Skip to content
The Believer's Library

Biblica® Open Kannada Contemporary Version 2022

Genesis 19 OKCV

Show OKCV only
Verse × ×
1 The two angels came to Sodom that evening; Lot sat at Sodom's gate. Seeing them, he rose to meet them and bowed, face to the ground. ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ,
2 "Please, my lords," he said, "stop at your servant's house, spend the night, wash your feet; rise early and go your way." "No," they said, "we'll spend the night in the square." “ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.
3 He pressed them hard, so they turned aside to him, entered his house. He made them a feast, baked bread without yeast, and they ate. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.
4 Before they lay down, the men of the city—Sodom's men—young and old, all the people, without exception, surrounded the house. ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.
5 They called to Lot, "Where are the men who came to you tonight? Bring them out—let us have sex with them." ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು.
6 Lot went out to them at the entrance, shutting the door behind him, ಆಗ ಲೋಟನು ಅವರ ಬಳಿಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು,
7 and said, "Please, my brothers, don't do evil. “ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ.
8 I have two daughters who've never been with a man. I'll bring them out to you—do to them as you please. But do nothing to these men; they've come under my roof's protection." ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು.
9 They said, "Get back!" Then, "This outsider came to stay, and now he judges us? We'll treat you worse than them." They pressed hard against Lot and moved in to break down the door. ಆದರೆ ಅವರು, “ಹಿಂದಕ್ಕೆ ಸರಿ,” ಎಂದು ಹೇಳಿ, “ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿಯಾಗಲು ಯತ್ನಿಸುತ್ತಿದ್ದಾನೆ. ಈಗ ನಿನಗೆ ಅವರಿಗಿಂತ ಹೆಚ್ಚು ಕೇಡು ಮಾಡುತ್ತೇವೆ,” ಎಂದರು. ಅವರು ಲೋಟನನ್ನು ಬಲವಾಗಿ ತುಳಿದು, ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
10 But the men reached out, pulled Lot into the house with them, and shut the door. ಆಗ ಲೋಟನ ಮನೆಗೆ ಬಂದಿದ್ದ ಆ ದೂತರಿಬ್ಬರು ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಒಳಕ್ಕೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.
11 They struck the men at the house door blind, small to great, till they wore themselves out searching for the door. ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.
12 The men said to Lot, "Who else do you have here—son-in-law, sons, daughters, anyone in the city who's yours? Bring them out of this place. ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ.
13 We're about to destroy this place - the outcry against its people has grown great before our Father, and our Father sent us to destroy it." ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”
14 Lot went out and spoke to his sons-in-law, betrothed to his daughters: "Get up, leave this place—our Father is about to destroy the city!" Yet his sons-in-law took it as a joke. ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.
15 At dawn the angels urged Lot: "Get up, take your wife and two daughters here, or you'll be consumed in the city's punishment." ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.
16 He hesitated, so the men grabbed his hand, his wife's, and two daughters', our Father pitying him, and they brought him out and left him outside the city. ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು.
17 When they were brought outside, one of them said, "Run for your life! Don't look back or stop anywhere in the valley. Flee to the hills, or you'll be swept away." ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.
18 But Lot said to them, "No, please, my Sovereign Father. ಅದಕ್ಕೆ ಲೋಟನು, “ಸ್ವಾಮಿ, ಅದು ನನ್ನಿಂದಾಗದು.
19 Your servant has found favor with you; you've shown great kindness saving my life. But I can't flee to the hills—disaster will catch me and I'll die. ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.
20 Please—that town is near, small enough to run to. Let me escape there—isn't it small?—so I may live." ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.
21 He said to him, "I grant this favor too: I won't overthrow the town you mentioned. ದೂತನು ಅವನಿಗೆ, “ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ. ನೋಡು, ನೀನು ಹೇಳಿದ ಆ ಊರನ್ನು ನಾನು ಕೆಡವಿ ಹಾಕುವುದಿಲ್ಲ.
22 Hurry, flee there—I can do nothing until you arrive." That's why the town is named Zoar. ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
23 The sun had risen over the land when Lot reached Zoar. ಲೋಟನು ಚೋಗರಿಗೆ ಬಂದಾಗ ಸೂರ್ಯೋದಯವಾಗಿತ್ತು.
24 Then our Father rained sulfur and fire out of heaven on Sodom and Gomorrah. ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.
25 He destroyed those cities, the whole plain, all the cities' residents, and everything growing on the ground. ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.
26 But Lot's wife looked back from behind him, and she became a pillar of salt. ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು.
27 Early the next morning Abraham went to the place where he had stood before our Father. ಅಬ್ರಹಾಮನು ಬೆಳಿಗ್ಗೆ ಎದ್ದು, ತಾನು ಯೆಹೋವ ದೇವರ ಸನ್ನಿಧಿಯಲ್ಲಿ ನಿಂತಿದ್ದ ಆ ಸ್ಥಳಕ್ಕೆ ಹೋದನು.
28 He looked toward Sodom, Gomorrah, and the whole plain, and saw smoke rising from the land like smoke from a kiln. ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.
29 When our Father destroyed the plain's cities, our Father remembered Abraham and brought Lot out of the overthrow of the cities where Lot lived. ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.
30 Lot went up from Zoar to live in the mountains with his two daughters, afraid to stay in Zoar; he and his two daughters lived in a cave. ಲೋಟನು ಚೋಗರಿನಲ್ಲಿ ವಾಸಿಸಲು ಭಯಪಟ್ಟು, ತನ್ನ ಇಬ್ಬರು ಪುತ್ರಿಯರ ಸಂಗಡ ಬೆಟ್ಟದ ಮೇಲೆ ಹೋಗಿ ವಾಸಮಾಡಿದನು. ಅಲ್ಲಿ ಅವನೂ ಅವನ ಇಬ್ಬರು ಪುತ್ರಿಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
31 The firstborn told the younger, "Our father is old; no man remains in the land to sleep with us, as is customary everywhere. ಆಗ ಹಿರಿಯ ಮಗಳು ಚಿಕ್ಕವಳಿಗೆ, “ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮೊಂದಿಗಿರಲು ನಮ್ಮ ಸುತ್ತಲಿನ ಪ್ರದೇಶದಲ್ಲಿ ಪುರುಷರಿಲ್ಲ.
32 Come, let's give our father wine, then sleep with him, and keep offspring alive through our father." ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.
33 That night they gave their father wine; the firstborn went in and lay with him. He never knew when she lay down or rose. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಹಿರಿಯ ಮಗಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.
34 Next day the firstborn said to the younger, "I slept with my father last night. Let's give him wine again tonight—go sleep with him, so we preserve offspring from our father." ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.
35 That night too they had their father drink wine; the younger got up and slept with him, and he did not know when she lay down or when she got up. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಚಿಕ್ಕವಳು ಎದ್ದು, ಅವನ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.
36 So both of Lot's daughters became pregnant by their father. ಈ ಪ್ರಕಾರ ಲೋಟನ ಇಬ್ಬರು ಪುತ್ರಿಯರು ತಮ್ಮ ತಂದೆಯಿಂದ ಗರ್ಭಿಣಿಯರಾದರು.
37 The firstborn bore a son, named him Moab—father of the Moabites to this day. ಹಿರಿಯ ಮಗಳು ಮಗನನ್ನು ಹೆತ್ತು, ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗಿನ ಮೋವಾಬ್ಯರಿಗೂ ಇವನೇ ತಂದೆ.
38 The younger also had a son and named him Ben-Ammi—father of the Ammonites to this day. ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]