Skip to content
The Believer's Library

Biblica® Open Kannada Contemporary Version 2022

Genesis 28 OKCV

Show OKCV only
Verse × ×
1 Then Isaac called Jacob, blessed him, and commanded him: "Take no wife from Canaan's daughters. ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಆಜ್ಞಾಪಿಸಿದ್ದೇನೆಂದರೆ, “ಕಾನಾನ್ಯರ ಸ್ತ್ರೀಯರನ್ನು ನೀನು ಮದುವೆಯಾಗಬಾರದು.
2 Go to Paddan-aram, to Bethuel's house, your mother's father, and take a wife there from Laban's daughters, your mother's brother. ಕೂಡಲೇ ನಿನ್ನ ತಾಯಿಯ ತಂದೆ ಬೆತೂಯೇಲನು ಇರುವ ಪದ್ದನ್ ಅರಾಮಿಗೆ ಹೋಗು. ನಿನ್ನ ತಾಯಿಯ ಸಹೋದರ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಹೆಂಡತಿಯನ್ನಾಗಿ ಮಾಡಿಕೋ.
3 May El Shaddai—your Father Almighty—bless you, make you fruitful, multiply you, so you become a company of peoples. ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.
4 May he give you and your offspring with you the blessing of Abraham, that you may inherit the land where you live as a foreigner, which our Father gave to Abraham." ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.
5 Isaac sent Jacob away; he went to Paddan-aram, to Laban son of Bethuel the Aramean, brother of Rebekah, mother of Jacob and Esau. ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
6 Esau discovered that Isaac had blessed Jacob and sent him to Paddan-aram to take a wife from there, charging him as he blessed him, "Do not take a wife from Canaanite women," ಇಸಾಕನು ಯಾಕೋಬನನ್ನು ಆಶೀರ್ವದಿಸಿ, ಅವನಿಗೆ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ, ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ, ಅವನಿಗೆ, “ಕಾನಾನ್ಯರ ಪುತ್ರಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳಬಾರದು,” ಎಂದು ಆಜ್ಞಾಪಿಸಿದ್ದನ್ನೂ, ಏಸಾವನು ತಿಳಿದುಕೊಂಡನು.
7 and that Jacob had obeyed his father and his mother and had gone to Paddan-aram. ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ, ಪದ್ದನ್ ಅರಾಮಿಗೆ ಹೋದದ್ದನ್ನೂ
8 So Esau saw that the daughters of Canaan were displeasing to his father Isaac. ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,
9 So Esau went to Ishmael and took Mahalath, daughter of Ishmael son of Abraham and sister of Nebaioth, as a wife besides his other wives. ಅವನು ಇಷ್ಮಾಯೇಲನ ಬಳಿಗೆ ಹೋಗಿ, ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗ ಇಷ್ಮಾಯೇಲನ ಮಗಳೂ, ನೆಬಾಯೋತನ ತಂಗಿಯೂ ಆಗಿರುವ ಮಹಲತ್ ಎಂಬವಳನ್ನೂ ಮದುವೆಮಾಡಿಕೊಂಡನು.
10 Jacob left Beersheba and set out toward Haran. ಆಗ ಯಾಕೋಬನು ಬೇರ್ಷೆಬದಿಂದ ಹಾರಾನಿನ ಕಡೆಗೆ ಹೊರಟನು.
11 He reached a place and stayed the night, for the sun set. He took one of the stones of the place, put it under his head, and lay down in that place to sleep. ಅವನು ಒಂದು ಸ್ಥಳಕ್ಕೆ ಸೇರಿದಾಗ, ಸೂರ್ಯಾಸ್ತಮವಾದದ್ದರಿಂದ ಅಲ್ಲಿ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದು ತಲೆ ದಿಂಬನ್ನಾಗಿ ಇಟ್ಟುಕೊಂಡು, ಆ ಸ್ಥಳದಲ್ಲಿ ಮಲಗಿಕೊಂಡನು.
12 He dreamed: there was a stairway set up on the earth, its top reaching heaven, and there were angels of our Father ascending and descending on it. ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
13 And there above it stood our Father, who said, "I am your Father, the God of Abraham your father and of Isaac. I'll give you and your offspring the land you're lying on. ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
14 Your offspring will be like the dust of the earth; you will spread west, east, north, and south. In you and in your offspring, all the families of the earth will be blessed. ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.
15 Know this: I'm with you. I'll guard you wherever you go and bring you back to this land. I won't leave you until I've done what I promised you." ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.
16 Jacob awoke from his sleep and said, "Surely our Father is in this place, and I didn't know!" ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು.
17 He was afraid and said, "How awesome is this place! This is none other than the house of our Father, and this is heaven's gate." ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.
18 Jacob got up early, took the stone he'd put under his head, set it up as a pillar, and poured oil on top of it. ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.
19 He named that place Bethel, though Luz had been the city's previous name. ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.
20 Jacob vowed, "If God is with me and guards me on this journey I'm taking, gives me bread to eat and clothing to wear, ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,
21 and I return safely to my father's house, then our Father will be my Father, ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು.
22 and this stone I've set up as a pillar will be the house of our Father, and of all you give me, I will surely bring you a tenth." ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]