Skip to content
The Believer's Library

Biblica® Open Kannada Contemporary Version 2022

Genesis 34 OKCV

Show OKCV only
Verse × ×
1 Dinah, the daughter Leah bore to Jacob, went out to see the young women of the land. ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವುದಕ್ಕಾಗಿ ಹೊರಗೆ ಹೋದಳು.
2 Shechem son of Hamor the Hivite, prince of the land, saw her, seized her, lay with her, and abused her. ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.
3 His heart clung to Dinah, daughter of Jacob—he loved the girl and spoke to her heart. ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು.
4 So Shechem said to his father Hamor, "Get me this girl as a wife." ಶೆಕೆಮನು ತನ್ನ ತಂದೆ ಹಮೋರನಿಗೆ, “ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ಹೇಳು,” ಎಂದನು.
5 Jacob heard that Shechem had made his daughter Dinah unclean, but his sons were with his livestock in the field, so Jacob said nothing until they came. ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು.
6 Then Hamor, Shechem's father, went out to Jacob to speak with him. ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
7 Jacob's sons came in from the field. When they heard, the men were deeply pained and furious—for Shechem had done a disgraceful thing in Israel, sleeping with Jacob's daughter, a thing not to be done. ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.
8 Hamor spoke with them: "My son Shechem longs for your daughter. Please give her to him as wife. ಹಮೋರನು ಅವರಿಗೆ, “ನನ್ನ ಮಗ ಶೆಕೆಮನ ಮನಸ್ಸು ನಿಮ್ಮ ಮಗಳನ್ನು ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ, ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
9 Intermarry with us—give your daughters to us, and take our daughters for yourselves. ನೀವು ನಮ್ಮೊಂದಿಗೆ ಮದುವೆ ಸಂಬಂಧ ಮಾಡಿಕೊಳ್ಳಿರಿ. ನಿಮ್ಮ ಪುತ್ರಿಯರನ್ನು ನಮಗೆ ಕೊಡಿರಿ, ನಮ್ಮ ಪುತ್ರಿಯರನ್ನು ನೀವು ಮದುವೆಯಾಗಿರಿ.
10 Live with us; the land lies open to you—settle, trade, and acquire property in it." ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು.
11 Shechem said to her father and brothers, "Let me find favor in your eyes; whatever you say to me, I will give. ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.
12 Ask me any bride-price and gift, however great—I'll pay it. Just give me the girl as my wife." ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.
13 Jacob's sons answered Shechem and his father Hamor dishonestly, because Shechem had defiled their sister Dinah. ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.
14 They said to them, "We can't do this—give our sister to an uncircumcised man; that would disgrace us. ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿ ಇಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು. ಅದು ನಮಗೆ ಅವಮಾನ.
15 We agree to this alone: if you become like us, every male of you circumcised. ಆದರೆ ನೀವು ನಮ್ಮ ಹಾಗಿದ್ದು, ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಂಡರೆ ಮಾತ್ರ ನಾವು ನಿಮಗೆ ಒಪ್ಪುವೆವು.
16 We'll give you our daughters and take yours for ourselves; we'll live with you and become one people. ನಮ್ಮ ಪುತ್ರಿಯರನ್ನು ನಿಮಗೆ ಕೊಟ್ಟು, ನಿಮ್ಮ ಪುತ್ರಿಯರನ್ನು ತೆಗೆದುಕೊಳ್ಳುವೆವು. ಇದಲ್ಲದೆ ನಾವು ನಿಮ್ಮೊಂದಿಗೆ ವಾಸಮಾಡಿ, ಒಂದೇ ಜನಾಂಗವಾಗುವೆವು.
17 But if you will not listen and be circumcised, we will take our daughter and leave." ಆದರೆ ನೀವು ನಮ್ಮ ಮಾತನ್ನು ಕೇಳದೆ, ಸುನ್ನತಿ ಮಾಡಿಸಿಕೊಳ್ಳದೆ ಹೋದರೆ, ನಮ್ಮ ಹುಡುಗಿಯನ್ನು ನಾವು ಕರೆದುಕೊಂಡು ಹೋಗಿಬಿಡುತ್ತೇವೆ,” ಎಂದು ಹೇಳಿದರು.
