಪಡಿಸುವೆನು,” ಎಂದು ಅವನಿಗೆ ಹೇಳಿದರು.
3 Then Abram fell on his face, and our Father spoke with him, saying: ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:
4 "As for me, my covenant is with you, and you will become father of a multitude of nations. “ನಾನಾದರೋ ಈ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ: ನೀನು ಅನೇಕ ರಾಷ್ಟ್ರಗಳಿಗೆ ತಂದೆಯಾಗಿರುವೆ.
5 Your name will no longer be Abram, but Abraham, for I have made you father of a multitude of nations. ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ.
6 I will make you extremely fruitful; I will turn you into many nations, and kings will come from you. ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು.
7 I will establish my covenant between me and you and your descendants after you, for all generations—an everlasting covenant—to be Father to you and your descendants after you. ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.
8 I will give you and your descendants after you the land where you live as a foreigner—all the land of Canaan—as an eternal possession; and I will be their Father." ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.
9 Then our Father said to Abraham, "As for you: keep my covenant, you and your children after you, throughout their generations. ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು.
10 This is my covenant to keep, between me and you and your descendants after you: every male among you must be circumcised. ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.
11 Circumcise the flesh of your foreskin; it will be the sign of the covenant between me and you. ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.
12 Every male among you, generation after generation, must be circumcised at eight days old—whether born in your house or bought with silver from a foreigner not your own offspring. ನಿಮ್ಮ ಸಂತತಿಯವರಲ್ಲಿ ಪ್ರತಿಯೊಂದು ಗಂಡು ಮಗುವಿಗೂ ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು. ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಕ್ರಯಕ್ಕೆ ತೆಗೆದುಕೊಂಡವನಾಗಲಿ,
13 Everyone born in your house or bought with your money must be circumcised. My covenant will be in your flesh, an everlasting covenant. ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.
14 Any uncircumcised male not circumcised in his foreskin's flesh will be cut off from his people—he has broken my covenant." ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.
15 Then our Father said to Abraham, "Don't call your wife Sarai anymore—her name is Sarah. ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’
16 I will bless her and indeed give you a son by her. I will bless her—she will become nations; kings of peoples will come from her." ಆಕೆಯನ್ನು ನಾನು ಆಶೀರ್ವದಿಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಆಕೆಯು ಜನಾಂಗಗಳ ತಾಯಿಯಾಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ರಾಷ್ಟ್ರಗಳೂ ಅರಸರೂ ಹುಟ್ಟುವರು,” ಎಂದರು.
17 Abraham fell on his face, laughing, and said to himself, "Can a son be born to a man who is one hundred years old? Can ninety-year-old Sarah give birth?" ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
18 Then Abraham said to our Father, "If only Ishmael might live in your presence!" ಅಬ್ರಹಾಮನು ದೇವರಿಗೆ, “ಇಷ್ಮಾಯೇಲನು ನಿನ್ನ ಆಶೀರ್ವಾದದಲ್ಲಿ ಬದುಕಲಿ,” ಎಂದನು.
19 But our Father said, "No, your wife Sarah will bear you a son, and you will name him Isaac. I will confirm my covenant with him, an everlasting covenant for his descendants after him. ಅದಕ್ಕೆ ದೇವರು, “ನಿಶ್ಚಯವಾಗಿ ನಿನ್ನ ಹೆಂಡತಿ ಸಾರಳು ಮಗನನ್ನು ಹೆರುವಳು. ಅವನಿಗೆ, ‘ಇಸಾಕ್’ ಎಂದು ಹೆಸರಿಡಬೇಕು. ಅವನ ಸಂಗಡವೂ ಅವನ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡವೂ ನಾನು ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
20 As for Ishmael, I have heard you. I will bless him, make him fruitful, and multiply him exceedingly. He will father twelve leaders, and I will make him into a great nation. ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ನಾನು ಅವನನ್ನು ಸಹ ಆಶೀರ್ವದಿಸುವೆನು. ಅವನನ್ನು ಅಭಿವೃದ್ಧಿ ಮಾಡಿ, ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.
21 But I will confirm my covenant with Isaac, whom Sarah will bear you at this time next year." ಆದರೆ ಬರುವ ವರ್ಷ ಈ ಕಾಲದಲ್ಲಿ ಸಾರಳು ನಿನ್ನಿಂದ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸವೆನು,” ಎಂದು ಹೇಳಿದರು.
22 When he had finished speaking with Abraham, our Father went up from him. ಆಗ ದೇವರು ಅವನ ಸಂಗಡ ಮಾತನಾಡುವುದನ್ನು ಮುಗಿಸಿ, ಅಬ್ರಹಾಮನ ಬಳಿಯಿಂದ ಹೊರಟು ಹೋದರು.
23 Then Abraham took Ishmael his son, everyone born in his household, and everyone bought with his money—every male in Abraham's household—and circumcised the flesh of their foreskins that very day, as our Father had told him. ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.
24 Abraham was ninety-nine years old when he was circumcised in the flesh of his foreskin. ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಬತ್ತೊಂಬತ್ತು ವರ್ಷದವನಾಗಿದ್ದನು.
25 His son Ishmael was thirteen when he was circumcised in the flesh of his foreskin. ಅವನ ಮಗ ಇಷ್ಮಾಯೇಲನಿಗೆ ಸುನ್ನತಿಯಾದಾಗ, ಅವನು ಹದಿಮೂರು ವರ್ಷದವನಾಗಿದ್ದನು.
26 On that very day Abraham and Ishmael his son were circumcised. ಅಬ್ರಹಾಮನೂ ಅವನ ಮಗ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿ ಮಾಡಿಸಿಕೊಂಡರು.
27 All the men of his household—house-born and bought with silver from a foreigner—were circumcised with him. ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದವರಿಗೂ ಪರರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]