Skip to content
The Believer's Library

Biblica® Open Kannada Contemporary Version 2022

Genesis 4 OKCV

Show OKCV only
Verse × ×
1 Adam slept with his wife Eve; she conceived and bore Cain, saying, "With our Father's help I have gained a man." ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, “ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ,” ಎಂದು ಹೇಳಿದಳು.
2 Later she gave birth to his brother Abel. Abel kept flocks, and Cain worked the ground. ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.
3 After some time, Cain brought our Father an offering of the ground's fruit. ಸ್ವಲ್ಪ ಕಾಲದ ತರುವಾಯ, ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು, ಯೆಹೋವ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದನು.
4 Abel, too, brought the firstborn of his flock and their fat portions. Our Father favored Abel and his offering, ಹೇಬೆಲನು ಸಹ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನೂ ಅವುಗಳ ಕೊಬ್ಬನ್ನೂ ತಂದನು. ಯೆಹೋವ ದೇವರು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು.
5 but not on Cain and his offering, so Cain burned with anger and his face fell. ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.
6 Then our Father said to Cain, "Why are you angry? Why has your face fallen? ಆಗ ಯೆಹೋವ ದೇವರು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ಏಕೆ ನಿನ್ನ ಮುಖವು ಬಾಡಿದೆ?
7 If you do right, won't you be accepted? If you don't, sin crouches at your door, longing for you—but you must rule over it." ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.
8 Cain said to his brother Abel, "Let's go to the field." There, Cain rose against his brother Abel and killed him. ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.
9 Then our Father asked Cain, "Where's your brother Abel?" "I don't know," he said. "Am I my brother's keeper?" ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.
10 Our Father said, "What have you done? The voice of your brother's blood cries out to me from the ground. ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.
11 Now a curse drives you from the ground, which opened its mouth to take your brother's blood from your hand. ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.
12 When you work the ground, it will no longer give you its strength; you will be a wandering fugitive on the earth." ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.
13 Cain said to our Father, "My punishment is more than I can bear. ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.
14 Today you drive me from this ground; I'll be hidden from your presence, a restless fugitive on earth, and whoever finds me will kill me." ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.
15 But our Father told him, "No—whoever kills Cain will be avenged seven times over." Then our Father marked Cain, so no one who found him would kill him. ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.
16 Cain left the presence of our Father and settled in the land of Nod, east of Eden. ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.
17 Cain slept with his wife; she conceived and bore Enoch. He was building a city and named it after his son Enoch. ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.
18 Irad was born to Enoch. Irad fathered Mehujael, Mehujael fathered Methushael, Methushael fathered Lamech. ಹನೋಕನಿಂದ ಈರಾದನು ಹುಟ್ಟಿದನು. ಈರಾದನಿಂದ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಂದ ಮೆತೂಷಾಯೇಲನು ಹುಟ್ಟಿದನು. ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
19 Lamech married two women, one named Adah and the other Zillah. ಲೆಮೆಕನು ಇಬ್ಬರು ಸ್ತ್ರೀಯರನ್ನು ಮದುವೆಯಾದನು. ಒಬ್ಬಳ ಹೆಸರು ಆದಾ ಮತ್ತೊಬ್ಬಳ ಹೆಸರು ಚಿಲ್ಲಾ.
20 Adah bore Jabal, father of tent dwellers and livestock herders. ಆದಾಳು ಯಾಬಾಲನನ್ನು ಹೆತ್ತಳು. ಪಶುಗಳನ್ನು ಸಾಕುತ್ತಾ, ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.
21 His brother's name was Jubal; he was the father of all who play the harp and flute. ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.
22 Zillah also bore Tubal-Cain, forger of all bronze and iron tools; Tubal-Cain's sister was Naamah. ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
23 Lamech told his wives: "Adah and Zillah, hear me; wives of Lamech, listen to what I say. I killed a man who wounded me, a young man who bruised me. ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.
24 If Cain is avenged seven times, then Lamech seventy-seven times." ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”
25 Adam slept with his wife again; she bore a son and named him Seth: "Our Father has given me another child instead of Abel, since Cain killed him." ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.
26 Seth too had a son and named him Enosh. Then people began calling on our Father's name. ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]