18 Their words pleased Hamor and his son Shechem. ಅವರ ಮಾತುಗಳು ಹಮೋರನಿಗೂ, ಅವನ ಮಗ ಶೆಕೆಮನಿಗೂ ಯೋಗ್ಯವಾಗಿ ಕಂಡವು.
19 The young man didn't delay, since he delighted in Jacob's daughter—he was the most honored in his father's house. ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
20 Hamor and his son Shechem came to the gate of their city and spoke to the men of their city: ಆಗ ಹಮೋರನೂ, ಅವನ ಮಗ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು, ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ,
21 "These men are peaceful with us. Let them live in the land and trade in it—the land is wide enough for them. We'll take their daughters as wives and give them ours. “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ದೇಶದಲ್ಲಿ ವಾಸಮಾಡಿ, ಅದರಲ್ಲಿ ವ್ಯಾಪಾರಮಾಡಲಿ. ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಪುತ್ರಿಯರನ್ನು ನಮಗೆ ಹೆಂಡತಿಯರನ್ನಾಗಿ ಮಾಡಿಕೊಳ್ಳೋಣ ಮತ್ತು ನಮ್ಮ ಪುತ್ರಿಯರನ್ನು ಅವರಿಗೆ ಕೊಡೋಣ.
22 Only on this condition will the men agree to live with us as one people: that every male among us be circumcised, as they are circumcised. ಸುನ್ನತಿ ಮಾಡಿಸಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಮಾಡುವುದಕ್ಕೂ, ಒಂದೇ ಜನಾಂಗವಾಗುವುದಕ್ಕೂ ಒಪ್ಪುವರು.
23 Won't their livestock, property, and all their animals be ours? Just let us agree with them, and they'll live with us." ಅವರ ಮಂದೆಗಳೂ, ಅವರ ಸಂಪತ್ತೂ, ಅವರ ಎಲ್ಲಾ ಪಶುಗಳೂ ನಮ್ಮದಾಗುವುವು ಅಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ, ಅವರು ನಮ್ಮ ಸಂಗಡ ವಾಸಿಸುವರು,” ಎಂದರು.
24 All who went out through his city's gate listened to Hamor and his son Shechem, and every male was circumcised—all who went out through his city's gate. ಆಗ ಪಟ್ಟಣದ ದ್ವಾರದಲ್ಲಿ ಹೋಗುವ ಗಂಡಸರೆಲ್ಲರೂ ಹಮೋರನೂ, ಅವನ ಮಗ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ, ಒಪ್ಪಿಕೊಂಡರು. ಹೀಗೆ ಪಟ್ಟಣದಲ್ಲಿದ್ದ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.
25 On the third day, while they were still in pain, two of Jacob's sons, Simeon and Levi, Dinah's brothers, each took his sword, came against the unsuspecting city, and killed every male. ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು.
26 They killed Hamor and his son Shechem with the sword, took Dinah from Shechem's house, and left. ಹಮೋರನನ್ನೂ, ಅವನ ಮಗನಾದ ಶೆಕೆಮನನ್ನೂ ಅವರು ಖಡ್ಗದಿಂದ ಕೊಂದುಹಾಕಿ, ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಹೊರಗೆ ಹೋದರು.
27 Jacob's sons came upon the slain and plundered the city, because the men there had defiled their sister. ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.
28 They took their flocks, their herds, their donkeys, and everything in the city and in the field. ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು.
29 They took all their wealth, all their children, and their wives captive, plundering everything in the houses. ಅವರ ಎಲ್ಲಾ ಆಸ್ತಿಯನ್ನೂ, ಅವರ ಎಲ್ಲಾ ಚಿಕ್ಕ ಮಕ್ಕಳನ್ನೂ, ಅವರ ಹೆಂಡತಿಯರನ್ನೂ ಸೆರೆಹಿಡಿದು, ಮನೆಯಲ್ಲಿ ಇದ್ದದ್ದೆಲ್ಲವನ್ನೂ ಅವರು ಕೊಳ್ಳೆಹೊಡೆದರು.
30 Jacob said to Simeon and Levi, "You've brought trouble on me—making me stink to those living here, the Canaanites and Perizzites. My men are few; if they band together against me, they'll attack, and I'll be destroyed, I and my household." ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.
31 But they said, "Should he treat our sister like a prostitute?" ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]