Skip to content
The Believer's Library

Biblica® Open Kannada Contemporary Version 2022

Genesis 43 OKCV

Show OKCV only
Verse × ×
1 Now the famine was severe in the land. ದೇಶದಲ್ಲಿ ಬರವು ಘೋರವಾಗಿತ್ತು.
2 When they'd eaten the grain brought from Egypt, their father said, "Go back and buy us a little food." ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.
3 But Judah told him, "The man firmly warned us: 'You won't see my face without your brother.' ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.
4 If you send our brother with us, we will go down and buy you food. ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ, ನಾವು ಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಂಡು ಬರುತ್ತೇವೆ.
5 But if you won't send him, we won't go, for the man said, 'You won't see my face without your brother.'" ಅವನನ್ನು ಕಳುಹಿಸದೆ ಹೋದರೆ, ನಾವು ಹೋಗುವುದಿಲ್ಲ. ಏಕೆಂದರೆ ಆ ಮನುಷ್ಯನು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ, ನನ್ನ ಮುಖವನ್ನು ನೋಡಬಾರದು,’ ಎಂದು ನಮಗೆ ಹೇಳಿದ್ದಾನೆ,” ಎಂದನು.
6 Israel said, "Why did you harm me by telling the man you had another brother?" ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು.
7 They said, "The man questioned us closely about ourselves and our family: 'Is your father still alive? Do you have another brother?' We answered accordingly. How could we know he'd say, 'Bring your brother down'?" ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.
8 Judah said to his father Israel, "Send the boy with me; let's go, so we may live and not die—we, you, and our children. ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು.
9 I pledge myself for him—demand him from me. If I don't bring him back and set him before you, I'll bear the blame before you forever. ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.
10 For if we had not delayed, surely by now we would have returned twice." ಏಕೆಂದರೆ ನಾವು ತಡಮಾಡದೆ ಇದ್ದಿದ್ದರೆ, ಇಷ್ಟರಲ್ಲಿ ಎರಡು ಸಾರಿ ಹೋಗಿ ಬರಬಹುದಾಗಿತ್ತು,” ಎಂದನು.
11 Israel their father said to them, "If it must be so, do this: put the land's best products in your bags, and take the man a gift—a little balm, a little honey, spices, myrrh, pistachios, almonds. ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
12 Take double the money, and bring back what was returned in your sacks' mouths—perhaps an oversight. ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.
13 Take your brother also, and go back to the man. ನಿಮ್ಮ ಸಹೋದರನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ತಿರುಗಿ ಹೋಗಿರಿ.
14 May El Shaddai—our Father Almighty—grant you mercy before the man, so he releases your other brother and Benjamin. And as for me, if I'm bereaved of my children, I'm bereaved." ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.
15 The men took the gift, twice the silver, and Benjamin, went down to Egypt, and stood before Joseph. ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.
16 Seeing Benjamin with them, Joseph told his house steward, "Bring the men into the house, slaughter an animal, and prepare it—they'll eat with me at noon." ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು.
17 The man did as Joseph said, and he brought the men into Joseph's house. ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು.
18 The men were afraid because they were brought into Joseph's house. They said, "It's because of the money returned in our sacks the first time, that we're brought in—to attack us, fall on us, seize us as slaves, and take our donkeys." ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.
19 So they approached the steward of Joseph's house and spoke to him at the door, ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,
20 and said, "Please, sir, we indeed came down the first time to buy food. “ಒಡೆಯಾ, ನಾವು ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಮೊದಲನೆಯ ಸಾರಿ ಬಂದದ್ದು ನಿಜವೇ.
21 At the lodge, when we opened our sacks, each man's silver was there in full weight, in his sack's mouth. We've brought it back with us. ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.
22 We also brought more money to buy food, but don't know who put it in our sacks." ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಈ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು,” ಎಂದರು.
23 He said, "Peace to you, don't fear. Your Father and the God of your father gave you treasure in your sacks; your payment reached me." Then he brought Simeon out to them. ಅದಕ್ಕವನು, “ನಿಮಗೆ ಸಮಾಧಾನವಿರಲಿ, ಭಯಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ನಿಕ್ಷೇಪವನ್ನು ಕೊಟ್ಟಿದ್ದಾರೆ. ನಿಮ್ಮ ಹಣವು ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
24 The man brought them into Joseph's house and gave them water, and they washed their feet; and he fed their donkeys. ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ, ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
25 So they readied the gift for Joseph's noon arrival, since they'd heard they would eat there. ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
26 When Joseph came home, they brought him the gift in their hands and bowed to him, to the ground. ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.
27 He asked how they were, then said, "Is your father—the old man you mentioned—well? Is he still alive?" ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.
28 They said, "Your servant our father is well, still alive." They bowed and prostrated themselves. ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.
29 He looked up, saw his brother Benjamin, his mother's son, and asked, "Is this your youngest brother you told me about?" Then he said, "May our Father be gracious to you, my son." ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.
30 Joseph hurried out, moved with compassion toward his brother, seeking a place to weep; he went into his room and wept there. ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
31 Then he washed his face and came out; and he composed himself and said, "Serve the meal." ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು.
32 They served him alone, his brothers alone, Egyptians eating with him alone—Egyptians can't eat bread with Hebrews, detestable to them. ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು.
33 They sat before him: the firstborn by his birthright, the youngest by his youth—the men were astonished at one another. ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು.
34 He sent portions to them from his table, Benjamin's portion five times the others'. They drank and celebrated with him. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]