Skip to content
The Believer's Library

Biblica® Open Kannada Contemporary Version 2022

Genesis 18 OKCV

Show OKCV only
Verse × ×
1 Now our Father appeared to Abraham at the oaks of Mamre while he sat at his tent's entrance in the day's heat. ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.
2 He looked up and saw three men standing near him. Seeing them, he ran from his tent entrance to meet them and bowed to the ground. ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.
3 He said, "My Sovereign Father, if I have found favor with you, please don't pass by your servant. ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.
4 Let a little water be brought to wash your feet and rest under the tree. ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ, ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ, ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
5 Let me bring a piece of bread so you can refresh yourselves before you go on, since you've come to your servant." They said, "Do as you've said." ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.
6 Abraham hurried into the tent to Sarah and said, "Quick, take about twenty-five pounds of fine flour, knead it, and make bread." ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.
7 Abraham ran to the herd, took a tender, good calf, and gave it to the servant, who hurried to prepare it. ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.
8 He took curds, milk, and the calf that had been prepared, set them before the men, then stood by them under the tree while they ate. ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು.
9 They asked him, "Where is Sarah your wife?" "There, in the tent," he said. ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.
10 Then our Father said, "I will certainly return to you at this time next year, and Sarah your wife will have a son." Sarah listened at the tent entrance behind him. ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
11 Abraham and Sarah were old, advanced in years; Sarah had stopped menstruating. ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು.
12 Sarah laughed within herself, saying, "After I'm worn out, will I have pleasure, my lord being old too?" ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.
13 Then our Father said to Abraham, "Why did Sarah laugh, saying, 'Will I really bear a child, old as I am?' ಆಗ ಯೆಹೋವ ದೇವರು ಅಬ್ರಹಾಮನಿಗೆ, “ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು?
14 Is anything too hard for your Father? I will return to you at the appointed time next year, and Sarah will have a son." ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.
15 Sarah denied it, saying, "I didn't laugh," for she was afraid. He said, "No, you did laugh." ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.
16 The men set out from there and looked down toward Sodom, and Abraham walked with them to see them off. ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.
17 Now our Father said, "Will I hide from Abraham what I am about to do, ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?
18 since Abraham will surely become a great and mighty nation, and all earth's nations will be blessed through him? ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.
19 For I have chosen him, so that he will direct his children and his household after him to keep my way by doing what is right and just, so that I may fulfill what I have promised Abraham." ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.
20 Then our Father said, "The cry against Sodom and Gomorrah is great, and their sin very serious, ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.
21 that I will go down and see whether they have done entirely as the outcry reaching me claims; if not, I will know." ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಆ ಊರಿನವರ ಕೂಗಿನ ಪ್ರಕಾರವೇ, ಅವರು ಮಾಡಿದ್ದಾರೋ, ಇಲ್ಲವೋ, ಎಂದು ನೋಡಿ ತಿಳಿದುಕೊಳ್ಳುವೆನು,” ಎಂದುಕೊಂಡರು.
22 So the men turned from there and went toward Sodom, while Abraham remained standing before our Father. ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.
23 Then Abraham drew near and said, "Will you really sweep away the righteous along with the wicked? ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?
24 Suppose fifty righteous are in the city—will you really sweep it away, not sparing the place for the sake of the fifty righteous in it? ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?
25 Far be it from you to kill the righteous with the wicked, treating them alike! Far be it from you! Won't the Judge of all the earth do justice?" ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.
26 Our Father said, "If I find fifty righteous within the city of Sodom, I'll spare the whole place for them." ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.
27 Abraham said, "I have dared to speak to my Sovereign Father, though only dust and ashes. ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.
28 Suppose the fifty righteous lack five. Will you destroy the whole city for five?" And our Father said, "I won't destroy it if I find forty-five there." ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.
29 He spoke to him again: "Suppose forty are found there." He said, "For forty's sake I won't do it." ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.
30 Abraham said, "May my Sovereign Father not be angry, and let me speak. Suppose thirty are found there." He said, "I will not do it if I find thirty there." ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.
31 Abraham said, "Since I have dared to speak to my Sovereign Father, suppose only twenty are found there." He said, "For twenty's sake, I will not destroy it." ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.
32 Then he said, "May my Sovereign Father not be angry, let me speak just once more: suppose only ten are found there." And our Father said, "For ten's sake, I will not destroy it." ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.
33 When our Father finished speaking with Abraham, he left; Abraham returned to his place. ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]