Skip to content
The Believer's Library

Biblica® Open Kannada Contemporary Version 2022

Genesis 49 OKCV

Show OKCV only
Verse × ×
1 Jacob called his sons and said, "Gather, so I can tell you what will happen to you in the days ahead. ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
2 Assemble and listen, sons of Jacob; listen to Israel your father. “ಯಾಕೋಬನ ಪುತ್ರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ, ನಿಮ್ಮ ತಂದೆ ಇಸ್ರಾಯೇಲನ ಮಾತಿಗೆ ಕಿವಿಗೊಡಿರಿ.
3 Reuben, you are my firstborn, my might and the firstfruits of my strength, excelling in dignity and excelling in power. “ರೂಬೇನನೇ, ನೀನು ನನ್ನ ಜೇಷ್ಠಪುತ್ರನು. ನನ್ನ ಶಕ್ತಿ, ನನ್ನ ಬಲದ ಸಂಕೇತವೂ, ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ.
4 Unstable as water, you will not excel, because you went up to your father's bed; then you defiled it—he went up to my couch. ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.
5 Simeon and Levi are brothers; weapons of violence are their swords. “ಸಿಮೆಯೋನನೂ ಲೇವಿಯೂ ಸಹೋದರರು ಹಿಂಸಾಚಾರದ ಆಯುಧಗಳು.
6 May I never enter their council; may my honor not be joined to their assembly. For in their anger they killed men, and in their willfulness they hamstrung oxen. ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.
7 Cursed be their anger, for it is fierce, and their wrath, for it is cruel! I will divide them throughout Jacob and scatter them throughout Israel. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
8 Judah, your brothers will praise you; your hand will be on the neck of your enemies; your father's sons will bow down before you. “ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.
9 Judah is a lion's cub; from the prey, my son, you have come back. He stooped down; he crouched as a lion and as a lioness—who dares rouse him? ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?
10 The scepter will not depart from Judah, nor the ruler's staff from between his feet, until he comes to whom it belongs, and to him will be the obedience of the peoples. ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.
11 Binding his foal to the vine and his donkey's colt to the choice vine, he has washed his garments in wine and his robes in the blood of grapes. ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.
12 His eyes are darker than wine, and his teeth whiter than milk. ದ್ರಾಕ್ಷಾರಸದಿಂದ ಅವನ ಕಣ್ಣುಗಳು ಕೆಂಪಾಗಿರುವವು, ಹಾಲಿನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
13 Zebulun will dwell at the shore of the sea; he will become a haven for ships, and his border will be at Sidon. “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು, ಅವನಿಗೆ ಹಡಗುಗಳು ಸೇರುವ ರೇವೂ ಇರುವುದು. ಅವನ ಮೇರೆಯು ಸೀದೋನಿಗೆ ಮುಟ್ಟುವುದು.
14 Issachar is a strong donkey, crouching between the sheepfolds. “ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
15 He saw that a resting place was good and that the land was pleasant, so he bent his shoulder to the load and became a servant at forced labor. ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು.
16 Dan will judge his people as one of the tribes of Israel. “ದಾನನು ಇಸ್ರಾಯೇಲನ ಗೋತ್ರಗಳಲ್ಲಿ ಒಂದು ಗೋತ್ರವಾಗಿ ತನ್ನ ಜನರಿಗೆ ನ್ಯಾಯತೀರಿಸುವನು.
17 Dan will be a serpent in the road, a viper by the path, that bites the horse's heels so that his rider falls backward. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು.
