Skip to content
The Believer's Library

Biblica® Open Kannada Contemporary Version 2022

Genesis 29 OKCV

Show OKCV only
Verse × ×
1 Then Jacob continued on his journey and came to the land of the eastern peoples. ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
2 He saw a well in the field, with three flocks lying beside it, since that well watered the flocks, and a large stone lay over its mouth. ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.
3 There all the flocks would gather; shepherds rolled the stone off the well's mouth, watered the sheep, then returned the stone to its place over the well's mouth. ಅಲ್ಲಿ ಮಂದೆಗಳೆಲ್ಲಾ ಕೂಡಿದಾಗ, ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ, ಕುರಿಗಳಿಗೆ ನೀರನ್ನು ಕುಡಿಸಿ, ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.
4 Jacob said to them, "My brothers, where are you from?" "We are from Haran," they replied. ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು.
5 He asked them, "Do you know Laban, the son of Nahor?" "We know him," they answered. ಅದಕ್ಕವನು ಅವರಿಗೆ, “ನಾಹೋರನ ಮೊಮ್ಮಗ ಲಾಬಾನನನ್ನು ನೀವು ಬಲ್ಲಿರೋ?” ಎಂದಾಗ. ಅವರು, “ನಾವು ಅವನನ್ನು ಬಲ್ಲೆವು,” ಎಂದರು.
6 Then he asked, "Is he well?" "He is well," they said. "Look—his daughter Rachel comes with the sheep." ಯಾಕೋಬನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಿದಾಗ, ಆಗ ಅವರು, “ಕ್ಷೇಮವಾಗಿದ್ದಾನೆ, ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.
7 "Look," Jacob said, "the day is still high, too soon to gather the herds. Water the sheep, then go graze them." ಯಾಕೋಬನು ಅವರಿಗೆ, “ಇನ್ನೂ ಬಹಳ ಹೊತ್ತು ಇದೆ. ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ. ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ,” ಎಂದನು.
8 "We can't," they said, "until all the flocks gather and the stone is rolled off the well's mouth. Then we'll water the sheep." ಅದಕ್ಕೆ ಅವರು, “ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಉರುಳಿಸುತ್ತಾರೆ. ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ,” ಎಂದರು.
9 While Jacob was still speaking with them, Rachel came with her father's flock, for she tended it. ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
10 When Jacob saw Rachel, daughter of Laban his mother's brother, and sheep of Laban his mother's brother, he approached, rolled the stone from the well's mouth, and watered the sheep of Laban his mother's brother. ಯಾಕೋಬನು ತನ್ನ ತಾಯಿಯ ಸಹೋದರ ಲಾಬಾನನ ಮಗಳಾದ ರಾಹೇಲಳನ್ನೂ, ಅವಳ ಕುರಿಗಳನ್ನೂ ನೋಡಿದಾಗ, ಯಾಕೋಬನು ಹತ್ತಿರ ಬಂದು, ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ, ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
11 Then Jacob kissed Rachel and wept aloud. ಆಗ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು, ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
12 Jacob told Rachel he was her father's relative, Rebekah's son. She ran and told her father. ಯಾಕೋಬನು ರಾಹೇಲಳಿಗೆ, ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
13 As soon as Laban heard the news about Jacob his sister's son, he ran to meet him, hugged and kissed him, and brought him home. Jacob told Laban everything that had happened. ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.
14 Laban said to him, "You are indeed my bone and flesh." So Jacob stayed with him a full month. ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
15 Laban said to Jacob, "Should you serve me for free just because you're my relative? Tell me—what should your wages be?" ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು.
16 Now Laban had two daughters. The older was named Leah, and the younger was named Rachel. ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು.
17 Leah's eyes were dull, but Rachel was lovely in form and beautiful to look at. ಲೇಯಳ ಕಣ್ಣುಗಳು ಕಾಂತಿಹೀನವಾಗಿದ್ದವು. ಆದರೆ ರಾಹೇಲಳು ಸುಂದರಿಯೂ ರೂಪವತಿಯೂ ಆಗಿದ್ದಳು.
18 Jacob loved Rachel and said, "I'll serve you seven years for your younger daughter Rachel." ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.
19 Laban said, "Better that I give her to you than to another man. Stay here with me." ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.
20 Jacob served seven years for Rachel; they felt like only a few days because he loved her. ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.
21 Jacob said to Laban, "Give me my wife—my time is complete—so I can go in to her." ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.
22 So Laban gathered together all the men of the place and made a feast. ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣ ಮಾಡಿಸಿದನು.
23 That evening he brought his daughter Leah to Jacob, and he was intimate with her. ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು.
24 And Laban gave his servant Zilpah to his daughter Leah as her servant. ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಳನ್ನು, ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
25 In the morning—it was Leah! Jacob said to Laban, "What have you done to me? Didn't I serve you for Rachel? Why did you deceive me?" ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಯಾಕೋಬನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದೆ? ರಾಹೇಲಳಿಗೋಸ್ಕರ ನಾನು ನಿನಗೆ ಸೇವೆಮಾಡಿದೆನಲ್ಲಾ? ಏಕೆ ನನಗೆ ಮೋಸಮಾಡಿದೆ?” ಎಂದನು.
26 Laban replied, "It's not the custom here to give the younger before the firstborn. ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ.
27 Finish this one's bridal week, then we'll give you the other too—for another seven years of work." ಹಿರಿಯಳೊಡನೆ ಈ ವಾರವನ್ನು ಪೂರೈಸು. ತರುವಾಯ ನೀನು ಇನ್ನು ಬೇರೆ ಏಳು ವರ್ಷಗಳವರೆಗೆ ಸೇವೆ ಮಾಡಲು ಒಪ್ಪಿಕೊಂಡರೆ, ನಾನು ಕಿರಿಯ ಮಗಳನ್ನು ನಿನಗೆ ಕೊಡುತ್ತೇನೆ,” ಎಂದನು.
28 Jacob did this, completed her week, and Laban gave him his daughter Rachel as his wife. ಯಾಕೋಬನು ಅದರಂತೆ ಮಾಡಿ, ವಾರವನ್ನು ಪೂರೈಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
29 And Laban gave his servant Bilhah to his daughter Rachel as her servant. ಲಾಬಾನನು ತನ್ನ ಮಗಳಾದ ರಾಹೇಲಳಿಗೆ, ತನ್ನ ದಾಸಿಯಾದ ಬಿಲ್ಹಳನ್ನು ದಾಸಿಯಾಗಿ ಕೊಟ್ಟನು.
30 Jacob slept with Rachel too, and loved her more than Leah. He served Laban seven more years. ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು.
31 When our Father saw that Leah was unloved, he opened her womb; but Rachel was barren. ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.
32 Leah conceived and bore a son, and named him Reuben, for she said, "Our Father has seen my suffering; surely now my husband will love me." ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.
33 She conceived again, bore a son, and said, "Because our Father heard I was unloved, he gave me this one too." So she named him Simeon. ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
34 She conceived again and bore a son, and said, "This time my husband will be joined to me, since I have borne him three sons." So he was named Levi. ಮತ್ತೊಮ್ಮೆ ಲೇಯಳು ಮಗನನ್ನು ಹೆತ್ತು, “ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಏಕೆಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ,” ಎಂದು ಹೇಳಿ, ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.
35 She conceived again and bore a son, and said, "This time I will praise our Father." So she named him Judah. Then she stopped bearing children. ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]