Skip to content
The Believer's Library

Biblica® Open Kannada Contemporary Version 2022

Genesis 31 OKCV

Show OKCV only
Verse × ×
1 Jacob heard Laban's sons say, "Jacob took all our father had; from what was our father's he made this wealth." ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
2 And Jacob saw the face of Laban, and it was not toward him as before. ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ, ಅದು ತನ್ನ ಕಡೆಗೆ ಮೊದಲು ಇದ್ದ ಹಾಗೆ ಇರಲಿಲ್ಲ.
3 Then our Father told Jacob, "Return to your fathers' land and family; I will be with you." ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.
4 So Jacob sent and called Rachel and Leah to the field, to his flock. ಯಾಕೋಬನು ರಾಹೇಲಳನ್ನೂ, ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೆಸಿದನು.
5 He told them, "I see your father's face isn't toward me as before, but the God of my father remained with me. ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ.
6 You know that I have served your father with all my strength. ನಾನು ಪೂರ್ಣಬಲದಿಂದ ನಿಮ್ಮ ತಂದೆಯ ಸೇವೆ ಮಾಡಿದ್ದು ನಿಮಗೆ ತಿಳಿದಿದೆ.
7 Your father cheated me, changing my wages ten times, but our Father wouldn't let him harm me. ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.
8 If he said, 'Speckled is your wage,' the whole flock bore speckled; if he said, 'Striped is your wage,' the whole flock bore striped. ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಅಂದಾಗ, ಮಂದೆಯೆಲ್ಲಾ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು, ‘ರೇಖೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಎಂದಾಗ, ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.
9 So our Father has taken away your father's livestock and given it to me. ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು, ನನಗೆ ಕೊಟ್ಟಿದ್ದಾರೆ.
10 I looked up in a dream during the flock's mating season and saw the male goats mounting them were streaked, speckled, and spotted. “ಇದಲ್ಲದೆ ಕುರಿಗಳು ಸಂಗಮ ಮಾಡುವಾಗ, ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ, ಕುರಿಗಳ ಮೇಲೆ ಏರುವ ಟಗರುಗಳು ಚುಕ್ಕೆ, ಮಚ್ಚೆ, ರೇಖೆಗಳುಳ್ಳವುಗಳಾಗಿದ್ದವು.
11 The messenger of the Father said to me in a dream, 'Jacob,' and I said, 'Here I am.' ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.
12 He said, 'Look up and see: all the male goats mating with the flock are streaked, spotted, speckled—for I've seen all Laban is doing to you. ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ.
13 I am the Father of Bethel, where you anointed a pillar and vowed to me. Now get up, leave this land, and return to your kindred's land.'" ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು.
14 Rachel and Leah answered, "Do we still have any share or inheritance in our father's house? ಆಗ ರಾಹೇಲಳು, ಲೇಯಳು ಅವನಿಗೆ, “ನಮ್ಮ ತಂದೆಯ ಮನೆಯಲ್ಲಿ ಇನ್ನೇನಾದರೂ ಭಾಗವೂ, ಬಾಧ್ಯತೆಯೂ ಇದೆಯೋ?
15 Doesn't he count us as foreigners? He sold us and has completely consumed our money too. ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.
16 Everything our Father took from Laban is ours and our children's. Now do all our Father told you." ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು,” ಎಂದರು.
17 So Jacob arose and set his sons and his wives on the camels. ಆಗ ಯಾಕೋಬನು ಎದ್ದು ತನ್ನ ಮಕ್ಕಳನ್ನೂ, ತನ್ನ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ,
18 He took all his livestock and all his property he had acquired, the livestock acquired in Paddan-aram, to go to Isaac his father in the land of Canaan. ತನ್ನ ಎಲ್ಲಾ ಪಶುಗಳನ್ನೂ, ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ, ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶದಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ತೆಗೆದುಕೊಂಡು ಹೊರಟನು.
19 Laban went to shear his sheep, and Rachel stole her father's household gods. ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
20 And Jacob deceived Laban the Aramean by not telling him that he was fleeing. ಆದರೆ ಯಾಕೋಬನು ತಾನು ಹೋಗುವುದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ವಂಚಿಸಿ ಓಡಿಹೋದನು.
21 He fled with all he had, rose, crossed the Euphrates, and set his face toward Gilead's hill country. ಅವನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖವಾಗಿ ಯೂಫ್ರೇಟೀಸ್ ನದಿಯನ್ನು ದಾಟಿದನು.
