Skip to content
The Believer's Library

Biblica® Open Kannada Contemporary Version 2022

Genesis 35 OKCV

Show OKCV only
Verse × ×
1 Then our Father told Jacob, "Get up, go to Bethel, stay there, and build an altar to me, who appeared to you when you fled from your brother Esau." ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.
2 Jacob said to his household and all with him, "Discard the foreign gods among you, purify yourselves, and change your clothes. ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.
3 Let's go up to Bethel. I'll build an altar there to our Father, who answered me in my day of distress and stayed with me wherever I went." ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.
4 They gave Jacob all the foreign gods in their hands and earrings in their ears; he hid them under Shechem's oak. ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.
5 They set out; terror from our Father struck the surrounding cities, so no one pursued Jacob's sons. ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
6 Jacob came to Luz (Bethel) in Canaan, with all his people. ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.
7 There he built an altar, naming it El-Bethel—house of our Father—for there he revealed himself to Jacob when he fled from his brother. ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
8 Deborah, Rebekah's nurse, died and was buried below Bethel under the oak, named Allon-bacuth, oak of weeping. ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
9 Our Father appeared to Jacob again, when he came from Paddan-aram, and blessed him. ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.
10 Our Father said to him, "Your name is Jacob, but it will no longer be Jacob—your name is Israel." He named him Israel. ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.
11 Our Father told him, "I am El Shaddai, your Father Almighty. Be fruitful, multiply. A nation, a company of nations, will come from you; kings will come from your body. ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.
12 The land I gave Abraham and Isaac, I will give you; I will give to your offspring after you." ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.
13 Then our Father went up from him in the place where he had spoken with him. ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದರು.
14 Jacob set up a pillar where our Father had spoken with him, a pillar of stone, and he poured out a drink offering on it and poured oil on it. ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು.
15 Jacob named the place where our Father had spoken with him: Bethel. ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
16 They left Bethel, and while still some distance from Ephrath, Rachel went into labor—hard labor. ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು.
17 During her hard labor, the midwife told her, "Don't be afraid—this too is a son." ಹೆರುವುದರಲ್ಲಿ ಆಕೆಯು ಕಷ್ಟಪಡುತ್ತಿದ್ದಾಗ, ಸೂಲಗಿತ್ತಿಯು ಅವಳಿಗೆ, “ನೀನು ಭಯಪಡಬೇಡ, ಈ ಮಗನನ್ನು ಸಹ ನೀನು ಪಡೆಯುವೆ,” ಎಂದಳು.
18 As her soul was leaving her—she was dying—she named him Ben-oni, son of my sorrow; but his father called him Benjamin, son of the right hand. ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.
19 So Rachel died, and she was buried on the way to Ephrath (that is, Bethlehem). ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.
20 Jacob set a pillar on her grave—it is Rachel's grave pillar to this day. ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
21 Israel traveled and camped beyond Migdal-eder, the tower of the flock. ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.
22 While Israel lived in that land, Reuben went and slept with Bilhah, his father's concubine, and Israel heard. Jacob had twelve sons. ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.
23 The sons of Leah: Reuben, Jacob's firstborn, then Simeon, Levi, Judah, Issachar, and Zebulun. ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.
24 The sons of Rachel: Joseph and Benjamin. ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.
25 The sons of Bilhah, Rachel's maid: Dan and Naphtali. ರಾಹೇಲಳ ದಾಸಿ ಬಿಲ್ಹಳ ಪುತ್ರರು: ದಾನ್, ನಫ್ತಾಲಿ.
26 Sons of Zilpah, Leah's servant: Gad and Asher. These are Jacob's sons, born to him in Paddan-aram. ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.
27 Jacob came to his father Isaac at Mamre, Kiriath-arba (Hebron), where Abraham and Isaac had lived. ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.
28 Isaac lived 180 years. ಆಗ ಇಸಾಕನು ನೂರ ಎಂಬತ್ತು ವರ್ಷದವನಾಗಿದ್ದನು.
29 Isaac breathed his last, died, and was gathered to his people—old, full of days. His sons Esau and Jacob buried him. ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]