Skip to content
The Believer's Library

Biblica® Open Kannada Contemporary Version 2022

Genesis 38 OKCV

Show OKCV only
Verse × ×
1 At that time Judah left his brothers and went to a man from Adullam named Hirah. ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರ ಬಳಿಯಿಂದ ಹೊರಟು, ಅದುಲ್ಲಾಮೂರಿನವನಾದ ಹೀರಾನ ಬಳಿಗೆ ಹೋದನು.
2 There Judah saw the daughter of a Canaanite named Shua. He married and slept with her. ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು, ಅವಳನ್ನು ಮದುವೆಯಾಗಿ ಅವಳನ್ನು ಕೂಡಿದನು.
3 She became pregnant and gave birth to a son, and Judah named him Er. ಅವಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ್ ಎಂದು ಹೆಸರಿಟ್ಟನು.
4 She became pregnant again and gave birth to a son, and she named him Onan. ಆಕೆಯು ತಿರುಗಿ ಗರ್ಭಿಣಿಯಾಗಿ ಮಗನನ್ನು ಹೆತ್ತು, ಅವನಿಗೆ ಓನಾನ್ ಎಂದು ಹೆಸರಿಟ್ಟಳು.
5 She bore yet another son and named him Shelah; she was at Chezib when she bore him. ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು, ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ, ಯೆಹೂದನು ಕೆಜೀಬಿನಲ್ಲಿ ಇದ್ದನು.
6 Judah took a wife for his firstborn son Er; her name was Tamar. ಇದಾದ ಮೇಲೆ ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ತಾಮಾರ್ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.
7 But Er, Judah's firstborn, was evil before our Father, and our Father put him to death. ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.
8 Then Judah told Onan, "Sleep with your brother's wife, do your duty as her brother-in-law, and raise children for your brother." ಆಗ ಯೆಹೂದನು ಓನಾನನಿಗೆ, “ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ, ಅವಳನ್ನು ಮದುವೆಯಾಗಿ, ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡು,” ಎಂದನು.
9 But Onan knew the child would not be his, so whenever he slept with his brother's wife, he spilled his seed on the ground, to give his brother no child. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.
10 What he did was evil in our Father's sight, so he put him to death too. ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.
11 Judah told his daughter-in-law Tamar, "Stay a widow in your father's house till my son Shelah grows up"—thinking, "He might die like his brothers." So Tamar lived in her father's house. ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
12 Long afterward, Judah's wife, Shua's daughter, died. When Judah was comforted, he and his friend Hirah the Adullamite went up to his sheepshearers at Timnah. ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು.
13 Tamar was told, "Your father-in-law is going up to Timnah to shear his sheep." ಆಗ ತಾಮಾರಳಿಗೆ, “ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೆ ತಿಮ್ನಾ ಊರಿಗೆ ಹೋಗುತ್ತಿದ್ದಾನೆ,” ಎಂದು ತಿಳಿಸಿದಾಗ,
14 So she removed her widow's clothes, covered herself with a veil, wrapped up, and sat at the entrance to Enaim on the road to Timnah—for she saw that Shelah had grown up but she was not given to him as his wife. ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.
15 When Judah saw her, he thought she was a prostitute, because she had covered her face. ಯೆಹೂದನು ಅವಳನ್ನು ಕಂಡಾಗ, ಅವಳು ಮುಖ ಮುಚ್ಚಿಕೊಂಡಿದ್ದರಿಂದ ಅವಳು ವೇಶ್ಯೆಯೆಂದು ತಿಳಿದುಕೊಂಡನು.
16 He turned to her by the road and said, "Let me sleep with you"—not knowing she was his daughter-in-law. She said, "What will you give me to sleep with you?" ಮಾರ್ಗದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು, “ನನ್ನನ್ನು ನಿನ್ನ ಬಳಿಗೆ ಬರಗೊಡಿಸು,” ಎಂದನು. ಏಕೆಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ. ಅವಳು, “ನೀನು ನನ್ನ ಬಳಿಗೆ ಬಂದರೆ, ನನಗೆ ಏನು ಕೊಡುವೆ?” ಎಂದಳು.
