Skip to content
The Believer's Library

Biblica® Open Kannada Contemporary Version 2022

Genesis 46 OKCV

Show OKCV only
Verse × ×
1 So Israel set out with all he had, came to Beersheba, and sacrificed to our Father, whom his father Isaac had worshiped. ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.
2 And our Father spoke to Israel in visions of the night, "Jacob, Jacob." He said, "Here I am." ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.
3 He said, "I am your Father, whom your father worshiped. Do not be afraid to go down to Egypt, for there I will make you a great nation. ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.
4 I myself will go down with you to Egypt, and I will surely bring you back; and Joseph's own hand will close your eyes." ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು.
5 Jacob set out from Beersheba. Israel's sons carried their father Jacob, their little ones, and their wives in the wagons Pharaoh had sent for him. ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಆಗ ಇಸ್ರಾಯೇಲರು ತಮ್ಮ ತಂದೆ ಯಾಕೋಬನನ್ನೂ, ತಮ್ಮ ಮಕ್ಕಳನ್ನೂ, ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ರಥಗಳಲ್ಲಿ ಕೂರಿಸಿಕೊಂಡು ಹೋದರು.
6 They took their livestock and the goods they had acquired in the land of Canaan, and came to Egypt—Jacob and all his offspring with him. ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.
7 His sons and grandsons, daughters and granddaughters—all his offspring he brought with him to Egypt. ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.
8 These are the names of Israel's sons who came into Egypt—Jacob and his sons: Reuben, Jacob's firstborn. ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು.
9 The sons of Reuben: Hanoch, Pallu, Hezron, and Carmi. ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್ ಮತ್ತು ಕರ್ಮೀ ಎಂಬುವರು.
10 The sons of Simeon: Jemuel, Jamin, Ohad, Jachin, Zohar, and Shaul the son of a Canaanite woman. ಸಿಮೆಯೋನನ ಮಕ್ಕಳು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ ಎಂಬುವರು.
11 The sons of Levi: Gershon, Kohath, and Merari. ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.
12 Judah's sons: Er, Onan, Shelah, Perez, Zerah; but Er and Onan died in Canaan. Perez's sons: Hezron and Hamul. ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.
13 The sons of Issachar: Tola, Puvah, Iob, and Shimron. ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್ ಎಂಬುವರು.
14 The sons of Zebulun: Sered, Elon, and Jahleel. ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹಲೇಲ್ ಎಂಬುವರು.
15 These are Leah's sons, born to Jacob in Paddan-aram, with his daughter Dinah; his sons and daughters numbered thirty-three. ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.
16 The sons of Gad: Ziphion, Haggi, Shuni, Ezbon, Eri, Arodi, and Areli. ಗಾದನ ಮಕ್ಕಳು: ಚಿಫ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ ಎಂಬುವರು.
17 Asher's sons: Imnah, Ishvah, Ishvi, Beriah, and their sister Serah. Beriah's sons: Heber and Malchiel. ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಯ ಮತ್ತು ಅವರ ಸಹೋದರಿಯಾದ ಸೆರಹ. ಬೆರೀಗನ ಪುತ್ರರು: ಹೆಬೆರ, ಮಲ್ಕೀಯೇಲ್ ಎಂಬುವರು.
18 These are the sons of Zilpah, whom Laban gave to his daughter Leah; she bore these to Jacob—sixteen in all. ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಈಕೆಯಿಂದ ಯಾಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.
19 The sons of Rachel, Jacob's wife: Joseph and Benjamin. ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು.
20 Manasseh and Ephraim were born to Joseph in Egypt by Asenath, daughter of Potiphera, priest of On. ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.
21 The sons of Benjamin: Bela, Becher, Ashbel, Gera, Naaman, Ehi, Rosh, Muppim, Huppim, and Ard. ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಅಷ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್ ಎಂಬುವರು.
22 These are the sons of Rachel who were born to Jacob—fourteen persons in all. ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಪುತ್ರರು. ಎಲ್ಲರೂ ಕೂಡಿ ಹದಿನಾಲ್ಕು ಮಂದಿ.
23 The sons of Dan: Hushim. ದಾನನ ಮಗನು: ಹುಶೀಮನು.
24 The sons of Naphtali: Jahzeel, Guni, Jezer, and Shillem. ನಫ್ತಾಲಿಯ ಪುತ್ರರು: ಯಹಚೇಲ, ಗೂನೀ, ಯೇಚೆರ್, ಶಿಲ್ಲೇಮ್ ಎಂಬುವರು.
25 These are Bilhah's sons, whom Laban gave to his daughter Rachel; she bore these to Jacob—seven in all. ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಪುತ್ರರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲರೂ ಕೂಡಿ ಏಳುಮಂದಿ.
26 Jacob's direct descendants who came to Egypt—excluding his sons' wives—totaled sixty-six. ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.
27 Joseph had two sons born in Egypt. Jacob's household that came to Egypt numbered seventy in all. ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
28 Jacob sent Judah ahead to Joseph to lead the way to Goshen; they reached the land of Goshen. ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.
29 Joseph readied his chariot and went up to Goshen to meet his father Israel. He appeared to him, fell on his neck, and wept on his neck a long time. ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.
30 Israel said to Joseph, "Now let me die, since I've seen your face and you're still alive." ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು.
31 Joseph told his brothers and his father's household, "I will go up and tell Pharaoh, and say to him, 'My brothers and my father's household, who were in Canaan, have come to me. ಯೋಸೇಫನು ತನ್ನ ಸಹೋದರರಿಗೂ, ತನ್ನ ತಂದೆಯ ಮನೆಯವರಿಗೂ, “ನಾನು ಹೋಗಿ ಫರೋಹನಿಗೆ, ಕಾನಾನ್ ದೇಶದಲ್ಲಿದ್ದ ನನ್ನ ಸಹೋದರರೂ, ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
32 The men are shepherds, for they have been keepers of livestock; they've brought their flocks, herds, and all they have.' ಅವರು ಕುರಿಕಾಯುವವರು, ಅವರಿಗೆ ಪಶುಗಳು ಇವೆ. ತಮ್ಮ ಕುರಿದನಗಳನ್ನೂ, ತಮಗಿದ್ದದ್ದೆಲ್ಲವನ್ನೂ ತೆಗೆದುಕೊಂಡು ಬಂದಿದ್ದಾರೆ, ಎಂದು ಹೇಳುವೆನು.
33 When Pharaoh calls you and says, 'What is your occupation?' ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಕೆಲಸವೇನು?’ ಎಂದು ಕೇಳುವನು.
34 you will say, 'Your servants have raised livestock from our youth until now, we and our fathers,' so you may settle in Goshen; for every shepherd is detestable to the Egyptians." ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]