Skip to content
The Believer's Library

Biblica® Open Kannada Contemporary Version 2022

Genesis 33 OKCV

Show OKCV only
Verse × ×
1 Jacob looked up and saw Esau coming with 400 men. So he divided the children between Leah, Rachel, and the two servants. ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು.
2 He put the maidservants and their children first, Leah and her children after them, and Rachel and Joseph last. ದಾಸಿಯರನ್ನೂ, ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ; ಅವರ ಹಿಂದೆ ಲೇಯಳನ್ನೂ, ಆಕೆಯ ಮಕ್ಕಳನ್ನೂ; ಕಟ್ಟಕಡೆಯಲ್ಲಿ ರಾಹೇಲಳನ್ನೂ, ಯೋಸೇಫನನ್ನೂ ಇರಿಸಿದನು.
3 He himself went ahead of them, bowing to the ground seven times, until he reached his brother. ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವವರೆಗೆ ಏಳು ಸಾರಿ ನೆಲದವರೆಗೆ ಬಗ್ಗಿದನು.
4 Esau ran to meet him, hugged him, threw his arms around his neck, kissed him—and they wept. ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.
5 When Esau looked up and saw the women and children, he asked, "Who are these with you?" Jacob said, "The children our Father has graciously given your servant." ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.
6 Then the female servants drew near with their children, and they bowed down. ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
7 Leah also came forward with her children, and they bowed down; then Joseph and Rachel came forward and bowed down. ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ, ರಾಹೇಲಳೂ ಬಂದು ಅಡ್ಡಬಿದ್ದರು.
8 Esau said, "Why all this company I met?" "To find favor with my lord," Jacob said. ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.
9 But Esau said, "I have plenty, my brother; keep what is yours for yourself." ಅದಕ್ಕೆ ಏಸಾವನು, “ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ,” ಎಂದನು.
10 Jacob said, "No, please—if I've found favor in your eyes, accept my gift from my hand, for I have seen your face like seeing the face of our Father, and you've accepted me. ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,
11 Please take my blessing, brought to you, since our Father has favored me and I have everything." So he insisted, and he took it. ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.
12 Then Esau said, "Let us journey on our way, and I will go ahead of you." ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ನಿನ್ನ ಮುಂದೆ ಹೋಗುವೆನು,” ಎಂದನು.
13 But Jacob said to him, "My lord knows the children are frail, and the flocks and herds, nursing, are in my care. If driven hard one day, all the flocks will die. ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.
14 Let my lord pass ahead of his servant; I will move slowly, at the pace of the livestock ahead of me and the pace of the children, until I reach my lord at Seir." ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.
15 Esau said, "Let me leave some of my people with you." Jacob replied, "Why do that? Let me find favor in my lord's eyes." ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.
16 So Esau returned that day on his way to Seir. ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.
17 But Jacob traveled to Succoth, built himself a house, and made shelters for his livestock—that's why the place is called Succoth. ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
18 Jacob arrived safely at Shechem, a city in Canaan, coming from Paddan-aram, and camped facing the city. ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
19 He bought the plot where he pitched his tent from the sons of Hamor, Shechem's father, for one hundred pieces of silver. ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.
20 There he set up an altar and called it El-Elohe-Israel—the Father of Israel. ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]