Skip to content
The Believer's Library

Biblica® Open Kannada Contemporary Version 2022

Genesis 37 OKCV

Show OKCV only
Verse × ×
1 Jacob settled in the land where his father had lived as a foreigner, the land of Canaan. ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
2 This is Jacob's family record. Joseph, a young man of seventeen, tended the flock with his brothers, the sons of Bilhah and Zilpah, his father's wives—and brought their father a bad report about them. ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
3 Israel loved Joseph more than all his other sons, because he was born to him in his old age, and made him a robe of many colors. ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.
4 When his brothers saw their father loved him more than all of them, they hated him and could not speak kindly to him. ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.
5 Joseph dreamed a dream and told it to his brothers, who hated him even more. ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
6 He said to them, "Listen to this dream I had: ಅವನು ಅವರಿಗೆ, “ನಾನು ಕಂಡ ಈ ಕನಸನ್ನು ಹೇಳುತ್ತೇನೆ ಕೇಳಿರಿ.
7 Suddenly we were binding sheaves in the field, and suddenly my sheaf rose and stood upright, and suddenly your sheaves gathered around and bowed down to it." ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.
8 His brothers said to him, "Will you really reign over us? Will you actually rule us?" So they hated him even more for his dreams and his words. ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.
9 He dreamed again and told his brothers, "Look, I had another dream—the sun, moon, and eleven stars were bowing down to me." ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.
10 When he told his father and brothers, his father scolded him: "What is this dream you had? Will I, your mother, and your brothers really come and bow to the ground before you?" ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ತಿಳಿಸಿದಾಗ, ಅವನ ತಂದೆಯು ಅವನನ್ನು ಗದರಿಸಿ, “ನೀನು ಕಂಡ ಈ ಕನಸು ಏನು? ನಾನು, ನಿನ್ನ ತಾಯಿ, ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬರಬೇಕೋ?” ಎಂದನು.
11 His brothers were jealous of him, but his father kept the matter in mind. ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
12 Now his brothers had gone to graze their father's flocks near Shechem. ಅವನ ಸಹೋದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವುದಕ್ಕೆ ಹೋದರು.
13 Israel said to Joseph, "Aren't your brothers grazing the flocks at Shechem? Come, I'll send you to them." "Here I am," he replied. ಆದ್ದರಿಂದ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಸಹೋದರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ. ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು,” ಎಂದನು. ಅದಕ್ಕೆ ಅವನು, “ಆಗಲಿ ಹೋಗುತ್ತೇನೆ,” ಎಂದನು.
14 He said to him, "Go see how your brothers and the flock are doing, and bring me word." So he sent him from the Valley of Hebron, and Joseph came to Shechem. ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,
15 A man found him wandering in the fields and asked him, "What are you looking for?" ಒಬ್ಬಾನೊಬ್ಬ ಮನುಷ್ಯನು ಯೋಸೇಫನು ಹೊಲದಲ್ಲಿ ಅಲೆದಾಡುವುದನ್ನು ಕಂಡು ಅವನಿಗೆ, “ನೀನು ಏನು ಹುಡುಕುತ್ತಿದ್ದೀ?” ಎಂದು ಕೇಳಿದನು.
16 He replied, "I'm looking for my brothers. Can you tell me where they are grazing their flocks?" ಅದಕ್ಕೆ ಅವನು, “ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ, ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆಂದು ದಯವಿಟ್ಟು ನನಗೆ ಹೇಳು,” ಎಂದನು.
17 "They've left here," the man said. "I heard them say, 'Let's go to Dothan.'" Joseph went after his brothers and found them at Dothan. ಆ ಮನುಷ್ಯನು, “ಅವರು ಇಲ್ಲಿಂದ ಹೊರಟು ಹೋದರು. ಅವರು, ‘ನಾವು ದೋತಾನಿಗೆ ಹೋಗೋಣ,’ ಎಂದು ಮಾತಾಡುವದನ್ನು ನಾನು ಕೇಳಿಸಿಕೊಂಡೆ,” ಎಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡುಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
18 They saw him in the distance, and before he reached them, they plotted to kill him. ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.
19 "Here comes that dreamer!" they said to one another. ಅವರು, “ಇಗೋ, ಈ ಕನಸುಗಾರ ಬರುತ್ತಿದ್ದಾನೆ,
20 "Now come, let's kill him, throw him into one of the pits, and say a wild animal ate him. Then we'll see what becomes of his dreams." ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
21 Reuben heard and tried to rescue him from their hands. "Let's not take his life," he said. ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.
22 Reuben told them, "Shed no blood—throw him into this desert cistern, but don't touch him." Reuben said this to rescue Joseph from them and take him back to his father. ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು.
23 When Joseph reached his brothers, they stripped off his robe—the robe of many colors he wore. ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ, ಅವರು ಯೋಸೇಫನ ಮೇಲಿದ್ದ ಬಣ್ಣಗಳ ಅಂಗಿಯನ್ನು ತೆಗೆದರು.
24 They took him and threw him into the cistern. The cistern was empty, no water in it. ಅವನನ್ನು ತೆಗೆದುಕೊಂಡು ಗುಂಡಿಯಲ್ಲಿ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.
25 They sat to eat, looked up, and saw an Ishmaelite caravan coming from Gilead, their camels carrying spices, balm, and myrrh, headed down to Egypt. ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.
26 Judah told his brothers, "What do we gain if we kill our brother and hide his blood? ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?
27 Come, let's sell him to the Ishmaelites, not harm him ourselves—he's our brother, our own flesh." His brothers agreed. ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
28 As Midianite traders passed, his brothers lifted Joseph from the pit and sold him to the Ishmaelites for twenty silver pieces, and the Ishmaelites brought him to Egypt. ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.
29 When Reuben returned to the cistern and saw that Joseph was not there, he tore his clothes. ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
30 He went back to his brothers and said, "The boy is gone! Where can I turn now?" ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು.
31 Then they took Joseph's robe, slaughtered a goat, and dipped the robe in the blood. ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,
32 They sent the robe of many colors and brought it to their father, saying, "We found this. Examine it: is it your son's robe, or not?" ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.
33 He recognized it: "My son's robe—a dangerous animal ate him! Joseph is surely torn apart." ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.
34 Then Jacob tore his clothes, put on mourning clothes, and mourned for his son many days. ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
35 All his sons and daughters came to comfort him, but he refused to be comforted, saying, "No, mourning I will go down to my son in the grave." So his father wept for him. ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.
36 Now the Midianites sold Joseph in Egypt to Potiphar, a Pharaoh official and captain of the guard. ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]