Skip to content
The Believer's Library

Biblica® Open Kannada Contemporary Version 2022

Genesis 45 OKCV

Show OKCV only
Verse × ×
1 Joseph could not control himself before everyone standing by him, so he cried out, "Send everyone away from me!" No one stayed with him when Joseph made himself known to his brothers. ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. “ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ,” ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ.
2 He wept so loudly that the Egyptians heard it, and Pharaoh's household heard it. ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ, ಹೊರಗಿದ್ದ ಈಜಿಪ್ಟಿನವರೂ, ಫರೋಹನ ಮನೆಯವರೂ ಕೇಳಿಸಿಕೊಂಡರು.
3 Joseph said to his brothers, "I am Joseph! Is my father still alive?" His brothers could not answer him, for they were terrified at his presence. ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.
4 Joseph said to his brothers, "Please, come close to me." They came close. He said, "I am your brother Joseph, whom you sold into Egypt. ಆಗ ಯೋಸೇಫನು ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿರಿ,” ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, “ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ!
5 Now don't be distressed or angry with yourselves for selling me here, since our Father sent me ahead of you to preserve life. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.
6 Famine has been in the land two years now; five more years remain with no plowing or harvest. ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ.
7 Our Father sent me ahead of you to preserve a remnant for you on earth, and keep you alive as a great band of survivors. ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.
8 So now, it wasn't you who sent me here, but our Father—he made me father to Pharaoh, lord of all his household, and ruler over all the land of Egypt. “ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.
9 Hurry, go up to my father, tell him: Your son Joseph says: Our Father has made me lord of all Egypt. Come down to me; don't delay. ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ.
10 You'll live in Goshen, near me—you, your children, your children's children, your flocks, your herds, all you own. ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.
11 I will provide for you there—five years of famine remain—so you, your household, and all you own don't fall into poverty. ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.
12 Your eyes see, and my brother Benjamin's eyes see, that it is my own mouth speaking to you. “ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ.
13 Tell my father all my honor in Egypt, and all you have seen. Hurry and bring my father down here. ಹೀಗಿರಲಾಗಿ ನೀವು ಈಜಿಪ್ಟ್ ದೇಶದಲ್ಲಿ ನನಗಿರುವ ಎಲ್ಲಾ ಘನತೆಯನ್ನೂ, ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ,” ಎಂದನು.
14 Then he threw his arms around his brother Benjamin and wept, and Benjamin wept on his neck." ಅವನು ತನ್ನ ತಮ್ಮ ಬೆನ್ಯಾಮೀನನ ಕುತ್ತಿಗೆಯನ್ನು ಅಪ್ಪಿಕೊಂಡು ಅತ್ತನು, ಬೆನ್ಯಾಮೀನನೂ ಅತ್ತನು.
15 He kissed all his brothers and wept over them. After that his brothers talked with him. ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
16 News reached Pharaoh's house: "Joseph's brothers have come." It pleased Pharaoh and his officials. ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.
17 Pharaoh said to Joseph, "Say to your brothers: do this—load your animals, go, return to the land of Canaan. ಆಗ ಫರೋಹನು ಯೋಸೇಫನಿಗೆ, “ನಿನ್ನ ಸಹೋದರರಿಗೆ ಹೀಗೆ ಮಾಡಲು ಹೇಳು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ವಸ್ತುಗಳನ್ನು ಹೇರಿ, ಕಾನಾನ್ ದೇಶಕ್ಕೆ ಹೋಗಿ,
18 Take your father and your households and come to me. I will give you the best of Egypt's land, and you will eat the richness of the land. ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’
19 You are commanded: tell them, 'Do this—take wagons from Egypt for your children and wives, bring your father, and come. “ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
20 Don't worry about your belongings—the best of all Egypt's land is yours.'" ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’ ” ಎಂದನು.
21 The sons of Israel did so; Joseph gave them wagons per Pharaoh's order, and gave them provisions for the road. ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.
22 He gave each a change of clothes, but Benjamin 300 pieces of silver and five changes of clothes. ಅವರೆಲ್ಲರಿಗೆ ಬದಲು ವಸ್ತ್ರಗಳನ್ನೂ, ಬೆನ್ಯಾಮೀನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ, ಐದು ಬದಲು ವಸ್ತ್ರಗಳನ್ನೂ ಕೊಟ್ಟನು.
23 He sent his father ten donkeys loaded with Egypt's best, and ten female donkeys loaded with grain, bread, and food for his journey. ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಈಜಿಪ್ಟಿನ ಶ್ರೇಷ್ಠವಾದವುಗಳನ್ನೂ, ಪ್ರಯಾಣಕ್ಕೋಸ್ಕರ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿ, ರೊಟ್ಟಿ, ಆಹಾರಗಳನ್ನೂ ಕಳುಹಿಸಿದನು.
24 He sent his brothers off; as they left, he said, "Don't quarrel on the way." ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು.
25 So they left Egypt and came to their father Jacob in Canaan. ಅವರು ಈಜಿಪ್ಟಿನಿಂದ ಹೊರಟುಹೋಗಿ ಕಾನಾನಿನಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದು,
26 They told him, "Joseph is still alive—ruler over all Egypt!" But his heart went numb; he didn't believe them. “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.
27 But when they told him all Joseph's words to them, and he saw the wagons Joseph sent to carry him, their father Jacob's spirit revived. ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.
28 Israel said, "Enough! Joseph my son is still alive. I will go and see him before I die." ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]