Skip to content
The Believer's Library

Biblica® Open Kannada Contemporary Version 2022

Genesis 39 OKCV

Show OKCV only
Verse × ×
1 Joseph was brought down to Egypt; Potiphar, Pharaoh's Egyptian official and captain of the guard, bought him from the Ishmaelites who had brought him down there. ಯೋಸೇಫನನ್ನು ಕರೆದುಕೊಂಡುಹೋದ ಇಷ್ಮಾಯೇಲರು ಈಜಿಪ್ಟಿಗೆ ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.
2 Our Father was with Joseph; he thrived, serving in his Egyptian master's house. ಯೆಹೋವ ದೇವರು ಯೋಸೇಫನ ಸಂಗಡ ಇದ್ದುದರಿಂದ, ಅವನು ಏಳಿಗೆಯಾಗಿ ಈಜಿಪ್ಟಿನವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
3 His master saw our Father was with him, our Father making all he did succeed in his hand. ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.
4 Joseph found favor with him and served him; his master put Joseph over his house, entrusting him with all he owned. ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
5 From when he put Joseph over his house and all he owned, our Father blessed the Egyptian's house for Joseph's sake; our Father's blessing was on all he had, house and field. ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.
6 Potiphar left all he owned in Joseph's care, aware of nothing except what he ate. Joseph was well-built and handsome. ಹೀಗಿರುವುದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ, ತನ್ನ ಊಟದ ವಿಷಯದಲ್ಲಿ ಹೊರತು ಬೇರೆ ಯಾವುದರ ವಿಷಯದಲ್ಲಿಯೂ ಚಿಂತಿಸದೆ ಇದ್ದನು. ಯೋಸೇಫನು ಸುರೂಪಿಯೂ ಸುಂದರನೂ ಆಗಿದ್ದನು.
7 After these things, his master's wife cast her eyes on Joseph and said, "Sleep with me." ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು.
8 He refused, telling his master's wife, "Look, with me here, my master oversees nothing in the house; all he owns he has put in my hands. ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
9 He is no greater in this house than I am; he's held back nothing from me except you, since you are his wife. How could I do this great evil and sin against our Father?" ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.
10 Day after day she spoke to Joseph, but he refused to listen to her, to lie beside her, to be with her. ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.
11 One day Joseph entered the house to do his work, with no household man inside. ಹೀಗಿರುವಲ್ಲಿ ಒಂದು ದಿನ ಅವನು ತನ್ನ ಕೆಲಸ ಮಾಡುವುದಕ್ಕೆ ಮನೆಯನ್ನು ಪ್ರವೇಶಿಸಿದಾಗ, ಮನೆಯ ಸೇವಕರಲ್ಲಿ ಒಬ್ಬರೂ ಇರಲಿಲ್ಲ.
12 She caught him by his garment, saying, "Sleep with me!" He left it in her hand and fled outside. ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
13 When she saw that he had left his garment in her hand and fled outside, ಅವನು ತನ್ನ ವಸ್ತ್ರವನ್ನು ತನ್ನ ಕೈಯಲ್ಲಿ ಬಿಟ್ಟು ಬಿಟ್ಟಿದ್ದನ್ನೂ, ಹೊರಗೆ ಓಡಿ ಹೋದದ್ದನ್ನೂ ಅವಳು ಕಂಡು,
14 she called the men of her household and said, "Look—he brought us a Hebrew man to mock us. He came in to me to sleep with me, and I screamed loudly. ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.
15 When he heard me cry out, he left his garment beside me and fled outside. ನಾನು ಜೋರಾಗಿ ಕೂಗಿದ್ದನ್ನು ಅವನು ಕೇಳಿ, ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು,” ಎಂದಳು.
16 She kept his garment beside her until his master came home." ತನ್ನ ಯಜಮಾನನು ಹೊರಗಿನಿಂದ ಬರುವವರೆಗೆ, ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
17 She told him the same story: "The Hebrew servant you brought us came to me to mock me. ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುತ್ತಾ, “ನೀನು ನಮ್ಮ ಬಳಿಗೆ ತಂದ ಹಿಬ್ರಿಯ ಸೇವಕನು ನನ್ನನ್ನು ಅವಮಾನ ಮಾಡುವುದಕ್ಕೆ ನನ್ನ ಬಳಿಗೆ ಬಂದನು.
18 But when I cried out, he left his garment beside me and fled outside." ಆದರೆ ನಾನು ಜೋರಾಗಿ ಕೂಗಿಕೊಂಡಾಗ, ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು,” ಎಂದಳು.
19 When his master heard his wife's words to him—"Your servant did these things to me"—his anger flared. “ನಿನ್ನ ಸೇವಕನು ನನಗೆ ಹೀಗೆ ಮಾಡಿದ,” ಎಂದು ತನ್ನ ಹೆಂಡತಿ ಹೇಳಿದ್ದನ್ನು ಯಜಮಾನನು ಕೇಳಿ, ಅವನ ಕೋಪವೇರಿತು.
20 Joseph's master took him and put him in the prison holding the king's prisoners. He stayed there in the prison. ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
21 But our Father was with Joseph, showing him covenant love and favor with the prison warden. ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.
22 The prison warden put Joseph in charge of all its prisoners; whatever was done there, he did. ಆದ್ದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು.
23 The warden checked nothing in Joseph's care, since our Father was with him—whatever he did, our Father made succeed. ಯೆಹೋವ ದೇವರು ಅವನ ಸಂಗಡ ಇದ್ದುದರಿಂದಲೂ ಅವನು ಮಾಡುವುದನ್ನು ಯೆಹೋವ ದೇವರು ಅಭಿವೃದ್ಧಿಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವುದಕ್ಕೂ ಚಿಂತೆ ಮಾಡದೆ ಇದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]