Skip to content
The Believer's Library

Biblica® Open Kannada Contemporary Version 2022

Genesis 44 OKCV

Show OKCV only
Verse × ×
1 Then he told his house steward: "Fill the men's sacks with food, as much as they can carry, and put each man's silver at his sack's opening. ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ, “ಈ ಮನುಷ್ಯರ ಚೀಲಗಳಲ್ಲಿ ಹೊರುವುದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ, ಪ್ರತಿಯೊಬ್ಬನ ಹಣವನ್ನು ಅವನವನ ಚೀಲದ ಬಾಯಲ್ಲಿ ಇಡು.
2 Put my cup, the silver cup, in the mouth of the youngest's sack, with his grain money." He did as Joseph said. ನನ್ನ ಬೆಳ್ಳಿಯ ಪಾತ್ರೆಯನ್ನು ಚಿಕ್ಕವನ ಚೀಲದ ಬಾಯಲ್ಲಿ ಅವನ ಧಾನ್ಯ ಹಾಗೂ ಹಣದ ಸಂಗಡ ಇಡು,” ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿದಂತೆಯೇ ಅವನು ಮಾಡಿದನು.
3 As soon as the morning was light, the men were sent away with their donkeys. ಸೂರ್ಯೋದಯವಾದಾಗ ಆ ಮನುಷ್ಯರನ್ನು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲಾಯಿತು.
4 They had left the city, not yet far off, when Joseph told his steward, "Chase down the men. When you catch them, ask, 'Why have you repaid evil for good? ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ?
5 Isn't this the cup my lord drinks from and uses for fortune-telling? What you've done is evil.'" ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.
6 When he overtook them, he spoke these words to them. ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.
7 They said, "Why does my lord say such things? Your servants would never do such a thing. ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.
8 Look, we brought back to you from Canaan the silver we found in our sacks' openings. How could we steal silver or gold from your master's house? ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?
9 Whichever of your servants it's found with will die, and we'll become my lord's slaves too." ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.
10 He said, "Good—let it be as you say. Whoever has it will be my slave; the rest of you are innocent." ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು.
11 Then each man quickly lowered his sack to the ground, and each man opened his sack. ಅದಕ್ಕೆ ಅವರು ತ್ವರೆಪಟ್ಟು, ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
12 He searched, starting with the oldest, ending with the youngest—the cup was found in Benjamin's sack. ಅವರು ಹಿರಿಯನನ್ನು ಮೊದಲುಗೊಂಡು ಕಿರಿಯವನವರೆಗೆ ಶೋಧಿಸಲಾಗಿ, ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.
13 Then they tore their clothes, and every man loaded his donkey, and they returned to the city. ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು, ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಕೊಂಡು ಪಟ್ಟಣಕ್ಕೆ ಮರಳಿ ಬಂದರು.
14 When Judah and his brothers reached Joseph's house, he was still there, and they fell to the ground before him. ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.
15 Joseph said to them, "What have you done? Don't you know a man like me surely tells fortunes?" ಆಗ ಯೋಸೇಫನು ಅವರಿಗೆ, “ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದನು.
16 Judah said, "What can we say to my lord? What can we speak? How can we clear ourselves? Our Father has found your servants' guilt. Look—we are my lord's slaves, both we and the one in whose hand the cup was found." ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.
17 But he said, "I could never do this. Only the man in whose hand the cup was found will be my slave. The rest of you, go back to your father in peace." ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.
18 Then Judah stepped forward and said, "Please, my lord, let your servant speak a word to you. Don't be angry with your servant, for you are like Pharaoh himself. ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.
19 My lord asked his servants, saying, 'Do you have a father or a brother?' ನನ್ನ ಒಡೆಯನೇ, ‘ನಿಮಗೆ ತಂದೆಯೂ ಸಹೋದರರೂ ಇದ್ದಾರೋ,’ ಎಂದು ತನ್ನ ದಾಸರನ್ನು ಕೇಳಲು,
20 We said to my lord, 'We have an old father, and a young son born late in life. His brother is dead; he alone is left of his mother's children, and his father loves him.' ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.
21 Then you told your servants, 'Bring him down to me so I can see him myself.' “ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ.
22 We told my lord, 'The boy can't leave his father, because if he does, his father will die.' ನಾವು ನಮ್ಮ ಒಡೆಯನಿಗೆ, ‘ಆ ಹುಡುಗನು ನಮ್ಮ ತಂದೆಯನ್ನು ಬಿಡಕೂಡದು. ಅವನು ತಂದೆಯನ್ನು ಬಿಟ್ಟರೆ, ಅವನು ಸಾಯುವನು,’ ಎಂದು ಹೇಳಿದೆವು.
23 You told your servants, 'If your youngest brother doesn't come down with you, you won't see my face again.' ಆಗ ನೀವು ನಿನ್ನ ದಾಸರಿಗೆ, ‘ನಿಮ್ಮ ಚಿಕ್ಕ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ, ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು,’ ಎಂದು ಹೇಳಿದೆ.
24 When we went back to my father, your servant, we told him what you had said. ಹೀಗಿರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ, ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
25 And when our father said, 'Go again, buy us a little food,' “ನಮ್ಮ ತಂದೆಯು, ‘ನೀವು ತಿರುಗಿ ಹೋಗಿ, ನಮಗೆ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ,’ ಎಂದನು.
26 we said, 'We can't go down. If our youngest brother comes with us, then we will go. For we can't see the man's face unless our youngest brother is with us.' ಆಗ ನಾವು, ‘ಹೋಗುವುದಕ್ಕಾಗದು, ನಮ್ಮ ಚಿಕ್ಕ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಏಕೆಂದರೆ ನಮ್ಮ ಚಿಕ್ಕ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ, ಆ ಮನುಷ್ಯನ ಮುಖವನ್ನು ನಾವು ನೋಡುವುದಕ್ಕಾಗುವುದು,’ ಎಂದು ಹೇಳಿದೆವು.
27 Then your servant my father said to us, 'You know that my wife bore me two sons. “ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು, ‘ನನ್ನ ಹೆಂಡತಿಯು ನನಗೆ ಇಬ್ಬರು ಪುತ್ರರನ್ನು ಹೆತ್ತಳೆಂಬುದು ನಿಮಗೆ ತಿಳಿದಿದೆ.
28 One left me, and I said, "Surely torn to pieces"; I haven't seen him since. ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.
29 If you take this one too from me, and harm meets him, you'll bring my gray head down to the grave in grief. ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು.
30 So when I come to your servant, my father, and the boy isn't with us, his life is bound to the boy's life, “ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದಲ್ಲಿ ನೆಟ್ಟಿದ್ದರಿಂದ,
31 when he sees the boy is gone, he'll die, and your servants will bring your servant our father down to the grave in sorrow.' ಹುಡುಗನು ನಮ್ಮ ಸಂಗಡ ಇಲ್ಲದಿರುವುದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯುವಂತೆ ಮಾಡುವರು.
32 For your servant guaranteed the boy to my father, saying, 'If I don't bring him back to you, I'll bear the guilt before my father all my life.' ಏಕೆಂದರೆ ನಿನ್ನ ದಾಸನಾದ ನಾನು, ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆಯಾಗಿ, ‘ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆನು,’ ಎಂದು ಹೇಳಿಕೊಂಡಿದ್ದೇನೆ.
33 So please, let your servant stay as my lord's slave instead of the boy, and let the boy return with his brothers. “ಹಾಗಿದ್ದಲ್ಲಿ ಆ ಹುಡುಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು. ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.
34 How can I return to my father without the boy? I could not bear to see the disaster that would strike my father." ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]