Skip to content
The Believer's Library

Biblica® Open Kannada Contemporary Version 2022

Genesis 23 OKCV

Show OKCV only
Verse × ×
1 Sarah lived to be 127 years old; these were the years of Sarah's life. ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು.
2 Sarah died at Kiriath-arba, Hebron, in Canaan. Abraham came to mourn and weep for her. ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.
3 Then Abraham rose from beside her body and said to the Hittites, ಆಗ ಅಬ್ರಹಾಮನು ತನ್ನ ಹೆಂಡತಿಯ ಶವದ ಬಳಿಯಿಂದ ಎದ್ದು, ಹಿತ್ತಿಯರ ಬಳಿಗೆ ಬಂದು, ಅವರಿಗೆ,
4 "I am a foreigner and stranger among you; give me burial ground among you, to bury my dead out of my sight." “ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.
5 The Hittites replied to Abraham. ಹಿತ್ತಿಯರು ಅಬ್ರಹಾಮನಿಗೆ ಉತ್ತರಕೊಟ್ಟು,
6 "Hear us, my lord: you are a prince of God among us. Bury your dead in our best tomb; none of us will refuse you his tomb for burying your dead." “ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.
7 Abraham rose and bowed low before the people of the land, the Hittites. ಆಗ ಅಬ್ರಹಾಮನು ಎದ್ದು, ಆ ದೇಶದ ಜನರಾದ ಹಿತ್ತಿಯರ ಮುಂದೆ ತಲೆಬಾಗಿ,
8 He said to them, "If you're willing I bury my dead away from me, hear me, and plead with Ephron son of Zohar for me, ಅವರ ಸಂಗಡ ಮಾತನಾಡಿ, “ನಾನು ನನ್ನ ಹೆಂಡತಿಯ ಶವವನ್ನು ಹೂಳಿಡುವುದು ನಿಮ್ಮ ಮನಸ್ಸಿಗೆ ಸರಿಬಿದ್ದರೆ, ನನ್ನ ಮಾತು ಕೇಳಿ ಚೋಹರನ ಮಗ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
9 to give me his cave of Machpelah, at his field's edge. Let him sell it to me among you, for full price, as burial property." ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.
10 Ephron the Hittite, sitting among the Hittites, answered Abraham before all the Hittites entering his city's gate. ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,
11 "No, my lord, listen: I give you the field, I give you the cave in it. Before my people I give it to you. Bury your dead." “ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.
12 Again Abraham bowed before the people of the land. ಆಗ ಅಬ್ರಹಾಮನು ದೇಶದ ಜನರ ಮುಂದೆ ತಲೆಬಾಗಿ,
13 He said to Ephron before the people, "If you're willing, hear me: I'll pay for the field—take it from me, so I can bury my dead there." ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.
14 Ephron replied to Abraham. ಎಫ್ರೋನನು ಅಬ್ರಹಾಮನಿಗೆ ಉತ್ತರವಾಗಿ,
15 "My lord, hear me: land worth about ten pounds of silver—what is that between us? Bury your dead." “ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.
16 Abraham agreed to Ephron's terms and weighed out for him the price he had named before the Hittites: about ten pounds of silver, at the standard weight used by merchants. ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.
17 Ephron's field in Machpelah, facing Mamre—the field, its cave, and every tree within its borders, all around—was confirmed, ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,
18 to Abraham as his property, before all the Hittites who came to his city's gate. ಹಿತ್ತಿಯರ ಮುಂದೆಯೂ, ಅವರ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ದೃಢವಾಯಿತು.
19 After this, Abraham buried Sarah his wife in the cave of Machpelah's field, facing Mamre—Hebron—in the land of Canaan. ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿಟ್ಟನು.
20 So the field and its cave were deeded to Abraham by the Hittites as a burial holding. ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]