22 On the third day Laban was told that Jacob had fled. ಯಾಕೋಬನು ಓಡಿಹೋದನೆಂದು ಮೂರನೆಯ ದಿವಸದಲ್ಲಿ ಲಾಬಾನನಿಗೆ ತಿಳಿಯಿತು.
23 He took his relatives, chased him seven days, and caught him in Gilead's hill country. ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
24 But our Father came to Laban the Aramean in a night dream and said, "Guard against speaking with Jacob, good or bad." ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.
25 Laban caught Jacob, who had pitched his tent in the hills; Laban and his relatives pitched against him in Gilead's hills. ತರುವಾಯ ಲಾಬಾನನು ಯಾಕೋಬನನ್ನು ಸಂಧಿಸಿದಾಗ, ಯಾಕೋಬನು ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ಅಲ್ಲಿಯೇ ಗುಡಾರವನ್ನು ಹಾಕಿಸಿದ್ದನು.
26 Laban said to Jacob, "What have you done? You tricked me and drove my daughters like war captives. ಲಾಬಾನನು ಯಾಕೋಬನಿಗೆ, “ನೀನು ಏನು ಮಾಡಿದೆ? ನನಗೆ ತಿಳಿಸದೆ ಮೋಸಮಾಡಿದ್ದೀಯೆ ಮತ್ತು ನನ್ನ ಪುತ್ರಿಯರನ್ನು ಯುದ್ಧದಲ್ಲಿ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಹೋದೆಯಲ್ಲಾ.
27 Why sneak off and deceive me, not telling me? I'd have sent you off with joy, songs, tambourine, lyre. ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.
28 Why didn't you let me kiss my sons and daughters goodbye? Now you've acted foolishly. ಆದರೆ ನೀನು ನನ್ನ ಮೊಮ್ಮಕ್ಕಳಿಗೂ, ನನ್ನ ಹೆಣ್ಣು ಮಕ್ಕಳಿಗೂ ಮುದ್ದು ಕೊಡುವುದಕ್ಕೂ ಬಿಡಲಿಲ್ಲ. ನೀನು ಮಾಡಿದ್ದು ಬುದ್ಧಿಹೀನ ಕೆಲಸವೇ ಸರಿ.
29 I have power to harm you, but your father's God told me last night: 'Watch yourself—say nothing to Jacob, good or bad.' ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.
30 Now you've truly gone because you longed greatly for your father's house—so why steal my gods?" ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.
31 Jacob answered Laban, "I was afraid, for I thought you'd seize your daughters from me. ಅದಕ್ಕೆ ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನಿನ್ನ ಪುತ್ರಿಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವೆ ಎಂದು ಭಯಪಟ್ಟೆನು.
32 Whoever you find with your gods dies. Point out what's yours before our relatives, take it." Jacob didn't know Rachel had stolen them. ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳು ಸಿಕ್ಕುವುವೋ ಅವರು ಸಾಯಲಿ. ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ, ನಮ್ಮ ಬಂಧುಗಳ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ,” ಎಂದನು. ಆದರೆ ರಾಹೇಲಳು ಅವುಗಳನ್ನು ಕದ್ದುಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
33 Laban searched Jacob's tent, Leah's tent, and the two servants' tent, found nothing, left Leah's, and entered Rachel's tent. ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಹುಡುಕಿದರೂ, ಅವುಗಳನ್ನು ಕಾಣಲಿಲ್ಲ. ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
34 Rachel had taken the household idols, put them in the camel's saddle, and sat on them. Laban searched the whole tent but found nothing. ಆದರೆ ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು, ಅದರ ಮೇಲೆ ಕುಳಿತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದರೂ, ಅವನು ಅವುಗಳನ್ನು ಕಾಣಲಿಲ್ಲ.
35 She told her father, "Don't be angry, my lord—I can't rise for you; I'm on my period." He searched but never found the household gods. ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೇ ಇರುವುದರಿಂದ, ನನ್ನ ಮೇಲೆ ಕೋಪಬಾರದೆ ಇರಲಿ. ಏಕೆಂದರೆ ನಾನು ಮುಟ್ಟಾಗಿದ್ದೇನೆ,” ಎಂದಳು. ಅವನು ಹುಡುಕಿ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೋದನು.
