Skip to content
The Believer's Library

Biblica® Open Kannada Contemporary Version 2022

Genesis 40 OKCV

Show OKCV only
Verse × ×
1 After these things, the king of Egypt's cupbearer and baker sinned against their lord, the king of Egypt. ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.
2 Pharaoh was furious with his two officials, the chief cupbearer and the chief baker. ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,
3 He put them in custody in the guard captain's house, the prison where Joseph was held. ಅವರನ್ನು ಮೈಗಾವಲಿನವರ ದಳಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸ್ಥಳವಾಗಿತ್ತು.
4 The captain of the guard assigned Joseph to serve them; they remained in custody for some days. ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
5 Then both of them, the cupbearer and baker of Egypt's king, imprisoned in the prison, each dreamed a dream in one night, each dream with its own meaning. ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು.
6 When Joseph came to them in the morning, he saw that they were troubled. ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.
7 He asked Pharaoh's officials with him in custody in his master's house, "Why do you look downcast today?" ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು.
8 They told him, "We each had a dream, with no one to interpret it." Joseph replied, "Don't interpretations belong to our Father? Please tell them to me." ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.
9 The chief cupbearer told Joseph his dream: "In my dream a vine stood before me. ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುತ್ತಾ, “ಕನಸಿನಲ್ಲಿ ನನ್ನ ಮುಂದೆ ದ್ರಾಕ್ಷಿಬಳ್ಳಿ ಇತ್ತು.
10 The vine had three branches; as it sprouted, its blossoms opened, and the clusters ripened into grapes. ಆ ದ್ರಾಕ್ಷಿಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ, ಹೂವು ಅರಳಿ, ಅದರ ಗೊಂಚಲುಗಳು ಹಣ್ಣಾದವು.
11 Pharaoh's cup was in my hand; I took the grapes, squeezed them into Pharaoh's cup, and put the cup in Pharaoh's hand." ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ, ನಾನು ಆ ದ್ರಾಕ್ಷಿಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ, ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು,” ಎಂದನು.
12 Then Joseph said to him, "This is its interpretation: the three branches are three days. ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.
13 In three days Pharaoh will lift up your head, restore you to your position, and you will put Pharaoh's cup in his hand, as before, when you were his cupbearer. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.
14 But remember me when it's well with you; please do me kindness—mention me to Pharaoh, so he may bring me out of this house. ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.
15 For I was indeed kidnapped from the land of the Hebrews, and even here I've done nothing to deserve this dungeon." ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.
16 Seeing the interpretation was good, the chief baker said to Joseph, "I too had a dream: three baskets of white bread on my head. ಯೋಸೇಫನು ಒಳ್ಳೆಯ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ತಿಳಿದಾಗ, ಅವನು ಯೋಸೇಫನಿಗೆ, “ನನ್ನ ಕನಸಿನಲ್ಲಿಯೂ ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.
17 The top basket held all kinds of baked goods for Pharaoh, but birds were eating them from the basket on my head." ಮೇಲಿದ್ದ ಪುಟ್ಟಿಯಲ್ಲಿ ಫರೋಹನಿಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿದ್ದ ಅದನ್ನು ಪಕ್ಷಿಗಳು ತಿಂದವು,” ಎಂದನು.
18 Joseph replied, "This is its interpretation: the three baskets are three days. ಅದಕ್ಕೆ ಯೋಸೇಫನು ಉತ್ತರವಾಗಿ, “ಅದರ ಅರ್ಥವು ಇದೇ: ಆ ಮೂರು ಪುಟ್ಟಿಗಳು, ಮೂರು ದಿನಗಳು.
19 In three days Pharaoh will lift your head off you and hang you on a tree—birds will eat the flesh off you. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.
20 On the third day, Pharaoh's birthday, he gave a feast for all his officials, and lifted the head of his chief cupbearer and the head of his chief baker among them," ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೂ ಔತಣವನ್ನು ಮಾಡಿಸಿ, ಮುಖ್ಯ ಪಾನದಾಯಕನನ್ನು ಮತ್ತು ಮುಖ್ಯ ರೊಟ್ಟಿಗಾರನನ್ನು ತನ್ನ ಅಧಿಕಾರಿಗಳ ಮುಂದೆ ನಿಲ್ಲಿಸಿದನು.
21 restoring the chief cupbearer to his position, so he placed the cup in Pharaoh's hand. ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.
22 But he hanged the chief baker, just as Joseph had interpreted to them. ಆದರೆ ಮುಖ್ಯ ರೊಟ್ಟಿಗಾರನನ್ನು ಗಲ್ಲಿಗೇರಿಸಿದನು. ಹೀಗೆ ಯೋಸೇಫನು ಹೇಳಿದ ಹೇಳಿದಂತೆಯೇ ಆಯಿತು.
23 Yet the chief cupbearer did not remember Joseph—he forgot him. ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]