Skip to content
The Believer's Library

Biblica® Open Kannada Contemporary Version 2022

Genesis 22 OKCV

Show OKCV only
Verse × ×
1 Some time later, our Father tested Abraham. He said to him, "Abraham!" "Here I am," Abraham replied. ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.
2 Then our Father said, "Take your son, your only son, whom you love—Isaac. Go to the land of Moriah and offer him there as a burnt offering on one of the mountains I will name." ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.
3 Early next morning Abraham saddled his donkey, took two of his young men and his son Isaac, split the wood for the burnt offering, and set out for the place our Father had told him about. ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
4 On the third day Abraham looked up and saw the place in the distance. ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಆ ಸ್ಥಳವು ದೂರದಲ್ಲಿ ಕಾಣಿಸಿತು.
5 He told his young men, "Stay here with the donkey. The boy and I will go over there, worship, and return to you." ಅಬ್ರಹಾಮನು ತನ್ನ ಸೇವಕರಿಗೆ, “ಕತ್ತೆಯ ಸಂಗಡ ಇಲ್ಲಿಯೇ ಇರಿ. ನಾನೂ, ಹುಡುಗನೂ ಅಲ್ಲಿಗೆ ಹೋಗಿ, ಆರಾಧನೆ ಮಾಡಿ, ನಿಮ್ಮ ಬಳಿಗೆ ಹಿಂದಿರುಗಿ ಬರುತ್ತೇವೆ,” ಎಂದನು.
6 Abraham took the burnt offering wood and laid it on his son Isaac, carrying the fire and knife himself. The two walked on together. ಅಬ್ರಹಾಮನು ದಹನಬಲಿಗಳ ಕಟ್ಟಿಗೆಗಳನ್ನು ತೆಗೆದುಕೊಂಡು, ತನ್ನ ಮಗ ಇಸಾಕನ ಮೇಲೆ ಹೊರಿಸಿ; ಬೆಂಕಿಯನ್ನೂ, ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡನು. ಅವರಿಬ್ಬರೂ ಹೊರಟು ಹೋದರು.
7 Isaac said to his father Abraham, "My father?" "Here I am, my son," Abraham replied. "The fire and wood are here," Isaac said, "but where is the lamb for the burnt offering?" ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.
8 Abraham answered, "Our Father himself will provide the lamb for the burnt offering, my son." And the two walked on together. ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
9 When they reached the place our Father had told him about, Abraham built the altar, arranged the wood, tied up his son Isaac, and laid him on the altar atop the wood. ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
10 Then Abraham reached out his hand and took the knife to kill his son. ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವುದಕ್ಕೆ ಕತ್ತಿ ತೆಗೆದುಕೊಂಡನು.
11 But our Father's messenger called to him from heaven, "Abraham! Abraham!" "Here I am," he answered. ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.
12 "Don't lay a hand on the boy," he said. "Do nothing to him. Now I know you fear me, since you haven't held back your son, your only son, from me." ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.
13 Abraham looked up and saw a ram behind him, caught by its horns in a thicket. He went, took the ram, and offered it as a burnt offering instead of his son. ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು, ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
14 Abraham named that place "The Father Will Provide," meaning "our Father will provide." To this day it is said, "On his mountain it will be provided." ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.
15 The messenger of our Father called to Abraham from heaven a second time, ಯೆಹೋವ ದೇವರ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,
16 and said, "I swear by myself, declares our Father: because you have done this and not held back your son, your only son, “ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ,
17 I will surely bless you and surely multiply your offspring like the stars of the sky and the sand on the seashore. Your offspring will possess the gate of his enemies, ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
18 and through your offspring all nations of the earth will be blessed, because you obeyed my voice." ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.
19 Abraham returned to his young men, and they set out together for Beersheba. Abraham settled in Beersheba. ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂದಿರುಗಿ ಬಂದನು. ಅವರೆಲ್ಲರೂ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.
20 Some time later, Abraham was told, "Milcah too has borne sons to your brother Nahor: ಕೆಲ ಸಮಯದ ನಂತರ ಕೆಲವರು ಅಬ್ರಹಾಮನಿಗೆ, “ಮಿಲ್ಕಾಳು ತಾಯಾಗಿದ್ದಾಳೆ. ನಿನ್ನ ಸಹೋದರ ನಾಹೋರನಿಗೆ ಅವಳು ಮಕ್ಕಳನ್ನು ಹೆತ್ತಿದ್ದಾಳೆ,” ಎಂದು ತಿಳಿಸಿದರು.
21 Uz the firstborn, Buz his brother, Kemuel (the father of Aram), ಅವರು ಯಾರೆಂದರೆ, ಅವನ ಚೊಚ್ಚಲು ಮಗ ಊಚ್, ಅವನ ಸಹೋದರ ಬೂಜ್, ಅರಾಮನ ತಂದೆ ಕೆಮೂಯೇಲ್,
22 Chesed, Hazo, Pildash, Jidlaph, and Bethuel." ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂಯೇಲ್.
23 Bethuel became the father of Rebekah. These were the eight sons Milcah bore to Nahor, Abraham's brother. ಬೆತೂಯೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಾಳು ಅಬ್ರಹಾಮನ ಸಹೋದರ ನಾಹೋರನಿಗೆ ಹೆತ್ತಳು.
24 Nahor's concubine, whose name was Reumah, also bore children: Tebah, Gaham, Tahash, and Maacah. ಅವನ ಉಪಪತ್ನಿ ರೂಮಳೆಂಬವಳು ಸಹ ಟೆಬಹ, ಗಹಮ, ತಹಷ, ಮಾಕಾ ಎಂಬುವರನ್ನು ಹೆತ್ತಳು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]