36 Jacob got angry and quarreled with Laban. Jacob answered Laban, "What's my crime? What's my sin, that you've chased me down? ಆಗ ಯಾಕೋಬನು ಕೋಪಗೊಂಡು ಲಾಬಾನನೊಂದಿಗೆ ವಾದಿಸಿದನು. ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನನ್ನನ್ನು ಬೆನ್ನಟ್ಟಿ ಬರುವುದಕ್ಕೆ ನನ್ನ ಅಪರಾಧವೇನು?” ನನ್ನ ಪಾಪವೇನು?
37 You've searched all my goods—what did you find from your household? Put it here before my relatives and yours; let them decide between us both. ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
38 Twenty years I've been with you: your ewes and female goats haven't miscarried, and I haven't eaten rams from your flock. “ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
39 Torn animals I never brought to you; I bore the loss myself. You demanded it from my hand, stolen by day, stolen by night. ಮೃಗಗಳಿಂದ ಘಾಯವಾದವುಗಳನ್ನು ನಿನ್ನ ಬಳಿಗೆ ತಾರದೆ, ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ, ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡೆ.
40 There I was: by day heat consumed me, and cold by night, and sleep fled from my eyes. ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.
41 Twenty years in your house—fourteen serving for your two daughters, six for your flock—and you changed my wages ten times. ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
42 Had the God of my father, the God of Abraham, and the Fear of Isaac not been with me, you'd surely have sent me away empty-handed now. Our Father saw my suffering and my hands' labor, and warned you last night." ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.
43 Laban answered Jacob, "The daughters are mine, the children are mine, the flocks are mine—everything you see is mine. But what can I do today for my daughters, or for the children they bore? ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರೇ, ಈ ಮಕ್ಕಳು ನನ್ನ ಮಕ್ಕಳೇ, ಈ ಮಂದೆಯು ನನ್ನ ಮಂದೆಯೇ, ಅಂತು ನೀನು ಕಾಣುವುದೆಲ್ಲಾ ನನ್ನದೇ. ಹಾಗಾದರೆ ನನ್ನ ಪುತ್ರಿಯರಿಗಾಗಲಿ, ಅವರು ಹೆತ್ತ ಮಕ್ಕಳಿಗಾಗಲಿ ನಾನು ಈ ಹೊತ್ತು ಏನು ಮಾಡಲಿ?
44 Come, let's make a covenant, you and I; let it be a witness between you and me." ಆದ್ದರಿಂದ ನೀನು ಇಲ್ಲಿ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದನು.
45 So Jacob took a stone and set it up as a pillar. ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.
46 Jacob told his kin, "Gather stones." They took stones, piled a heap, and ate there by the heap. ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ,” ಎಂದನು. ಅವರು ಕಲ್ಲುಗಳನ್ನು ತೆಗೆದುಕೊಂಡು ಒಂದು ಕುಪ್ಪೆ ಮಾಡಿದರು. ಅವರು ಆ ಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡು ಊಟಮಾಡಿದರು.
47 Laban called it Jegar-sahadutha, but Jacob called it Galeed. ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು. ಯಾಕೋಬನು ಗಲೇದ್ ಎಂದು ಹೆಸರಿಟ್ಟನು.
48 Laban said, "This heap is a witness between you and me today." Therefore he named it Galeed, ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ,
49 and Mizpah, for he said, "God watch between me and you when we're apart. ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.
50 If you mistreat my daughters or take wives besides them, though no one else is here, God witnesses between you and me." ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು.
51 Laban said to Jacob, "Look at this heap and this pillar I've set between you and me. ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು,
52 This mound witnesses, this pillar witnesses: I won't cross this mound to you, and you won't cross this mound and pillar to me, for harm. ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವುದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವುದಿಲ್ಲವೆಂಬುದಕ್ಕೆ ಈ ಕುಪ್ಪೆಯೂ ಈ ಸ್ತಂಭವೂ ಸಾಕ್ಷಿಯಾಗಿವೆ.
53 God of Abraham and God of Nahor, the God of their father, judge between us." So Jacob swore by the Fear of his father Isaac. ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.
54 Jacob sacrificed on the mountain, called his relatives to eat bread; they ate bread and spent the night on the mountain. ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.
55 Laban rose early, kissed his grandchildren and daughters, blessed them, left, and returned home. ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]