Skip to content
The Believer's Library

Biblica® Open Kannada Contemporary Version 2022

Genesis 32 OKCV

Show OKCV only
Verse × ×
1 Jacob went on his way, and the angels of our Father met him. ಅನಂತರ ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ, ದೇವದೂತರು ಅವನ ಎದುರಿಗೆ ಬಂದರು.
2 Jacob saw them and said, "This is our Father's camp!" He named that place Mahanaim. ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
3 Jacob sent messengers ahead of him to Esau his brother in the land of Seir, the territory of Edom. ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
4 He ordered them, "Tell my lord Esau: your servant Jacob says, I've lived with Laban and stayed until now. ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.
5 I own oxen, donkeys, flocks, and servants—male and female. I've sent to inform my lord, to find favor in your eyes." ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.
6 The messengers returned to Jacob: "We went to your brother Esau—he's coming to meet you, 400 men with him." ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.
7 Jacob was very afraid and distressed. He split the people with him, and the flocks, herds, and camels, into two camps, ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
8 thinking, "If Esau reaches one camp and attacks it, the remaining camp will escape." ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.
9 Then Jacob said, "God of my father Abraham and God of my father Isaac, my Father, who said to me, 'Return to your land and family, so I may treat you well,' ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,
10 I am too small for the least of all the covenant love and faithfulness you have shown your servant, for I crossed this Jordan with only my staff, and now I have become two camps. ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.
11 Rescue me, please, from my brother's hand, from Esau's hand—I fear him: he may come and strike me down, mothers with children. ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.
12 But you said, 'I will surely be good to you and make your descendants like the sand of the sea, too many to count.'" ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.
13 He stayed there that night, then took a gift for his brother Esau from what he had: ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
14 200 female goats and twenty male goats, 200 ewes and twenty rams, ಅವು ಯಾವುವೆಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು,
15 thirty nursing camels with their young, forty cows, ten bulls, twenty female donkeys, ten male donkeys. ಹಾಲು ಕೊಡುವ ಮೂವತ್ತು ಒಂಟೆಗಳು, ಅವುಗಳ ಮರಿಗಳು, ನಲವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಗಂಡುಕತ್ತೆಗಳು,
16 He gave them to his servants, drove by drove, separately, and told his servants, "Pass ahead of me, and leave space between drove and drove." ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು.
17 He ordered the first, "When Esau my brother meets you and asks you, 'Whose are you? Where are you going? Whose are these ahead of you?' ಅವನು ಮೊದಲನೆಯವನಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಕಡೆಯವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವ ಇವೆಲ್ಲ ಯಾರವು?’ ಎಂದು ಕೇಳಿದರೆ,
18 then say, 'They're your servant Jacob's, a gift sent to my lord Esau. Look, he himself is behind us.'" ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.
19 He also commanded the second, the third, and all who followed the herds, "Say the same to Esau when you find him, ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
20 and you will say, 'Also, your servant Jacob is behind us.'" For he thought, "I will appease him with the gift ahead of me, then see his face; perhaps he'll accept me." ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.
21 So the gift passed on ahead of him, and he himself stayed that night in the camp. ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.
22 That night he got up, took his two wives, two female servants, and eleven sons, and crossed the Jabbok ford. ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.
23 He took them and sent them across the stream, and likewise sent across everything he had. ಅವನು ಅವರನ್ನು ಕರೆದುಕೊಂಡು ಹೊಳೆ ದಂಡೆಯನ್ನು ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
24 And Jacob was left alone. And a man wrestled with him until the breaking of the day. ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.
25 Seeing he could not defeat Jacob, the man touched his hip socket, and Jacob's hip was wrenched as they wrestled. ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.
26 He said, "Let me go; dawn is breaking." But Jacob said, "I won't let you go unless you bless me." ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.
27 And he said to him, "What is your name?" And he said, "Jacob." ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.
28 He said, "You will no longer be named Jacob, but Israel, for you have struggled with our Father and with men, and won." ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.
29 Jacob asked him, "Please tell me your name." He said, "Why do you ask my name?" And he blessed him there. ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.
30 So Jacob named the place Peniel: "For I have seen our Father face to face, yet my life was saved." ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
31 The sun rose upon him as he passed Penuel, limping because of his hip. ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
32 This is why, even now, the Israelites won't eat the thigh muscle on the hip socket—because he struck Jacob's hip socket there, at the thigh muscle. ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]