18 I wait for your salvation, my Father. “ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.
19 Gad—raiders will raid him, but he will raid at their heels. “ಗಾದನ ಮೇಲೆ ಸೈನ್ಯವು ದಾಳಿಮಾಡುವುದು, ಕೊನೆಗೆ ಅವನೇ ಅವರನ್ನು ಓಡಿಸಿಬಿಡುವನು.
20 Asher's food will be rich, and he will yield royal delicacies. “ಆಶೇರನ ಆಹಾರವು ಕೊಬ್ಬಿದ ಆಹಾರವು. ಅವನು ಅರಸನಿಗೆ ಸವಿಯೂಟವನ್ನು ಕೊಡುವನು.
21 Naphtali is a doe let loose that bears beautiful fawns. “ನಫ್ತಾಲಿ ಬಿಡುಗಡೆ ಹೊಂದಿದ ಜಿಂಕೆ, ಅವನು ಮಾತುಗಳು ಸುಂದರ ಮಕ್ಕಳ ಮಾತುಗಳಂತೆ.
22 Joseph is a fruitful branch, a fruitful branch by a spring; his branches run over the wall. “ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ.
23 The archers bitterly attacked him, shot at him, and harassed him severely. ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.
24 Yet his bow remained unmoved; his arms were made agile by the hands of the Mighty One of Jacob—our Father—from there comes the Shepherd, the Stone of Israel. ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.
25 By the God of your father who will help you, by El Shaddai—the Almighty, our Father—who will bless you with blessings of heaven above, blessings of the deep that crouches beneath, blessings of the breasts and of the womb. ಇದಕ್ಕೆ ಕಾರಣ ನಿನಗೆ ಸಹಾಯ ಮಾಡುವ ನಿನ್ನ ಪಿತೃಗಳ ದೇವರು; ನಿನ್ನನ್ನು ಸರ್ವಶಕ್ತರಾದ ದೇವರು ಆಶೀರ್ವದಿಸಲಿ. ಆ ಆಶೀರ್ವಾದಗಳು ಪರಲೋಕದವುಗಳು. ಆ ಆಶೀರ್ವಾದಗಳು ಕೆಳಗಿನಾಳದಲ್ಲಿರುವವುಗಳು. ಅವು ಎದೆಯ ಹಾಗೂ ಗರ್ಭದ ಆಶೀರ್ವಾದಗಳು.
26 The blessings of your father are mighty beyond the blessings of my ancestors, reaching to the riches of the everlasting hills. May they be on the head of Joseph, and on the brow of him who was set apart from his brothers. ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ.
27 Benjamin is a ravenous wolf, in the morning devouring the prey and at evening dividing the spoil." “ಬೆನ್ಯಾಮೀನನು ಕ್ರೂರವಾದ ತೋಳದಂತಿದ್ದಾನೆ. ಬೆಳಿಗ್ಗೆ ತಿನ್ನುತ್ತಾನೆ, ಸಂಜೆ ಕೊಳ್ಳೆಯನ್ನು ಹಂಚಿಕೊಳ್ಳುತ್ತಾನೆ.”
28 All these are the twelve tribes of Israel; this is what their father said as he blessed them, each with the blessing fitting him. ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
29 He commanded them: "I am being gathered to my people. Bury me with my fathers in the cave in Ephron the Hittite's field, ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ
30 in the cave in the field at Machpelah, east of Mamre in Canaan, which Abraham bought along with the field from Ephron the Hittite as a burial place. ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲದಲ್ಲಿರುವಂಥ ಅಬ್ರಹಾಮನು, ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಳಿರಿ.
31 There they buried Abraham and Sarah his wife; there they buried Isaac and Rebekah his wife; and there I buried Leah, ಅಲ್ಲಿ ಅಬ್ರಹಾಮನನ್ನೂ, ಅವನ ಹೆಂಡತಿ ಸಾರಳನ್ನೂ ಹೂಳಿದರು. ಅಲ್ಲಿ ಇಸಾಕನನ್ನೂ, ಅವನ ಹೆಂಡತಿ ರೆಬೆಕ್ಕಳನ್ನೂ ಹೂಳಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಳಿದೆನು.
32 the field and the cave that is in it were bought from the Hittites. ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಕೊಂಡುಕೊಂಡದ್ದು,” ಎಂದನು.
33 Jacob finished commanding his sons, drew his feet into the bed, breathed his last, and was gathered to his people." ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]