Skip to content
The Believer's Library

Biblica® Open Kannada Contemporary Version 2022

Genesis 3 OKCV

Show OKCV only
Verse × ×
1 The serpent was shrewder than any field animal our Father had made. He asked the woman, "Did God really say, 'You must not eat from any tree in the garden'?" ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.
2 The woman said to the serpent, "We may eat the fruit from the trees in the garden, ಆಗ ಸ್ತ್ರೀಯು ಸರ್ಪಕ್ಕೆ, “ತೋಟದ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.
3 but God said, 'Don't eat the tree's fruit in the garden's middle, or touch it, or you'll die.'" ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.
4 But the serpent said to the woman, "You will certainly not die. ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.
5 God knows that when you eat from it, your eyes will open and you'll be like God, knowing good and evil." ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.
6 The woman saw the tree was good for food, delightful to the eyes, and desirable for wisdom. She took its fruit, ate, gave some to her husband with her, and he ate. ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.
7 Then the eyes of both of them were opened, and they knew they were naked; they sewed fig leaves together and made themselves coverings. ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.
8 They heard the sound of our Father walking in the garden in the cool of the day, and the man and his wife hid from his presence among the garden's trees. ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.
9 But our Father called to the man and said to him, "Where are you?" ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.
10 The man said, "I heard you in the garden and was afraid, for I was naked, so I hid." ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.
11 Our Father said, "Who told you you're naked? Did you eat from the tree I forbade you to eat from?" ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.
12 The man said, "The woman you put with me gave me fruit from the tree, and I ate." ಅದಕ್ಕೆ ಮನುಷ್ಯನು, “ನೀನು ನನ್ನ ಸಂಗಡ ಇರಿಸಿದ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು. ನಾನು ತಿಂದೆನು,” ಎಂದು ಹೇಳಿದನು.
13 Then our Father asked the woman, "What have you done?" She said, "The serpent deceived me, and I ate." ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.
14 So our Father said to the serpent, "Because you have done this, cursed are you above all livestock and above all wild animals; on your belly you will go, and dust you will eat all the days of your life. ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ.
15 And I will put enmity between you and the woman, and between your offspring and her offspring; he will crush your head, and you will strike his heel." ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”
16 To the woman he said, "I will greatly increase your pain in childbirth; in pain you will give birth to children. Your desire will be for your husband, and he will rule over you." ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”
17 And to Adam he said, "Because you listened to your wife and ate from the tree that I commanded you, saying, 'You must not eat from it,' cursed is the ground because of you; through painful toil you will eat from it all the days of your life. ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.
18 It will produce thorns and thistles for you, and you will eat the plants of the field. ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.
19 By the sweat of your brow you will eat your bread until you return to the ground, since from it you were taken; for dust you are, and to dust you will return." ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”
20 The man named his wife Eve, because she would become the mother of all the living. ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.
21 Our Father made garments of skin for Adam and his wife, and he clothed them. ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.
22 Then our Father said, "Look, the man has become like one of us, knowing good and evil. Now, so he doesn't reach out, take from the tree of life too, eat, and live forever…" ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.
23 So our Father sent him out of the garden of Eden to work the ground he was taken from. ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.
24 He drove out the man and placed cherubim and a whirling, flaming sword east of Eden's garden, guarding the way to the tree of life. ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]