Skip to content
The Believer's Library

Biblica® Open Kannada Contemporary Version 2022

Genesis 47 OKCV

Show OKCV only
Verse × ×
1 Joseph came and told Pharaoh, "My father and my brothers, with their flocks, herds, and all they own, have come from Canaan. They are now in Goshen." ಯೋಸೇಫನು ಹೋಗಿ ಫರೋಹನಿಗೆ, “ನನ್ನ ತಂದೆಯೂ, ನನ್ನ ಸಹೋದರರೂ ತಮ್ಮ ಕುರಿದನಗಳನ್ನೂ, ತಮಗಿದ್ದ ಎಲ್ಲವುಗಳನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದಿದ್ದಾರೆ. ಅವರು ಗೋಷೆನ್ ಪ್ರಾಂತದಲ್ಲಿ ಇದ್ದಾರೆ,” ಎಂದನು.
2 From among his brothers he took five men and presented them to Pharaoh. ಅವನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
3 Pharaoh asked Joseph's brothers, "What is your work?" They told Pharaoh, "Your servants tend sheep, we and our fathers alike." ಫರೋಹನು ಯೋಸೇಫನ ಸಹೋದರರಿಗೆ, “ನಿಮ್ಮ ಕೆಲಸವೇನು?” ಎಂದು ಕೇಳಿದನು. ಅವರು ಫರೋಹನಿಗೆ, “ನಿನ್ನ ದಾಸರಾದ ನಾವೂ, ನಮ್ಮ ತಂದೆಯವರೂ ಕುರಿಕಾಯುವವರಾಗಿದ್ದೇವೆ.
4 They said to Pharaoh, "We came to live in this land as foreigners, since there's no pasture for your servants' flocks—the famine is severe in Canaan. Now please let your servants settle in Goshen." ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.
5 Pharaoh said to Joseph, "Your father and your brothers have come to you. ಅದಕ್ಕೆ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.
6 Egypt lies before you. Settle your father and brothers in the best of the land—let them live in Goshen. If you know capable men among them, put them in charge of my livestock." ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.
7 Then Joseph brought his father Jacob in and presented him to Pharaoh, and Jacob blessed Pharaoh. ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.
8 Pharaoh asked Jacob, "How many years have you lived?" ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವರ್ಷಗಳು?” ಎಂದು ಕೇಳಿದನು.
9 Jacob answered Pharaoh, "My years as a wanderer are 130. Few and hard, they haven't reached my fathers' years of wandering." ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.
10 Then Jacob blessed Pharaoh and went out from his presence. ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ, ಅವನಿಂದ ಬೀಳ್ಕೊಂಡನು.
11 So Joseph settled his father and brothers, giving them land in Egypt's best territory, the region of Rameses, as Pharaoh had ordered. ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.
12 Joseph fed his father, his brothers, and all his father's household, by the number of their children. ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.
13 No food remained in all the land, for the famine was very severe, and the land of Egypt and land of Canaan wasted from the famine. ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು.
14 Joseph gathered all the silver found in the land of Egypt and the land of Canaan for the grain they were buying, and Joseph brought the silver into Pharaoh's house. ಆಗ ಯೋಸೇಫನು ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ, ಅದನ್ನು ಫರೋಹನ ಮನೆಗೆ ತಂದನು.
15 When the silver ran out in the land of Egypt and land of Canaan, all the Egyptians came to Joseph, saying, "Give us food! Why should we die before you? Since silver is gone." ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.
16 Joseph answered, "Turn over your livestock; I'll give you food in exchange for your livestock, since your silver's gone." ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು.
