Skip to content
The Believer's Library

Biblica® Open Kannada Contemporary Version 2022

Genesis 41 OKCV

Show OKCV only
Verse × ×
1 After two full years had passed, Pharaoh had a dream: he was standing beside the Nile. ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.
2 Seven cows, sleek and fat, came up from the Nile and grazed among the reeds. ಲಕ್ಷಣವಾದ ಮತ್ತು ಕೊಬ್ಬಿದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
3 Seven other cows, ugly and bony, came up after them from the Nile and stood beside them on the Nile's bank. ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.
4 Ugly, thin cows ate the seven fine, fat cows, and Pharaoh woke up. ಆ ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನು ಎಚ್ಚೆತ್ತನು.
5 He fell asleep again and had a second dream: seven heads of grain, plump and good, grew on one stalk. ಅವನು ತಿರುಗಿ ನಿದ್ರೆ ಮಾಡಿದಾಗ, ಎರಡನೆಯ ಸಾರಿ ಕನಸನ್ನು ಕಂಡನು. ಒಂದೇ ದಂಟಿನಲ್ಲಿ ಏಳು ಒಳ್ಳೆಯ ಪುಷ್ಟಿಯಾದ ತೆನೆಗಳು ಎದ್ದವು.
6 Then after them, seven heads of grain sprouted up—thin and scorched by the east wind. ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.
7 The thin heads swallowed the seven plump, full heads. Then Pharaoh woke up—it had been a dream. ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು.
8 In the morning his spirit was troubled; he sent and called all Egypt's magicians and all its wise men. Pharaoh told them his dreams, but none could interpret them for him. ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
9 Then the chief cupbearer said to Pharaoh, "Today I am reminded of my offenses. ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
10 Pharaoh was angry with his servants and put me in custody in the guard captain's house, with the chief baker. ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ.
11 I and he each dreamed the same night, each dream with its own meaning. ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
12 A young Hebrew, servant of the guard captain, was with us. We told him our dreams, and he interpreted each according to its own meaning. ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.
13 Just as he interpreted for us, it happened: I was restored to my position, the other was hanged." ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನಾನು ನನ್ನ ಸ್ಥಾನವನ್ನು ಪುನಃ ಪಡೆದುಕೊಂಡೆನು, ಇನ್ನೊಬ್ಬನನ್ನು ಗಲ್ಲಿಗೇರಿಸಲಾಯಿತು,” ಎಂದು ಹೇಳಿದನು.
14 Pharaoh sent for Joseph, and they rushed him from the dungeon. He shaved, changed his clothes, and came before Pharaoh. ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
15 Pharaoh said to Joseph, "I've had a dream no one can interpret. I've heard about you that when you hear a dream, you can interpret it." ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.
16 "I can't do that on my own," Joseph replied. "Our Father will give Pharaoh a favorable answer." ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.
17 Then Pharaoh said to Joseph, "In my dream I was standing on the bank of the Nile. ಅದಕ್ಕೆ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
18 Seven fat, sleek cows came up from the Nile and grazed among the reeds. ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
19 Then seven other cows came up after them—scrawny, very ugly, thin-fleshed—the like I had never seen in all the land of Egypt. ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬೇರೆ ಏಳು ಬಡಹಸುಗಳು ಏರಿ ಬಂದವು. ಅಂಥ ಬಡ ಹಸುಗಳನ್ನು, ನಾನು ಈಜಿಪ್ಟ್ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
20 The gaunt, ugly cows ate the first seven fat cows. ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು.
21 Even after eating them, no one could tell, for they still looked as bad as before. Then I woke up. ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಲಿಲ್ಲ. ಅವು ಮೊದಲಿನಂತೆ ಬಡಕಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
22 In my dream I saw seven heads of grain grow on one stalk, full and good. “ನನಗೆ ಇನ್ನೊಂದು ಕನಸು ಬಂತು. ನಾನು ಆ ಕನಸಿನಲ್ಲಿ, ಒಂದೇ ದಂಟಿನಲ್ಲಿ ಪುಷ್ಟಿಯುಳ್ಳ ಏಳು ತೆನೆಗಳು ಇದ್ದವು.
23 And after them sprouted seven heads of grain—withered, thin, and scorched by the east wind. ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
24 The thin heads swallowed the seven good heads. I told the magicians, but none could explain it to me." ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.
25 Joseph said to Pharaoh, "Pharaoh's dreams are one: our Father has revealed to Pharaoh what he's about to do. ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.
26 The seven good cows are seven years, and the seven good heads of grain are seven years—it is one dream. ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.
27 The seven thin, ugly cows that came up after them are seven years, and the seven empty heads scorched by the east wind are seven years of famine. ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು.
28 This is what I told Pharaoh: our Father has shown Pharaoh what he is about to do. “ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ.