17 He said, "I'll send you a young goat from the flock." She said, "Will you give me a pledge until you send it?" ಅವನು, “ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿಸುತ್ತೇನೆ,” ಎಂದನು. ಅವಳು, “ನೀನು ಅದನ್ನು ಕಳುಹಿಸುವವರೆಗೆ ಈಡು ಕೊಡುವೆಯೋ?” ಎಂದಳು.
18 He said, "What pledge should I give you?" She said, "Your seal, its cord, and the staff in your hand." He gave them to her, slept with her, and she conceived by him. ಅದಕ್ಕೆ ಅವನು, “ನಿನಗೆ ಕೊಡತಕ್ಕ ಈಡು ಏನು?” ಎಂದಾಗ. ಅವಳು, “ನಿನ್ನ ಮುದ್ರೆಯೂ ನಿನ್ನ ದಾರವೂ ನಿನ್ನ ಕೈಯಲ್ಲಿರುವ ಕೋಲೂ,” ಎಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು, ಆಕೆಯನ್ನು ಕೂಡಿದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
19 She got up and left, took off her veil, and put her widow's clothes back on. ತರುವಾಯ ಅವಳು ಎದ್ದು ಹೋಗಿ, ಮುಸುಕನ್ನು ತೆಗೆದಿಟ್ಟು, ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
20 Judah sent the young goat by his friend the Adullamite to get the pledge back from the woman, but he couldn't find her. ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
21 He asked the local men, "Where's the shrine prostitute who was by the road at Enaim?" They said, "No shrine prostitute has been here." ಅದುಲ್ಲಾಮ್ಯನು ಆಕೆಯ ಊರಿನವರನ್ನು, “ಏನಯಿಮಿನ ಬಹಿರಂಗ ಮಾರ್ಗದ ಬಳಿಯಲ್ಲಿದ್ದ ವೇಶ್ಯೆ ಎಲ್ಲಿ?” ಎಂದು ಕೇಳಿದಾಗ. ಅವರು, “ಈ ಸ್ಥಳದಲ್ಲಿ ಯಾವ ವೇಶ್ಯೆಯೂ ಇರಲಿಲ್ಲ,” ಎಂದರು.
22 So he returned to Judah, saying, "I could not find her, and the local men said no shrine prostitute had been there." ಆಗ ಅವನು ಯೆಹೂದನ ಬಳಿಗೆ ತಿರುಗಿಬಂದು, “ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು, ‘ಈ ಸ್ಥಳದಲ್ಲಿ ದೇವದಾಸಿ ಇರಲಿಲ್ಲ,’ ಎಂದು ಹೇಳಿದರು,” ಎಂದು ಹೇಳಿದನು.
23 Then Judah said, "Let her keep them, or we'll be mocked. I sent her this young goat, but you didn't find her." ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.
24 About three months later, Judah was told, "Your daughter-in-law Tamar has prostituted herself, and she's now pregnant from it." Judah said, "Bring her out and burn her!" ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.
25 As she was brought out, she sent word to her father-in-law: "I am pregnant by the man these belong to. Please identify whose seal, cord, and staff these are." ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.
26 Judah recognized them and said, "She is more righteous than I, since I didn't give her to my son Shelah." He never slept with her again. ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.
27 When the time came for her to give birth, there were twins in her womb. ಅವಳು ಹೆರುವ ಸಮಯದಲ್ಲಿ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದವು.
28 As she gave birth, one put out a hand. The midwife tied a scarlet thread on it: "This one came out first." ಆಕೆಯು ಹೆರುವಾಗ ಒಂದು ಮಗುವು ತನ್ನ ಕೈಚಾಚಿತು. ಆಗ ಸೂಲಗಿತ್ತಿಯು, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.
29 As he drew back his hand, his brother came out, and she said, "What a breach you've made for yourself!" So the brother who came out was named Perez. ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು, “ನೀನು ಕಿತ್ತುಕೊಂಡು ಹೊರಗೆ ಬಂದೆಯಾ?” ಎಂದಳು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು.
30 Then his brother came out with the scarlet thread on his hand, and was named Zerah. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]