Skip to content
The Believer's Library

Biblica® Open Kannada Contemporary Version 2022

Genesis 21 OKCV

Show OKCV only
Verse × ×
1 Now our Father visited Sarah, just as he had said, and did for her what he had promised. ಯೆಹೋವ ದೇವರು ಸಾರಳಿಗೆ ವಾಗ್ದಾನ ಮಾಡಿದಂತೆ ಆಕೆಗೆ ದಯೆತೋರಿಸಿದರು.
2 Sarah conceived, bore Abraham a son in his old age, at the set time our Father had promised him. ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
3 Abraham named the son Sarah had borne him Isaac. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ, ಇಸಾಕ, ಎಂದು ಹೆಸರಿಟ್ಟನು.
4 Abraham circumcised his son Isaac at eight days old, as our Father had commanded him. ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು.
5 Abraham was one hundred years old when his son Isaac was born to him. ಅಬ್ರಹಾಮನ ಮಗ ಇಸಾಕನು ಜನಿಸಿದಾಗ ಅವನು ನೂರು ವರ್ಷದವನಾಗಿದ್ದನು.
6 Sarah said, "our Father made me laugh; everyone who hears will laugh with me." ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.
7 She added, "Who would have told Abraham that Sarah would nurse children? Yet I've borne him a son in his old age." ಸಾರಳು ಮಕ್ಕಳಿಗೆ ಹಾಲು ಕುಡಿಸುವಳೆಂದು ಅಬ್ರಹಾಮನಿಗೆ ಯಾರು ಹೇಳುತ್ತಿದ್ದರು? ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು,” ಎಂದಳು.
8 The child grew and was weaned; the day Isaac was weaned, Abraham threw a great feast. ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.
9 But Sarah saw the son whom Hagar the Egyptian had borne to Abraham, and he was mocking. ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ,
10 She said to Abraham, "Drive out this slave woman and her son; this slave woman's son will never inherit with my son Isaac." ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು.
11 This troubled Abraham deeply, because it concerned his son. ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು.
12 But our Father said to Abraham, "Don't be upset about the boy and your slave woman. Listen to Sarah in all she tells you, for your offspring will be named through Isaac. ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.
13 I will also make the slave woman's son a nation, since he is your offspring." ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು.
14 Early next morning Abraham took bread and a skin of water, gave them to Hagar, put them on her shoulder along with the child, and sent her away. She left and wandered the wilderness of Beersheba. ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.
15 When the water in the waterskin was gone, she put the boy under one of the bushes. ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,
16 She went and sat down about a bowshot away, for she said, "I can't watch the boy die." Then she sat there, lifted her voice, and wept. ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.
17 Our Father heard the boy's voice; his messenger called to Hagar from heaven: "What's wrong, Hagar? Don't be afraid—our Father has heard the boy's voice where he lies. ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.
18 Get up, lift the boy and take him by the hand, for I will make him a great nation." ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು.
19 Then our Father opened her eyes; she saw a well of water, went and filled the waterskin, then gave the boy a drink. ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು.
20 Our Father was with the boy as he grew up. He lived in the wilderness and became an archer. ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.
21 He lived in the wilderness of Paran, and his mother got him a wife from Egypt. ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.
22 At that time, Abimelech and Phicol, commander of his army, said to Abraham, "God is with you in all you do. ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.
23 Now swear to me here by God that you won't betray me, my children, or my descendants. Show me and this land where you've lived as a foreigner the same kindness I've shown you." ಆದ್ದರಿಂದ ನೀನು ನನಗೂ, ನನ್ನ ಮಗನಿಗೂ, ನನ್ನ ಮೊಮ್ಮಗನಿಗೂ ವಂಚನೆ ಮಾಡುವುದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣಮಾಡು. ನಾನು ನಿನಗೆ ಒಳ್ಳೆಯದನ್ನೇ ಮಾಡಿದ ಪ್ರಕಾರ, ನೀನು ನನಗೂ, ನೀನು ವಾಸಮಾಡುತ್ತಿರುವ ಈ ದೇಶಕ್ಕೂ ಒಳ್ಳೆಯದನ್ನೇ ಮಾಡಬೇಕು,” ಎಂದನು.
24 Abraham said, "I swear it." ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು.
25 Then Abraham complained to Abimelech about a well of water that Abimelech's servants had seized. ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.
26 Abimelech replied, "I don't know who did this. You didn't tell me, and I only heard of it today." ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು.
27 Abraham took sheep and cattle and gave them to Abimelech, and the two made a covenant. ಆಗ ಅಬ್ರಹಾಮನು ಕುರಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು. ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
28 Abraham set apart seven ewe lambs from the flock, ಅಬ್ರಹಾಮನು ಹಿಂಡಿನಿಂದ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ಮಾಡಿ ನಿಲ್ಲಿಸಿದನು.
29 and Abimelech asked Abraham, "What is the meaning of these seven ewe lambs you have set apart?" ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಆ ಏಳು ಹೆಣ್ಣು ಕುರಿಮರಿಗಳನ್ನು ಬೇರೆಯಾಗಿ ನಿಲ್ಲಿಸಿದ ಅರ್ಥ ಏನು?” ಎಂದನು.
30 He replied, "Accept these seven ewe lambs from me as proof that I dug this well." ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು.
31 So that place was called Beersheba, because there the two of them swore an oath. ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು.
32 So they made a covenant at Beersheba. Then Abimelech and Phicol, his army commander, returned to Philistine land. ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು.
33 Abraham planted a tamarisk in Beersheba, and there he called on the name of our Father, El Olam—our everlasting Father. ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.
34 And Abraham stayed in the land of the Philistines for a long time. ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]