29 Seven years of great abundance are coming throughout all the land of Egypt. ಈಜಿಪ್ಟ್ ದೇಶದಲ್ಲೆಲ್ಲಾ ಬಹುಸಮೃದ್ಧಿಯ ಸುಭಿಕ್ಷ ವರ್ಷಗಳು ಬರುತ್ತವೆ.
30 Then seven years of famine will follow. All the plenty in Egypt will be forgotten, and famine will devour the land. ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.
31 The abundance will be forgotten in the land, since the famine afterward will be so severe. ತರುವಾಯ ಬರಗಾಲವು ಬಹಳ ಕಠಿಣವಾಗಿರುವುದರಿಂದ, ಸುಭಿಕ್ಷ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವುದು.
32 Pharaoh's dream repeated twice means our Father has firmly fixed this matter, and our Father will soon carry it out. ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.
33 So let Pharaoh find a discerning, wise man and put him over Egypt's land. “ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.
34 Let Pharaoh take action and appoint overseers over the land, and take a fifth of Egypt's produce during the seven years of abundance. ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.
35 Let them gather all the food of these good coming years, and store grain under Pharaoh's hand as food in the cities, and guard it. ಅಧಿಕಾರಿಗಳು ಮುಂಬರುವ ಈ ಒಳ್ಳೆಯ ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
36 That food will be a reserve for the land during the seven years of famine coming on the land of Egypt, so the land won't be cut off by famine." ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.
37 The plan seemed good to Pharaoh and to all his servants. ಈ ಮಾತುಗಳು ಫರೋಹನಿಗೂ, ಅವನ ಸೇವಕರಿಗೂ ಒಳ್ಳೆಯದೆಂದು ತೋರಿತು.
38 Pharaoh said to his servants, "Can we find anyone like this, a man with God's Spirit in him?" ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.
39 Pharaoh said to Joseph, "Since God has shown you all this, none is as discerning and wise as you. ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
40 You will be over my house; all my people will obey your command. Only in the throne will I be greater than you." ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.
41 And Pharaoh said to Joseph, "See, I have set you over all the land of Egypt." ಇದಲ್ಲದೆ ಫರೋಹನು ಯೋಸೇಫನಿಗೆ, “ನೋಡು, ನಾನು ನಿನ್ನನ್ನು ಈಜಿಪ್ಟ್ ದೇಶದ ಮೇಲೆಲ್ಲಾ ನೇಮಿಸಿದ್ದೇನೆ,” ಎಂದನು.
42 Pharaoh took the signet ring from his hand and put it on Joseph's hand, dressed him in fine linen, and put a gold chain on his neck. ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.
43 Pharaoh had Joseph ride in his own second chariot, had men call out before Joseph, "Kneel!" and set him over all Egypt's land. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.
44 Pharaoh said to Joseph, "I am Pharaoh; without you, no one moves hand or foot in all the land of Egypt." ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು.
45 Pharaoh named Joseph Zaphenath-paneah and gave him Asenath, daughter of Potiphera, priest of On, as wife. Then Joseph went out over the land of Egypt. ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
46 Joseph was thirty when he stood before Pharaoh king of Egypt. He left Pharaoh's presence and traveled through all the land of Egypt. ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.
47 During the seven years of abundance, the land produced bountifully. ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
48 He collected all the food of the seven years in Egypt and stored it in the cities, in each city the food of the fields around it. ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
49 Joseph stored grain like the sand of the sea—so much he stopped counting; it was uncountable. ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕಮಾಡುವುದಕ್ಕೆ ಆಗದೆ ಹೋಯಿತು.
50 Before the famine years, Joseph fathered two sons with Asenath, daughter of Potiphera, priest of On. ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು.
51 Joseph named the firstborn Manasseh: "Because our Father made me forget all my hardship and all my father's house." ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.
52 He named the second Ephraim: "For our Father has made me fruitful in the land of my suffering." ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.
53 The seven years of abundance in the land of Egypt came to an end. ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,
54 The seven years of famine began, just as Joseph had said. Famine struck every land, but in all the land of Egypt there was bread. ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.
55 When famine struck all Egypt, the people cried to Pharaoh for bread. Pharaoh told all the Egyptians, "Go to Joseph; do whatever he tells you." ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.
56 As the famine spread across the land, Joseph opened all the storehouses and sold grain to the Egyptians, since the famine was severe in Egypt. ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.
57 All the earth came to Egypt to buy grain from Joseph, for the famine gripped all the earth. ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]