Skip to content
The Believer's Library

Biblica® Open Kannada Contemporary Version 2022

Genesis 20 OKCV

Show OKCV only
Verse × ×
1 Abraham traveled from there to the Negev, settled between Kadesh and Shur, and lived as a foreigner in Gerar. ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.
2 Abraham said of Sarah, his wife, "She is my sister." So Abimelech king of Gerar sent for her and took Sarah. ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.
3 But our Father came to Abimelech in a dream that night: "You are as good as dead because of the woman you took, for she is a married woman." ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.
4 Abimelech had not gone near her. He said, "Sovereign God, would you destroy even an innocent nation? ಆದರೆ ಅಬೀಮೆಲೆಕನು ಆಕೆಯ ಸಮೀಪಕ್ಕೆ ಬಂದಿರಲಿಲ್ಲ. ಆದ್ದರಿಂದ ಅವನು, “ಪ್ರಭುವೇ, ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?
5 Didn't he himself tell me, 'She's my sister'? And she herself also said, 'He's my brother.' I did this with a sincere heart and innocent hands." ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.
6 Then our Father said to him in the dream, "Yes, I know you did this with integrity of heart, and I have kept you from sinning against me—that's why I didn't let you touch her. ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.
7 Now return the man's wife, for he's a prophet who will pray for you, and you'll live. If you don't return her, know you will surely die, you and all who are yours." ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.
8 Abimelech rose early that morning, called all his servants, and told them all that had happened; the men were badly frightened. ಅಬೀಮೆಲೆಕನು ಬೆಳಿಗ್ಗೆ ಎದ್ದು, ತನ್ನ ಸೇವಕರೆಲ್ಲರನ್ನೂ ಕರೆದು, ಇವುಗಳನ್ನೆಲ್ಲಾ ಅವರಿಗೆ ಹೇಳಿದನು. ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.
9 Abimelech summoned Abraham and asked, "What have you done to us? How did I sin against you, that you brought a great sin on me and my kingdom? You've done to me what should never be done." ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.
10 Abimelech also said to Abraham, "What did you have in mind, that you did such a thing?" ಇದಲ್ಲದೆ ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಹೀಗೆ ಮಾಡಿದ ಕಾರಣವೇನು?” ಎಂದು ವಿಚಾರಿಸಿದನು.
11 Abraham said, "I thought: surely there's no fear of our Father here, and they will kill me for my wife." ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.
12 Besides, she truly is my sister, my father's daughter but not my mother's, and she became my wife. ಇದಲ್ಲದೆ ನಿಜವಾಗಿಯೂ ಅವಳು ನನ್ನ ತಂಗಿ, ಆದರೆ ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ, ನನಗೆ ಹೆಂಡತಿಯಾದಳು.
13 When our Father made me wander from my father's house, I told her: Show me this kindness—wherever we go, say of me, "He is my brother." ದೇವರು ನನ್ನ ತಂದೆಯ ಮನೆಯೊಳಗಿಂದ ನನ್ನನ್ನು ದೇಶಾಂತರಕ್ಕೆ ಕರೆದಾಗ, ನಾನು ಅವಳಿಗೆ, ನೀನು ನನಗೆ ತೋರಿಸತಕ್ಕ ದಯೆಯು ಯಾವುದೆಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ, ‘ಇವನು ನನ್ನ ಅಣ್ಣ,’ ಎಂದು ಹೇಳು ಎಂದು ತಿಳಿಸಿದೆನು,” ಎಂದನು.
14 Abimelech took sheep, cattle, and male and female servants, gave them to Abraham, and returned Sarah his wife to him. ಆಗ ಅಬೀಮೆಲೆಕನು ಕುರಿಗಳನ್ನೂ ಎತ್ತುಗಳನ್ನೂ ದಾಸರನ್ನೂ ದಾಸಿಯರನ್ನೂ ತೆಗೆದುಕೊಂಡು ಅಬ್ರಹಾಮನಿಗೆ ಕೊಟ್ಟು, ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿಕೊಟ್ಟನು.
15 Abimelech said, "My land is open to you; settle wherever you please." ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.
16 And to Sarah he said, "Look, I am giving your brother 1,000 pieces of silver. This is to cover the wrong done to you in the eyes of all who are with you; before everyone you are fully cleared." ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣವನ್ನು ಕೊಟ್ಟಿದ್ದೇನೆ. ನೋಡು, ನಡೆದ ಘಟನೆಗೆ ಇದು ಪ್ರಾಯಶ್ಚಿತ್ತವಾಗಿದೆ. ನಿನ್ನ ಸಂಗಡ ಇರುವವರೆಲ್ಲರಿಗೂ ಉಳಿದವರೆಲ್ಲರಿಗೂ ನೀನು ನಿರ್ದೋಷಿಯೆಂದು ಇದು ಸಾಕ್ಷಿಯಾಗಿರಲಿ,” ಎಂದನು.
17 Abraham prayed to our Father, who healed Abimelech, his wife, and his female servants, so they could bear children again, ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.
18 for our Father had completely closed up every womb in Abimelech's household because of Sarah, Abraham's wife. ಏಕೆಂದರೆ ಯೆಹೋವ ದೇವರು ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರನ್ನು ಬಂಜೆಯರನ್ನಾಗಿ ಮಾಡಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]