Skip to content
The Believer's Library

Biblica® Open Kannada Contemporary Version 2022

Genesis 2 OKCV

Show OKCV only
Verse × ×
1 So the heavens and the earth were completed in all their vast array. ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.
2 By the seventh day our Father had completed his work, and he rested on the seventh day from everything he had made. ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
3 And our Father blessed the seventh day, making it holy, because on it he rested from all the work of creation he had done. ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.
4 This is the history of the heavens and the earth when they were created, when our Father made earth and heavens. ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.
5 No shrub of the field yet existed on the earth, no plant of the field had yet sprouted, for our Father had not sent rain on the earth, and there was no man to work the ground, ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
6 but springs came up from the earth and watered the whole surface of the ground. ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.
7 Then our Father formed the man from dust of the ground, breathed into his nostrils the breath of life, and the man became a living person. ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.
8 Then our Father planted a garden in Eden, in the east, and put there the man he had formed. ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.
9 From the ground our Father grew every tree lovely to see and good to eat, with the tree of life in the garden's center and the tree of knowing good and evil. ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.
10 A river flowed from Eden to water the garden; from there it divided into four rivers. ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು.
11 The first is named Pishon; it flows around all the land of Havilah, where gold is found. ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
12 The gold of that land is good; aromatic resin and onyx are also there. ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.
13 The name of the second river is the Gihon; it winds through the entire land of Cush. ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.
14 The third river's name is Tigris, flowing east of Assyria. The fourth river is the Euphrates. ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.
15 Our Father took the man and set him in the garden of Eden to work it and guard it. ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.
16 And our Father commanded the man, "You are free to eat from any tree in the garden; ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.
17 but you must not eat from the tree of knowledge of good and evil, for you will surely die the day you eat from it." ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.
18 Then our Father said, "It is not good for the man to be alone. I will make a helper matching him." ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.
19 From the ground our Father formed every field animal and every sky bird, then brought each to the man to see what he'd name it. Whatever the man named each living creature, that was its name. ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
20 The man named all livestock, birds of the sky, and all wild animals, but for Adam no helper matching him was found. ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆದಾಮನಿಗೆ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ.
21 So our Father made the man fall into a deep sleep, and while he slept, took one of his ribs and closed the flesh over it. ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.
22 Then our Father built a woman from the rib he took from the man, and brought her to the man. ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
23 The man said, "At last! This is bone of my bones and flesh of my flesh; she will be called 'woman,' for she was taken out of man." ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”
24 So a man leaves his father and mother, joins his wife, and they become one flesh. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
25 The man and his wife were both naked, and they were not ashamed. ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]