17 They brought their livestock to Joseph, and he gave them bread for the horses, flocks, herds, and donkeys. He provided them bread that year for all their livestock. ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು.
18 That year ended, and they came to him the second year and said, "We can't hide from my lord that our silver is gone and the livestock belong to my lord; nothing is left for my lord but our bodies and our land. ಆ ವರ್ಷವಾದ ಮೇಲೆ ಮಾರನೆಯ ವರ್ಷದಲ್ಲಿ, ಅವರು ಅವನ ಬಳಿಗೆ ಬಂದು ಅವನಿಗೆ, “ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವುದರಿಂದ, ನಮ್ಮ ಶರೀರಗಳೂ, ನಮ್ಮ ಭೂಮಿಯೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬುದನ್ನು ನಮ್ಮ ಒಡೆಯನಿಗೆ ಮರೆಮಾಡದೆ ತಿಳಿಸುತ್ತಿದ್ದೇವೆ.
19 Why die before your eyes—we and our land? Buy us and our land for food; we and our land will serve Pharaoh. Give us seed to live, not die, and keep the land from turning desolate." ನಾವೂ, ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವುದು ಏಕೆ? ನಮ್ಮನ್ನೂ, ನಮ್ಮ ಭೂಮಿಯನ್ನೂ ಆಹಾರಕ್ಕಾಗಿ ಕೊಂಡುಕೋ. ಆಗ ನಾವೂ, ನಮ್ಮ ಭೂಮಿಯೂ ಫರೋಹನಿಗೆ ದಾಸರಾಗಿರುವೆವು. ನಮಗೆ ಬೀಜವನ್ನು ಕೊಡು, ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವುದು,” ಎಂದರು.
20 So Joseph bought all Egypt's land for Pharaoh, because each Egyptian sold his field—the famine was too severe for them. The land became Pharaoh's. ಆಗ ಯೋಸೇಫನು ಈಜಿಪ್ಟ್ ದೇಶವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಬರವು ಅವರಿಗೆ ಘೋರವಾಗಿದ್ದುದರಿಂದ ಈಜಿಪ್ಟನವರು ತಮ್ಮ ತಮ್ಮ ಹೊಲಗಳನ್ನು ಮಾರಿಬಿಟ್ಟರು. ಹೀಗೆ ದೇಶವು ಫರೋಹನದಾಯಿತು.
21 He moved the people into the cities, from one end of Egypt to the other. ಯೋಸೇಫನು ಈಜಿಪ್ಟ್ ದೇಶದ ಒಂದು ಮೇರೆಯಿಂದ ಇನ್ನೊಂದು ಮೇರೆಯವರೆಗೂ ಜನರನ್ನು ದಾಸರನ್ನಾಗಿ ಮಾಡಿದನು.
22 Only he did not buy the priests' land, since Pharaoh gave them a fixed portion they lived on; so they did not sell their land. ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
23 Joseph told the people, "Look, I have bought you and your land for Pharaoh today. Here's seed—sow the land. ಯೋಸೇಫನು ಜನರಿಗೆ, “ಇಂದು ನಿಮ್ಮನ್ನೂ, ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜ ಬಿತ್ತಿರಿ.
24 At harvest, give Pharaoh a fifth; keep four parts as seed for the field and food for you, your households, and your children." ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.
25 They said, "You saved our lives. May we find favor in my lord's eyes, and we will be Pharaoh's slaves." ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.
26 So Joseph made it law in Egypt—still in force today—that a fifth goes to Pharaoh. Only the priests' land did not become Pharaoh's. ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.
27 Israel lived in Egypt's land, in Goshen's land. They gained property there, and were fruitful and multiplied greatly. ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.
28 Jacob lived in Egypt seventeen years; his life totaled 147 years. ಇದಲ್ಲದೆ ಯಾಕೋಬನು ಈಜಿಪ್ಟ್ ದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಲ್ವತ್ತೇಳು ವರ್ಷಗಳು.
29 When Israel's time to die drew near, he called his son Joseph and said, "If I have found favor with you, please put your hand under my thigh and show me faithful love and loyalty. Please don't bury me in Egypt, ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.
30 but let me lie with my fathers. Carry me out of Egypt and bury me in their tomb." Joseph said, "I will do as you say." ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.
31 Jacob said, "Swear to me." Joseph swore to him. Then Israel bowed at the head of his bed. ಯಾಕೋಬನು ತನಗೆ ಪ್ರಮಾಣಮಾಡು ಎಂದಾಗ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]